17.8 C
Bengaluru
Wednesday, January 22, 2020

ಬೇಸಿಗೆಯಲ್ಲಾಗದಿರಲಿ ಕುಡಿವ ನೀರಿನ ತೊಂದರೆ, ಜಿಪಂ ಸಾಮಾನ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಅಧ್ಯಕ್ಷ ವಿಶ್ವನಾಥರಡ್ಡಿ ಸೂಚನೆ

Latest News

ಕರ್ನಾಟಕ ಕುಸ್ತಿ ಹಬ್ಬಫೆ. 15ರಿಂದ

ಧಾರವಾಡ: ಫೆ. 15ರಿಂದ 18ರವರೆಗೆ ನಗರದಲ್ಲಿ ಕರ್ನಾಟಕ ಕುಸ್ತಿ ಹಬ್ಬ ಆಯೋಜಿಸಲಾಗುವುದು. ಅಂತಾರಾಷ್ಟ್ರೀಯ ಕುಸ್ತಿಪಟುಗಳು ಸೇರಿ ಸುಮಾರು 2,000ಕ್ಕೂ ಹೆಚ್ಚು ಕುಸ್ತಿಪಟುಗಳು, ತರಬೇತಿದಾರರು...

ಊರೆಲ್ಲ ಕೊಳ್ಳೆ ಹೊಡೆದ ಮೇಲೆ…

ಲಕ್ಷ್ಮೇಶ್ವರ: ‘ಊರೆಲ್ಲ ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಮುಚ್ಚಿದರು’ ಎಂಬಂತೆ ರೈತರೆಲ್ಲ ಮುಕ್ತ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಶೇಂಗಾ ಮಾರಾಟ ಮಾಡಿದ...

ಮುರುಘಾಮಠದ ಕಾರ್ಯ ನಾಡಿಗೆ ಮಾದರಿ

ಧಾರವಾಡ: ಜ್ಞಾನ, ದಾಸೋಹ ಸೇವೆಯಲ್ಲಿ ಮುರುಘಾಮಠದ ಮೃತ್ಯುಂಜಯ ಅಪ್ಪಗಳ ಹಾಗೂ ಮಹಾಂತಪ್ಪಗಳ ಕೊಡುಗೆ ಸ್ಮರಣೀಯ. ಅವರ ಆಶಯದಂತೆ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಶ್ರೀಮಠವನ್ನು...

ಶರಣರಿಂದ ಸಾಮಾಜಿಕ ನ್ಯಾಯ

ಬ್ಯಾಡಗಿ: 12ನೇ ಶತಮಾನದಿಂದಲೂ ಶಿವಶರಣರು ಸಾಮಾಜಿಕ ಮೌಢ್ಯತೆ ಹಾಗೂ ಧೋರಣೆಗಳ ವಿರುದ್ಧ ಹೋರಾಟ ನಡೆಸಿದ ಪರಿಣಾಮ ಸರ್ವರಿಗೂ ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದು...

ಗಾಳಿಪಟ ಉತ್ಸವಕ್ಕೆ ತೆರೆ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಪೋಷಿತ ಕ್ಷಮತಾ ಸೇವಾ ಸಂಸ್ಥೆ ಆಶ್ರಯದಲ್ಲಿ ನಗರದ ಕುಸುಗಲ್ಲ ರಸ್ತೆಯಲ್ಲಿ ಆಯೋಜಿಸಿದ್ದ ಎರಡು ದಿನಗಳ...

ಕೊಪ್ಪಳ: ಬೇಸಿಗೆ ವೇಳೆಗೆ ಜಿಲ್ಲೆಯಲ್ಲಿ ಕುಡಿವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸುವುದಲ್ಲದೇ ತೀರಾ ಅನಿವಾರ್ಯ ಇರುವ ಕಾಮಗಾರಿ ಮೊದಲು ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಜಿಪಂ ಅಧ್ಯಕ್ಷ ಎಚ್.ವಿಶ್ವನಾಥರಡ್ಡಿ ಸೂಚಿಸಿದರು.

ನಗರದ ಜಿಪಂ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಆರ್‌ಒ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಪ್ರತಿ ಬಾರಿ ಸಭೆಯಲ್ಲಿ ಸದಸ್ಯರು ಗಮನ ಸೆಳೆಯುತ್ತ ಬಂದಿದ್ದಾರೆ. ಆದರೂ ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಈ ಬಗ್ಗೆ ಸಿಇಒ 2-3 ಸಭೆ ನಡೆಸಿ, ತಿಳಿಸಿದ್ದಾರೆ. ಕಾಮಗಾರಿ ನಿರ್ವಹಣೆ ಬಗ್ಗೆ ಆಯಾ ಕ್ಷೇತ್ರದ ಸದಸ್ಯರ ಸಹಿ ಪಡೆಯುವಂತೆ ಸೂಚಿಸಲಾಗಿದೆ. ಆದರೂ ಸಮಸ್ಯೆ ಉಳಿದಿದ್ದು ಏಕೆ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಪಿಆರ್‌ಇಡಿ ಇಲಾಖೆ ಇಇ ರಂಗಯ್ಯ ಉತ್ತರಿಸಿ, ಆರ್‌ಒ ಘಟಕಗಳನ್ನು ದುರಸ್ತಿ ಮಾಡಿಸಿ, ಸದಸ್ಯರಿಗೆ ಮಾಹಿತಿ ನೀಡಿದ್ದೇವೆ ಎಂದರು.

ಸದಸ್ಯರಾದ ರಾಮಣ್ಣ ಚೌಡ್ಕಿ, ಗವಿಸಿದ್ದಪ್ಪ ಕರಡಿ, ಕೆಐಡಿಎಲ್‌ನಿಂದ ನಿರ್ಮಿತವಾದ ಘಟಕಗಳಲ್ಲಿ 4-5 ವರ್ಷವಾದರೂ ನೀರು ಬಂದಿಲ್ಲ. ಸದ್ಯ ಅವುಗಳನ್ನು ಗ್ರಾಪಂಗೆ ವಹಿಸಿದರೆ, ಖರ್ಚು ಮಾಡಿದ ಅನುದಾನಕ್ಕೆ ಯಾರು ಉತ್ತರದಾಯಿತ್ವ ಹೊರಬೇಕು ಎಂದು ತರಾಟೆ ತೆಗೆದುಕೊಂಡರು. ಸಿಇಒ ರಘುನಂದನ್ ಮೂರ್ತಿ ಉತ್ತರಿಸಿ, ಸರ್ಕಾರಿದಿಂದ ಸೂಚನೆ ಬಂದ ಹಿನ್ನೆಲೆಯಲ್ಲಿ ಗ್ರಾಪಂಗೆ ವಹಿಸುತ್ತಿದ್ದೇವೆ. ಆದರೆ, ದುರಸ್ತಿಗೆ ಅನುದಾನ ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಚಂಡೂರು ಹನುಮಂತಗೌಡ ಮಾತನಾಡಿ, ನಮ್ಮ ಕ್ಷೇತ್ರದಲ್ಲಿ ರೈತರಿಗೆ ಬೆಳೆವಿಮೆ ಬಂದಿಲ್ಲ ಯಾಕೆಂದು ಪ್ರಶ್ನಿಸಿದರು. ಕೃಷಿ ಇಲಾಖೆ ಜೆಡಿ ಶಬಾನಾ ಉತ್ತರಿಸಿ, 2016-17ರಲ್ಲಿ 17,723 ರೈತರ ಬ್ಯಾಂಕ್, ಆಧಾರ್ ಕಾರ್ಡ್ ಮಾಹಿತಿ ತಪ್ಪಾಗಿದ್ದ ಕಾರಣ ಹಣ ಬಂದಿಲ್ಲ. ಸದ್ಯ ಅದನ್ನು ಸರಿಪಿಡಿಸಿ ಕಳಿಸಿದ್ದು, 9,503 ರೈತರಿಗೆ 12.56 ಕೋಟಿ ರೂ. ಬಂದಿದೆ. ಉಳಿದವರಿಗೆ ಶೀಘ್ರ ಬರಲಿದೆ ಎಂದರು. ತಾಲೂಕುವಾರು ರೈತರ ಮಾಹಿತಿ ನೀಡುವಂತೆ ಅಧ್ಯಕ್ಷರು ಸೂಚಿಸಿದರು. ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಗೂಳಪ್ಪ ಹಲಗೇರಿ, ಡಿಎಸ್ ಎನ್.ಕೆ.ತೊರವಿ ಇತರರು ಇದ್ದರು.

ಕಾಮಗಾರಿ ಮಾಡದೆಯೆ ಬಿಲ್ ಎತ್ತುವಳಿ
ನವಲಿ ಜಿಪಂ ಕ್ಷೇತ್ರ ವ್ಯಾಪ್ತಿಯ ಜೀರಾಳ್ ಕಲ್ಗುಡಿ ಕ್ಯಾಂಪ್‌ನಲ್ಲಿ ನಮ್ಮ ಹೊಲ ನಮ್ಮ ದಾರಿ ಯೋಜನೆಯಡಿ 10 ಲಕ್ಷ ರೂ. ಬಿಲ್ ಮಾಡಲಾಗಿದೆ. ಆದರೆ, ಕಾಮಗಾರಿ ನಿರ್ವಹಿಸಿಲ್ಲ. ಈ ಬಗ್ಗೆ ಸಂಬಂಧಿಸಿದ ಜೆಇ ತಮ್ಮ ಗಮನಕ್ಕಿಲ್ಲದೆಯೆ, ಬಿಲ್ ಮಾಡಿಲಾಗಿದೆ ಎಂದು ಹಿಂಬರಹ ನೀಡಿದ್ದಾರೆ. ಪತ್ರಿಕೆಗಳಲ್ಲೂ ಈ ಬಗ್ಗೆ ವರದಿ ಬಂದಿವೆ. ಕಾನೂನು ಪ್ರಕಾರ ಐಪಿಸಿ 409ರಡಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕು ಎಂದು ಸದಸ್ಯೆ ಭಾಗ್ಯವತಿ ಎಂ.ಬಿ. ಆಗ್ರಹಿಸಿದರು. ಎಇಇ ನಾಗರಾಜ ಬಾಗೋಡಿ ಉತ್ತರಿಸಿ, ಕಾಮಗಾರಿ ಮಾಡಿರುವುದಾಗಿ ಸಮರ್ಥಿಸಿಕೊಂಡರು. ಈ ಬಗ್ಗೆ ಮೂರನೇ ವ್ಯಕ್ತಿಯಿಂದ ತನಿಖೆಗೆ ಆದೇಶಿಸಿದ್ದು, ವರದಿ ಆಧರಿಸಿ ಕ್ರಮ ಕೈಗೊಳ್ಳುವುದಾಗಿ ಸಿಇಒ ಹಾಗೂ ಅಧ್ಯಕ್ಷರು ಭರವಸೆ ನೀಡಿದರು.

ಅಧಿಕಾರಿ ಹೆಸರು ಗೊತ್ತಿಲ್ಲ
ಅಂಗನವಾಡಿ ಕಟ್ಟಡ ಕಾಮಗಾರಿ ಬಗ್ಗೆ ಸದಸ್ಯರು ಕೇಳಿದ ಪ್ರಶ್ನೆಗೆ ಕುಷ್ಟಗಿ ಪಿಆರ್‌ಇಡಿ ಎಇಇ ಶಂಖರ್ ಮಳಗಿ ತಮ್ಮಲ್ಲಿ ಕಾಮಗಾರಿ ಬಾಕಿ ಇಲ್ಲ ಎಂದರು. ನಿಮ್ಮ ಜೆಇ ಕೇಳಿ ಎಂದರೆ, ಅವರ ಹೆಸರು ಗೊತ್ತಿಲ್ಲ ಎನ್ನುವ ಮೂಲಕ ಅಧಿಕಾರಿ ನಗೆಪಾಟಲಗೀಡಾದರು. ಅಲ್ಲದೇ, ಕುಡಿವ ನೀರು ಕಾಮಗಾರಿ ಸೇರಿ ವಿವಿಧ ಇಲಾಖೆ ಕೈಗೊಂಡ ಕಾಮಗಾರಿಗಳ ಬಗ್ಗೆ ವಿಸ್ತೃತ ವರದಿ ನೀಡುವಂತೆ ಈ ಸಭೆಯಲ್ಲೂ ಅಧ್ಯಕ್ಷರು ಹಾಗೂ ಸದಸ್ಯರು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು. ಅಧಿಕಾರಿಗಳು ಎಂದಿನಂತೆ ಸಭೆ ಬಳಿಕ ಕೊಡುವುದಾಗಿ ಹೇಳಿದರು. ಪ್ರತಿ ಬಾರಿಯೂ ಇದೇ ವರ್ತನೆ ಪುನಾರಾವರ್ತನೆಯಾಗುತ್ತಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸದಸ್ಯರು ತರಾಟೆ ತೆಗೆದುಕೊಂಡರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...