More

    ಬೇಸಿಗೇಲಿ ಕುಡಿವ ನೀರು ಪೂರೈಕೆಗೆ ಆದ್ಯತೆ: ಕೆಚ್ಚೇನಹಳ್ಳಿ ಗ್ರಾಪಂ ಸಾಮಾನ್ಯಸಭೆ ನಿರ್ಣಯ

    ಜಗಳೂರು: ಬೇಸಿಗೆಯಲ್ಲಿ ಗ್ರಾಮಗಳಲ್ಲಿ ಕುಡಿವ ನೀರಿಗೆ ಸಮಸ್ಯೆಯಾಗದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲು ವಿದ್ಯುತ್ ಬಿಲ್ ಪಾವತಿ ಹಾಗೂ ಚರಂಡಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು, 18.03.241 ಲಕ್ಷ ರೂ. ಮೀಸಲಿಡಲಾಗಿದೆ ಎಂದು ಅಧ್ಯಕ್ಷ ಕೆ.ಎಂ.ರವಿ ಹೇಳಿದರು.

    ತಾಲೂಕಿನ ಕೆಚ್ಚೇನಹಳ್ಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ಹೊಸ ಕೊಳವೆಬಾವಿ ಕೊರೆಯುವುದು, ಮೋಟರ್ ಪಂಪ್‌ಸೆಟ್ ಖರೀದಿ, ಟ್ಯಾಂಕರ್ ಮೂಲಕ ನೀರು ಪೂರೈಕೆ, ಪೈಪ್‌ಲೈನ್ ಕಾಮಗಾರಿ, ಗ್ರಾಮಗಳಲ್ಲಿ ಚರಂಡಿಗಳ ನೈರ್ಮಲ್ಯೀಕರಣ ಮಾಡಲು ಉದ್ದೇಶಿಸಲಾಗಿದೆ ಎಂದರು.

    ಬೀದಿ ದೀಪ, ಚರಂಡಿ ಸ್ವಚ್ಛತೆ, ಕೊಳವೆಬಾವಿ ಕೊರೆಸಿದ್ದು, ಕುಡಿವ ನೀರಿಗೆ 14 ಲಕ್ಷ ರೂ. ಪಿಡಿಒ ವಾಸು ಅವರ ಅವಯಲ್ಲಿ ಖರ್ಚು ಮಾಡಲಾಗಿದೆ. ಉಳಿದ ಹಣವನ್ನು ನೈರ್ಮಲ್ಯೀಕರಣಕ್ಕೆ ಮೀಸಲಿಡಲಾಗಿದೆ ಎಂದು ಪಿಡಿಒ ಸವಿತಾಬಾಯಿ ಮಾಹಿತಿ ನೀಡಿದರು.

    ವಿವಿಧ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಿಕೊಂಡು ವರ್ಷವಾದರೂ ಇನ್ನೂ ಬಿಲ್ ಪಾವತಿಯಾಗಿಲ್ಲ. ಕಾಮಗಾರಿಗಳು ನನೆಗುದಿಗೆ ಬಿದ್ದಿವೆ. ಇದರಿಂದ ತುಂಬ ಸಮಸ್ಯೆಯಾಗಿದೆ. ಹಣ ಬಿಡುಗಡೆ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿಕೊಂಡರು.

    ಬಸವ ವಸತಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ, ಪಿಎಂಎವೈ (ಗ್ರಾಮೀಣ) ವಸತಿ ಯೋಜನೆಗಳಿದ್ದು, ಇದರಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಯೋಜನೆ ರಾಜ್ಯಾದ್ಯಂತ ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ ಎಂದು ಕಾರ್ಯದರ್ಶಿ ಜಯ್ಯಣ್ಣ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts