More

    ಸುನೀಲ್ ಬೋಸ್ ಗೆಲುವಿಗೆ ಶ್ರಮಿಸಲು ಕರೆ

    ಚಾಮರಾಜನಗರ: ವಿಧಾನಸಭಾ ಕ್ಷೇತ್ರದಲ್ಲಿ 15 ಸಾವಿರ ಮತಗಳ ಅಂತರದಿಂದ ಲೀಡ್ ಕೊಡಿಸುವುದರ ಮೂಲಕ ಪಕ್ಷದ ಅಭ್ಯರ್ಥಿ ಸುನೀಲ್ ಬೋಸ್ ಅವರನ್ನು ಗೆಲ್ಲಿಸಲು ಪ್ರತಿಯೊಬ್ಬರೂ ಬೂತ್ ಮಟ್ಟದಲ್ಲಿ ಸಕ್ರೀಯವಾಗಿ ಕಾರ್ಯನಿರ್ವಹಿಸಬೇಕಿದೆ ಎಂದು ಮಾಜಿ ಶಾಸಕ ಆರ್.ನರೇಂದ್ರ ತಿಳಿಸಿದರು.


    ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಚಿಕ್ಕಮಾಲಾಪುರ, ಲೊಕ್ಕನಹಳ್ಳಿ, ಪಿ.ಜಿ.ಪಾಳ್ಯ ಹಾಗೂ ಬೈಲೂರು ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಮತ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.


    ಕಳೆದ ವಿಧಾನಸಭೆ ಚುನಾವಣೆ ವೇಳೆ ನಮ್ಮ ಪಕ್ಷ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಾಗಿ ಜನರಿಗೆ ಭರವಸೆ ನೀಡಿತ್ತು. ಈ ವೇಳೆ ಬಿಜೆಪಿಗರು ಸುಳ್ಳಿನ ಭರವಸೆ ಎಂದು ಕೇಕೆ ಹಾಕುತ್ತಿದ್ದರು. ಆದರೆ ಅಧಿಕಾರಕ್ಕೆ ಬಂದ ಕೂಡಲೇ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದೆ.

    ಬಿಜೆಪಿಗೆ ತಕ್ಕ ಉತ್ತರ ನೀಡಿದೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ರೈತರು ಹಾಗೂ ಬಡವರಿಗೆ ಯಾವುದೇ ಉತ್ತಮ ಯೋಜನೆಯನ್ನು ಜಾರಿಗೆ ತಂದಿಲ್ಲ. ರೈತರ ಸಾಲ ಮನ್ನಾ ಮಾಡುವ ಬದಲು ಉಳ್ಳವರ ಸಾಲ ಮನ್ನಾ ಮಾಡಿದೆ. ಇತ್ತ ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರಿಗೆ ವರ್ಷಕ್ಕೆ 6 ಸಾವಿರ ರೂ ಸಹಾಯ ಧನ ನೀಡಿ ರಸಗೊಬ್ಬರ ಹಾಗೂ ಕ್ರಿಮಿನಾಶಕ ಔಷಧಗಳ ಬೆಲೆ ಏರಿಕೆ ಮಾಡಿ ಲೂಟಿ ಮಾಡುತ್ತಿದೆ. ಇನ್ನು ರಾಜ್ಯದಲ್ಲಿ ಬರಗಾಲ ತಲೆದೊರಿರುವುದರಿಂದ ಕೇಂದ್ರ ಸರ್ಕಾರ ಪರಿಹಾರ ಕೊಡಲು ಮಲತಾಯಿ ಧೋರಣೆ ತೋರುತ್ತಿದೆ.

    ಹಾಗಾಗಿ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ಬಗ್ಗೆ ಪ್ರತಿಯೊಬ್ಬರು ಮನದಟ್ಟು ಮಾಡಿಕೊಂಡು ಜನರಿಗೆ ಮನವರಿಕೆ ಮಾಡಿಕೊಡುವುದರ ಮೂಲಕ ಸುನೀಲ್ ಬೋಸ್ ಅವರನ್ನು ಗೆಲ್ಲಿಸಲು ಶ್ರಮಿಸಬೇಕು ಎಂದು ಕರೆ ನೀಡಿದರು.


    ಸಭೆಯಲ್ಲಿ ಪಪಂ ಸದಸ್ಯರಾದ ಗಿರೀಶ್, ಹರೀಶ್‌ಕುಮಾರ್, ಮಾಜಿ ಉಪಾಧ್ಯಕ್ಷ ಮಾದೇಶ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಂಡಯ್ಯನಪಾಳ್ಯ ಮಾದೇಶ್, ಗ್ರಾಪಂ ಸದಸ್ಯರಾದ ನಾಗಣ್ಣ, ಅಶೋಕ್‌ಕುಮಾರ್, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚೇತನ್ ದೊರೆರಾಜು, ಮುಖಂಡರಾದ ನಾಗೇಂದ್ರ, ಉದ್ದನೂರು ಸಿದ್ದರಾಜು, ಜಗದೀಶ್ ಹಾಗೂ ಇನ್ನಿತರರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts