More

    ಸುಮ್ನೆ ಬೀದಿಗೆ ಬಂದ್ರೆ ಕ್ವಾರಂಟೈನ್, ಜಿಲ್ಲಾ ಉಸ್ತುವಾರಿ ಸಚಿವ ಅಶೋಕ್ ಎಚ್ಚರಿಕೆ ಬೈಲನರಸಾಪುರದಲ್ಲಿ ಪರಿಶೀಲನೆ

    ಹೊಸಕೋಟೆ: ಅನವಶ್ಯಕವಾಗಿ ವಾಹನಗಳಲ್ಲಿ ಓಡಾಡುವವರನ್ನು ಮುಲಾಜಿಲ್ಲದೆ 14 ದಿನಗಳ ಕ್ವಾರಂಟೈನ್‌ಗೆ ಕಳುಹಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್. ಅಶೋಕ್ ತಿಳಿಸಿದರು.

    ತಾಲೂಕಿನ ಬೈಲನರಸಾಪುರ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಂತರ ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದರು.

    ಲಾಕ್‌ಡೌನ್ ನಿಯಮ ಪಾಲಿಸದಿದ್ದರೆ ಕ್ವಾರಂಟೈನ್‌ಗೆ ಒಳಪಡಿಸುವುದು ಗ್ಯಾರಂಟಿ. ಈ ನಿಯಮವನ್ನು ರಾಜ್ಯದಲ್ಲಿ ಪ್ರಥಮ ಬಾರಿಗೆ ಹೊಸಕೋಟೆಯಿಂದಲೇ ಜಾರಿ ಮಾಡಲಾಗುತ್ತಿದೆ ಎಂದರು.

    ನಾಲ್ವರು ಕರೊನಾ ಸೋಂಕಿತರ ಪೈಕಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದ ಇಬ್ಬರ ವರದಿಯೂ ಸಹ ಸದ್ಯದಲ್ಲಿ ಬರಲಿದ್ದು, ಅವರೂ ಗುಣಮುಖರಾಗುವ ವಿಶ್ವಾಸವಿದೆ. ಈ ಮೂಲಕ ಹೊಸಕೋಟೆ ತಾಲೂಕು ಕರೊನಾ ಸೋಂಕುಮುಕ್ತವಾಗಿ ಹಸಿರು ವಲಯವಾಗಿ ಬದಲಾಗಲಿದೆ ಎಂದರು.

    ರಾಜ್ಯಾದ್ಯಂತ ಉಪನೋಂದಣಿ ಇಲಾಖೆ ಕಾರ್ಯ ನಿರ್ವಹಣೆಗೆ ಅನುವು ಮಾಡಿದ್ದು, ಅಧಿಕಾರಿಗಳೊಂದಿಗೆ ಚರ್ಚಿಸಿ ಜನಸಂದಣಿ ಹೆಚ್ಚದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.

    ರಾಜ್ಯದಲ್ಲಿ ಅತಿ ಹೆಚ್ಚು ಕಾರ್ಖಾನೆ ಹೊಂದಿರುವ ಪ್ರದೇಶಗಳಲ್ಲಿ ಹೊಸಕೋಟೆಯೂ ಒಂದಾಗಿದ್ದು, ಈ ಭಾಗದಲ್ಲಿ ಹಂತ ಹಂತವಾಗಿ ಲಾಕ್‌ಡೌನ್ ಸಡಿಲಗೊಳಿಸಲಾಗುವುದು ಎಂದರು.

    ತಹಸೀಲ್ದಾರ್ ಗೀತಾ, ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜುನಾಥ್, ಡಿವೈಎಸ್‌ಪಿ ನಿಂಗಪ್ಪ ಬಸಪ್ಪ ಸಕ್ರಿ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts