More

    ದೇವಾಲಯಗಳಲ್ಲಿ ಭಕ್ತರಿಗೆ ನೀರು, ಪೆಂಡಾಲ್ ವ್ಯವಸ್ಥೆ

    ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ದೇವಾಲಯಗಳಿಗೆ ಬರುವ ಭಕ್ತರಿಗೆ ಬಿಸಿಲಿನಿಂದ ಆಗುವ ತೊಂದರೆ ತಪ್ಪಿಸಲು ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಆವರಣದಲ್ಲಿ ಪೆಂಡಾಲ್ ಹಾಕಿ, ಸೂಕ್ತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಇಲಾಖೆ ಸೂಚನೆ ನೀಡಿದೆ.

    ಈ ಸಂಬಂಧ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಶಾಲಾ ಮತ್ತು ಕಾಲೇಜುಗಳ ರಜೆ ಹಿನ್ನೆಲೆಯಲ್ಲಿ ‘ಶಕ್ತಿ’ ಯೋಜನೆಯನ್ನು ಬಳಸಿಕೊಂಡು ದೂರದ ಊರುಗಳಿಂದ, ಜಿಲ್ಲೆಗಳಿಂದ ಮಹಿಳೆಯರು ಮಕ್ಕಳೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಗಳಿಗೆ ಆಗಮಿಸುವ ಸಾಧ್ಯತೆಯಿದೆ. ಹೊರ ರಾಜ್ಯ ಹಾಗೂ ಹೊರ ದೇಶಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ದೇವಾಲಯಕ್ಕೆ ಭಕ್ತರು ಆಗಮಿಸಲಿದ್ದಾರೆ. ಈ ವೇಳೆ ಅಗತ್ಯ ಸೌಲಭ್ಯ ಕಲ್ಪಿಸುವಂತೆ ತಿಳಿಸಲಾಗಿದೆ.

    ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ನಿರ್ದೇಶನದ ಮೇರೆಗೆ, ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಸಾಲಿನಲ್ಲಿ ಸಾಗಲು ಹಾಗೂ ವಿಶ್ರಮಿಸಿಕೊಳ್ಳಲು ಸೂಕ್ತ ನೆರಳಿಗೆ ಪೆಂಡಾಲ್ ಹಾಗೂ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ಇದಕ್ಕಾಗಿ ದಾನಿಗಳು ಮುಂದೆ ಬಂದಲ್ಲಿ ಅವರಿಗೆ ಅವಕಾಶ ಮಾಡಿಕೊಡಬೇಕು. ದಾನಿಗಳು ಬಾರದಿದ್ದಲ್ಲಿ ದೇವಾಲಯದ ನಿಧಿಯಿಂದಲೇ ಅಗತ್ಯ ವೆಚ್ಚ ಭರಿಸುವಂತೆ ಸೂಚಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts