More

    ಲಸಿಕೆ ನೀಡಲು ಕೇಂದ್ರ, ರಾಜ್ಯ ಸರ್ಕಾರ ವಿಫಲ: ಸುಂದರೇಶ್

    ಶಿವಮೊಗ್ಗ: ರಾಜ್ಯ ಸರ್ಕಾರ ಲಸಿಕೆ ನೀಡುವುದಕ್ಕಿಂತ ಲಾಕ್‌ಡೌನ್ ಬಗ್ಗೆಯೇ ಹೆಚ್ಚು ಕಾಳಜಿ ವಹಿಸುತ್ತಿದೆ. ಕೇವಲ ಲಾಕ್‌ಡೌನ್ ಮಾಡುವುದರಿಂದ ಸೋಂಕು ನಿಯಂತ್ರಣ ಸಾಧ್ಯವಿಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್.ಸುಂದರೇಶ್ ವಾಗ್ದಾಳಿ ನಡೆಸಿದರು.
    ಕರೊನಾ ನಿಯಂತ್ರಣಕ್ಕೆ ಯಾವುದೇ ಕ್ರಮ ಕೈಗೊಳ್ಳದೆ ಹಾಗೂ ಲಸಿಕೆ ನೀಡದೆ ಜನರಿಗೆ ವಂಚನೆ ಮಾಡುತ್ತಿವೆ. ಜನರಿಗೆ ಲಸಿಕೆ ನೀಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಅದರ ವಿರುದ್ಧ ಕಾಂಗ್ರೆಸ್ ತನ್ನ ಹೋರಾಟ ಮುಂದುವರಿಸುತ್ತದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಪ್ರಧಾನಿ ನರೇಂದ್ರ ಮೋದಿ ಅವರು ಸ್ವಂತ ಲಾಭಕ್ಕಾಗಿ ದೇಶದ ಜನರನ್ನು ಬಲಿ ಕೊಟ್ಟಿದ್ದಾರೆ. ಇದುವರೆಗೂ ಶೇ.3.17ರಷ್ಟು ಮಾತ್ರ ಲಸಿಕೆ ನೀಡಲಾಗಿದೆ. ಮೊದಲ ಹಂತದಲ್ಲಿ 20 ಕೋಟಿ ಮತ್ತು 2ನೇ ಹಂತದಲ್ಲಿ 4.37 ಕೋಟಿ ಜನರಿಗೆ ಮಾತ್ರ ಲಸಿಕೆ ನೀಡಲಾಗಿದೆ. 136 ಕೋಟಿ ಇರುವ ದೇಶಕ್ಕೆ ಇದು ಸಾಕಾ ಎಂದು ಪ್ರಶ್ನಿಸಿದರು.
    ಕೇಂದ್ರ ಸರ್ಕಾರ 8 ಕೋಟಿ ಲಸಿಕೆಯನ್ನು ಹೊರದೇಶಗಳಿಗೆ ರಫ್ತು ಮಾಡಿದೆ. ದೇಶದ ಪ್ರತಿ ಪ್ರಜೆಗೂ ಉಚಿತವಾಗಿ ಲಸಿಕೆ ನೀಡಬೇಕು. ಆದರೆ ಲಸಿಕೆ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿ ಅನೇಕ ಜನರ ಸಾವಿಗೆ ಕಾರಣವಾಗಿದೆ. ಹಾಗಾಗಿ ಇದೊಂದು ಮಾನವೀಯತೆ ಇಲ್ಲದ ಸರ್ಕಾರ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
    ಲಸಿಕೆ ಗೊಂದಲು ಕುರಿತು ಸುಪ್ರೀಂಕೋರ್ಟ್ ಕೂಡ ಹಲವು ಬಾರಿ ಕೇಂದ್ರಕ್ಕೆ ಎಚ್ಚರಿಕೆ ನೀಡಿದೆ. ಪ್ರತಿದಿನ ಕೊನೆಪಕ್ಷ ದೇಶದಲ್ಲಿ 1 ಕೋಟಿ ಜನರಿಗಾದರೂ ಲಸಿಕೆ ಹಾಕಬೇಕಾಗಿದೆ. ಒಟ್ಟಾರೆ ಇನ್ನು 300 ಕೋಟಿ ಡೋಸ್ ಲಸಿಕೆ ಬೇಕಾಗಿದ್ದು, ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಗಂಭೀರವಾಗಿ ಚಿಂತನೆ ನಡೆಸಬೇಕಿದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts