More

    ಈ ಬಾರಿ ಶಿಕ್ಷಣ ಸಂಸ್ಥೆಗಳಿಗೆ ಬೇಸಿಗೆ ರಜೆ ಮೊಟಕು; ಡಿಸಿಎಂ ಅಶ್ವತ್ಥನಾರಾಯಣ್​ ಮಾಹಿತಿ

    ಬೆಂಗಳೂರು: ರಾಜ್ಯದಲ್ಲಿ ಸಾಮಾನ್ಯವಾಗಿ ಶಾಲಾ-ಕಾಲೇಜುಗಳಿಗೆ ಜೂನ್​ 1 ರಂದು ನೂತನ ಶೈಕ್ಷಣಿಕ ವರ್ಷ ಆರಂಭವಾಗುತ್ತದೆ. ಆದರೆ, ಈ ಬಾರಿ ಕೋವಿಡ್​ ಸಂಕಷ್ಟದಿಂದಾಗಿ ಶೈಕ್ಷಣಿಕ ಚಟುವಟಿಕೆಗಳಿಗೆ ಭಾರಿ ಹಿನ್ನಡೆ ಉಂಟಾಗಿದೆ. ಹೀಗಾಗಿ ಈ ವರ್ಷ ಶಿಕ್ಷಣ ಸಂಸ್ಥೆಗಳಿಗೆ ಬೇಸಿಗೆ ರಜೆ ಮೊಟಕಾಗಲಿದೆ.

    ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್​. ಅಶ್ವತ್ಥ ನಾರಾಯಣ್​ ಈ ವಿಷಯ ತಿಳಿಸಿದ್ದಾರೆ. ಮಂಗಳವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಬಳಿಕ ಈ ಮಾಹಿತಿ ನೀಡಿದ್ದಾರೆ.

    ಇದನ್ನೂ ಓದಿ; ಪಿಯು ಮಟ್ಟದಿಂದಲೇ ಆನ್​ಲೈನ್​ ತರಗತಿ ಆರಂಭಿಸಿ; ಅಧಿಕಾರಿಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ 

    ಯುಜಿಸಿ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳನ್ನು ಜೂನ್​ 15 ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ರಾಜ್ಯದ 13 ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಕಾಲೇಜುಗಳು ಇಲ್ಲ. ಹೀಗಾಗಿ ಹೆಚ್ಚುವರಿ ಕಾಲೇಜುಗಳು ಇರುವ ಕ್ಷೇತ್ರಗಳಿಂದ 6 ಪ್ರಥಮ ದರ್ಜೆ ಕಾಲೇಜುಗಳನ್ನ ಈ ಭಾಗಗಳಿಗೆ ಸ್ಥಳಾಂತರ ಮಾಡಲಾಗುವುದು ಎಂದರು.

    ಬೆಂಗಳೂರಿನ ಡಾ. ಬಾಬಾಸಾಹೇಬ್ ಸ್ಕೂಲ್ ಆಫ್ ಎಕಾಮಿಕ್ಸ್ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಗೆ ಲಾಕ್​ಡೌನ್ ನಂತರದ ದಿನಗಳಲ್ಲಿ ಪ್ರಧಾನಮಂತ್ರಿಗಳನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ತಿಳಿಸಿದರು.

    ಇದನ್ನೂ ಓದಿ; ಸಾಮೂಹಿಕ ಪ್ರಾರ್ಥನೆ ಬಂದ್​, ಪಾಲಕರಿಗೂ ನಿರ್ಬಂಧ, ಮನೆಯೂಟ ಕಡ್ಡಾಯ… ಶಾಲಾರಂಭಕ್ಕೆ ಹೀಗಿರಲಿದೆಯೇ ಮಾರ್ಗಸೂಚಿ?

    ಯುವ ಸಬಲೀಕರಣ ಕೇಂದ್ರಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಪೋರ್ಟಲ್‍ಮೂಲಕ ಒಂದೇ ಸೂರಿನಡಿ ಸಮಗ್ರ ಮಾಹಿತಿಯನ್ನು ಒದಗಿಸಲಾಗುವುದು. ಈ ಕೇಂದ್ರಕ್ಕೆ ಪ್ರೌಢಶಾಲಾ ಮಟ್ಟದಿಂದಲೇ ವಿದ್ಯಾರ್ಥಿಗಳ ನೊಂದಣಿಯನ್ನು ಪ್ರಾರಂಭಿಸಲಾಗುವುದು. ಶಾಲೆ, ಕಾಲೇಜಿನಿಂದ ಹೊರಗುಳಿಯುವ ವಿದ್ಯಾರ್ಥಿಗಳನ್ನು ಈ ಮೂಲಕ ಪತ್ತೆ ಹಚ್ಚಲು ಸಾಧ್ಯವಾಗಲಿದೆ. ಕೈಗಾರಿಕೆಗಳನ್ನು ಇದರೊಂದಿಗೆ ಸಂಪರ್ಕಿಸಿ ವಿದ್ಯಾರ್ಥಿಗಳಿಗೆ ಇಂಟರ್ನಶಿಪ್​ ಹಾಗೂ ಉದ್ಯೋಗ ದೊರಕಿಸುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು.

    ಚಿಕ್ಕವರಿಗಿಲ್ಲ ಇನ್ನೂ ಮೂರು ತಿಂಗಳು ಶಾಲೆ, ದೊಡ್ಡವರಿಗೆ ಪಾಳಿ ಪದ್ಧತಿ; ಕೇಂದ್ರ ಸಿದ್ಧಪಡಿಸುತ್ತಿದೆ ಪುನರಾರಂಭದ ಮಾರ್ಗಸೂಚಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts