ಮಕ್ಕಳ ಬೇಸಿಗೆ ರಂಗ ತರಬೇತಿ ಶಿಬಿರ ಉದ್ಘಾಟನೆ ಇಂದು

YLP DRAMA
Published on

ಕಲಬುರಗಿ:ಕಲಬುರಗಿ ರಂಗಾಯಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 26 ರಂದು ಶನಿವಾರ ಮಧ್ಯಾಹ್ನ 3 ಗಂಟೆಗೆ ಕಲಬುರಗಿ ರಂಗಾಯಣದ ಸಭಾಂಗಣದಲ್ಲಿ ಮಕ್ಕಳ ಹಬ್ಬ-2025 ಬೇಸಿಗೆ ರಂಗ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.

ಕಲಬುರಗಿ ಮಕ್ಕಳ ಸಾಹಿತಿ ಎ.ಕೆ.ರಾಮೇಶ್ವರ ಶಿಬಿರವನ್ನು ಉದ್ಘಾಟಿಸುವರು. ರಂಗಾಯಣದ ನಿರ್ದೇಶಕಿ ಸುಜಾತಾ ಜಂಗಮಶೆಟ್ಟಿ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಲಬುರಗಿ ವಿಭಾಗದ ಜಂಟಿ ನಿರ್ದೇಶಕ ಬಸವರಾಜ ಹೂಗಾರ, ಕಲಬುರಗಿ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕ ಸುಶೀಲಕುಮಾರ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜಕುಮಾರ ರಾಠೋಡ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರ ಅವರು ಅವರು ಮುಖ್ಯ ಅತಿಥಿಗಳಾಗಿ ಆಗಮಿಸುವರು.

ಶಿಬಿರದ ನಿರ್ದೇಶಕ ರಾಜಕುಮಾರ್ ಎಸ್.ಕೆ. ಸೇರಿದಂತೆ ಸಂಪನ್ಮೂಲ ವ್ಯಕ್ತಿಗಳಾಗಿ ಪ್ರಕಾಶ ಪೂಜಾರಿ, ಸಮೀರ ಸುಬೇದಾರ್, ಭಾಗ್ಯಶ್ರೀ ಬಿ. ಪಾಳಾ, ಅಂಬಿಕಾ ಎಸ್.ಟಿ., ಹಣಮಂತ ಲಕ್ಷö್ಮಣ, ಅಕ್ಷತಾ ಕುಲಕರ್ಣಿ ಉಪಸ್ಥಿತರಿರುವರು. ಬೀದರಿನ ತುಕಾರಾಮ ಬೊಲೆ ಅವರಿಂದ ಜಾನಪದ ಜಾದೂ ಕಾರ್ಯಕ್ರಮ ನಡೆಯಲಿದೆ. ಇದೇ ಸಂದರ್ಭದಲ್ಲಿ ಮಕ್ಕಳಿಂದ ಸಂಗೀತ ಮತ್ತು ನೃತ್ಯ ಪ್ರದರ್ಶನ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net