Sunita Williams : ಸದ್ಯ ಇಡೀ ಜಗತ್ತು ಕಾತರದಿಂದ ಕಾಯುತ್ತಿರುವ ಒಂದು ವಿಷಯವೆಂದರೆ, ಅದು ಭಾರತೀಯ ಮೂಲದ ನಾಸಾ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಅವರು ಬಾಹ್ಯಾಕಾಶದಿಂದ ಸುರಕ್ಷಿತವಾಗಿ ಭೂಮಿಗೆ ಮರಳುವುದು.
ಹೌದು, ನಾಸಾದ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಮತ್ತು ಬಚ್ ವಿಲ್ಮೋರ್, ಸುಮಾರು 8 ತಿಂಗಳಿಗೂ ಅಧಿಕ ಸಮಯದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲೇ ಸಿಲುಕ್ಕಿದ್ದಾರೆ. ಕಳೆದ ವರ್ಷ ಜೂನ್ 5ರಂದು ಬೋಯಿಂಗ್ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣವನ್ನು ತಲುಪಿದರು. ಕೆಲಸ ಮುಗಿಸಿ ಒಂದೇ ವಾರದಲ್ಲಿ ಭೂಮಿಗೆ ಮರಳಬೇಕಿತ್ತು. ಆದಾಗ್ಯೂ, ಸ್ಟಾರ್‌ಲೈನರ್‌ನ ಪ್ರೊಪಲ್ಷನ್ ಸಿಸ್ಟಮ್‌ನ ಸಮಸ್ಯೆಯಿಂದಾಗಿ ಎಂಟು ದಿನಗಳ ಪ್ರವಾಸವನ್ನು ಹಲವಾರು ಬಾರಿ ವಿಸ್ತರಿಸಲಾಯಿತು. ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಾಗದ ಕಾರಣ, ಗಗನಯಾತ್ರಿಗಳನ್ನು ಬಾಹ್ಯಾಕಾಶದಲ್ಲೇ ಬಿಟ್ಟು ಸ್ಟಾರ್ಲೈನರ್ ಭೂಮಿಗೆ ಮರಳಿತು.
ಸುನೀತಾ ವಿಲಿಯಮ್ಸ್ ಮತ್ತು ಬಚ್ ವಿಲ್ಮೋರ್ ಅವರನ್ನು ಭೂಮಿಗೆ ಕರೆತರುವ ನಾಸಾದ ಪ್ರಯತ್ನಗಳು ಈವರೆಗೂ ಸಾಕಷ್ಟು ಬಾಗಿ ವಿಫಲವಾಗಿವೆ. ಆದರೀಗ ಸಿಹಿ ಸುದ್ದಿಯೊಂದು ಸಿಕ್ಕಿದೆ. ದೀರ್ಘ ಕಾಯುವಿಕೆ ಕೊನೆಗೊಳ್ಳಲಿದೆ. ಸುನಿತಾ ವಿಲಿಯಮ್ಸ್ ಮತ್ತು ಬಚ್ ವಿಲ್ಮೋರ್ ಅವರನ್ನು ಭೂಮಿಗೆ ಸುರಕ್ಷಿತವಾಗಿ ಮರಳಿ ಕರೆತರಲು ಕ್ಷಣಗಣನೆ ಆರಂಭವಾಗಿದೆ.
ಇದನ್ನೂ ಓದಿ: ನಡೆಯುವಾಗ ನಿಮಗೆ ಈ ಸಮಸ್ಯೆಗಳು ಕಾಡುತ್ತಿವೆಯೇ? ಸಕ್ಕರೆ ಕಾಯಿಲೆಯ ಲಕ್ಷಣ ಇರಬಹುದು ಎಚ್ಚರ! Walking
ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿದ್ದ ಸುನೀತಾ ವಿಲಿಯಮ್ಸ್ ಮತ್ತು ಬಚ್ ವಿಲ್ಮೋರ್ ಅವರನ್ನು ಮರಳಿ ಕರೆತರಲು ಉಡಾವಣೆ ಮಾಡಲಾದ ಕ್ರೂ ಡ್ರ್ಯಾಗನ್ (ಬಾಹ್ಯಾಕಾಶ ನೌಕೆ) ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಪ್ರವೇಶಿಸಿದ್ದು, ಡಾಕಿಂಗ್ ಪ್ರಕ್ರಿಯೆ ಇಂದು (ಮಾರ್ಚ್ 16) ಯಶಸ್ವಿಗೊಂಡಿದೆ. ಎಲ್ಲವೂ ಸರಿಯಾಗಿ ನಡೆದರೆ, ಇಬ್ಬರೂ ಮಾರ್ಚ್ 19ರಂದು ಭೂಮಿಗೆ ಮರಳಲಿದ್ದಾರೆ. ಮಾಹಿತಿಯ ಪ್ರಕಾರ, ಬಾಹ್ಯಾಕಾಶ ನೌಕೆ ಅಟ್ಲಾಂಟಿಕ್ ಸಾಗರದಲ್ಲಿ ಇಳಿಯುವ ಅವಕಾಶವಿದೆ ಎಂದು ಹೇಳಲಾಗುತ್ತಿದೆ.
ನಾಸಾ ಸಹಯೋಗದೊಂದಿಗೆ ಸ್ಪೇಸ್‌ಎಕ್ಸ್ ಕ್ರೂ-10 ಕಾರ್ಯಾಚರಣೆಯನ್ನು ಪ್ರಾರಂಭಿಸಿತು. ಕ್ರೂ ಡ್ರ್ಯಾಗನ್ ಕ್ಯಾಪ್ಸುಲ್ ಅನ್ನು ಫಾಲ್ಕನ್-9 ರಾಕೆಟ್ ಮೂಲಕ ಉಡಾವಣೆ ಮಾಡಲಾಯಿತು.
VIDEO | Visuals from the International Space Station.
NASA and SpaceX’s Crew-10 mission will dock with the ISS later today to bring back the astronauts Sunita Williams and Barry Wilmore. According to NASA, the docking process will begin at 11.30 pm EDT (9 am IST on March 16) and… pic.twitter.com/1RDEnRHeCO
— Press Trust of India (@PTI_News) March 16, 2025
ಡ್ರ್ಯಾಗನ್ ಬಾಹ್ಯಾಕಾಶ ನೌಕೆಯು ನಾಲ್ಕು ಹೊಸ ಗಗನಯಾತ್ರಿಗಳನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಕರೆದೊಯ್ದಿದೆ. ಇವರಲ್ಲಿ ನಾಸಾ ಕಮಾಂಡರ್ ಆನ್ ಮೆಕ್‌ಕ್ಲೈನ್, ಪೈಲಟ್ ಅಯರ್ಸ್, ಜಪಾನಿನ ಬಾಹ್ಯಾಕಾಶ ಸಂಸ್ಥೆ JAXA ಟಕುಯಾ ಒನಿಶಿ ಮತ್ತು ರಷ್ಯಾದ ಗಗನಯಾತ್ರಿ ಕಿರಿಲ್ ಪೆಸ್ಕೋವ್ ಸೇರಿದ್ದಾರೆ. ಸುನಿತಾ ವಿಲಿಯಮ್ಸ್ ಅವರು ಭೂಮಿಗೆ ಮರಳಲು ಕ್ಷಣಗಣನೆ ಆರಂಭವಾಗಿದ್ದು, ಅವರ ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಎಲ್ಲರು ಪ್ರಾರ್ಥಿಸುತ್ತಿದ್ದಾರೆ. (ಏಜೆನ್ಸೀಸ್)
ನಮ್ಮ ನಿಮ್ಮಂತೆ ಇರುವೆಗಳಿಗೂ ಪ್ರತ್ಯೇಕ ಸಾಮ್ರಾಜ್ಯವಿದೆಯೇ? ಇಲ್ಲಿದೆ ನೋಡಿ ಅಚ್ಚರಿಯ ಮಾಹಿತಿ… Ants