ಬೇಸಿಗೆ ರಜೆಯಲ್ಲಿ ಮಕ್ಕಳಿಗೆ ಬಿಸಿಯೂಟ

ಸವದತ್ತಿ: ಸವದತ್ತಿ ತಾಲೂಕನ್ನು ಸರ್ಕಾರದ ಆದೇಶದ ಮೇರೆಗೆ ಬರಗಾಲ ಪೀಡಿತ ತಾಲೂಕು ಎಂದು ಘೋಷಿಸಿದೆ. ಆದ್ದರಿಂದ ಬೇಸಿಗೆ ರಜೆ ಅವಧಿಯಲ್ಲಿ 1ರಿಂದ 9ನೇ ತರಗತಿವರೆಗೆ ತಾಲೂಕಿನ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಬಿಸಿಯೂಟ ನಿರಂತರವಾಗಿ ನೀಡಲಾಗುವುದು ಎಂದು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಫ್.ಯು.ಪೂಜಾರ ಹೇಳಿದ್ದಾರೆ.

ಪಟ್ಟಣದ ಬಿಆರ್‌ಸಿ ಕೇಂದ್ರದಲ್ಲಿ ನಡೆದ ತಾಲೂಕಿನ ಸಿಆರ್‌ಪಿಗಳ ಸಭೆಯಲ್ಲಿ ಅವರು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ಪೆಟ್ಲೂರ ಮಾತನಾಡಿ, ಬಿಸಿಯೂಟ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು. ಕ್ಷೇತ್ರ ಸಮನ್ವಯ ಅಧಿಕಾರಿ ಎಂ.ಬಿ.ಬಳಿಗಾರ ಇತರರು ಇದ್ದರು.