More

    ಮುಂಬೈಗೆ 278 ರನ್ ಟಾರ್ಗೆಟ್ ನೀಡಿದ ಸನ್​ರೈಸರ್ಸ್​: ಆರ್‌ಸಿಬಿ ಐಪಿಎಲ್‌ ದಾಖಲೆ ಮುರಿದ ಎಸ್​ಆರ್​ಎಚ್​​!​

    ಹೈದರಾಬಾದ್​: ಇಲ್ಲಿನ ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ಮುಂಬೈ ವಿರುದ್ಧದ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಐಪಿಎಲ್​ ಇತಿಹಾಸದಲ್ಲಿ ಅತ್ಯಂತ ಅಧಿಕ ರನ್​ ಗಳಿಸಿ ದಾಖಲೆ ನಿರ್ಮಿಸಿದೆ. ಈ ಮೂಲಕ ಆರ್​ಸಿಬಿ ಹೆಸರಲ್ಲಿದ್ದ ದಾಖಲೆಯನ್ನು ಸನ್​ರೈಸರ್ಸ್​ ತಂಡ ಬ್ರೇಕ್ ಮಾಡಿದೆ.

    ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ

    ಇಡೀ ಐಪಿಎಲ್‌ನಲ್ಲಿ 11 ವರ್ಷಗಳ ಹಿಂದೆ ಆರ್‌ಸಿಬಿ ನಿರ್ಮಿಸಿದ್ದ ಗರಿಷ್ಠ ಮೊತ್ತದ ದಾಖಲೆಯನ್ನು ಮುರಿಯುವಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಯಶಸ್ವಿಯಾಗಿದೆ. ಟಾಸ್​ ಗೆದ್ದುಕೊಂಡ ಮುಂಬೈ ಇಂಡಿಯನ್ಸ್​ ಬೌಲಿಂಗ್​ ಆಯ್ಕೆ ಮಾಡಿಕೊಂಡಿತು. ಸನ್​ರೈಸರ್ಸ್​ ಹೈದರಾಬಾದ್​​​ ಮೊದಲು ಬ್ಯಾಟಿಂಗ್​ ಮಾಡಿ ನಿಗದಿತ 20 ಓವರ್​ಗಳಲ್ಲಿ 278 ರನ್​ಗಳ ಬೃಹತ್​ ಟಾರ್ಗೆಟ್​ ಅನ್ನು ಮುಂಬೈಗೆ ನೀಡಿದೆ. ಬ್ಯಾಟಿಂಗ್ ಮಾಡಲು ಕ್ರೀಸ್​ಗೆ ಆಗಮಿಸಿದ ಹೈದರಾಬಾದ್ ತಂಡದ ಬ್ಯಾಟ್ಸ್​ಮನ್​ಗಳು ಭರ್ಜರಿ ಬ್ಯಾಟಿಂಗ್ ಮಾಡಿದರು.

    ಐಪಿಎಲ್‌ನ ಐದನೇ ಪಂದ್ಯದಲ್ಲಿ ಹೈದರಾಬಾದ್‌ನ ಬ್ಯಾಟ್ಸ್‌ಮನ್‌ಗಳು ಆಕ್ರಮಣಕಾರಿ ಪ್ರದರ್ಶನ ನೀಡಿ 20 ಓವರ್‌ಗಳಲ್ಲಿ ಮೂರು ವಿಕೆಟ್ ಕಳೆದುಕೊಂಡು 277 ರನ್ ಗಳಿಸಿದರು. ಹೈದರಾಬಾದ್ ಪರ ಟ್ರಾವಿಸ್ ಹೆಡ್ 62, ಅಭಿಷೇಕ್ ಶರ್ಮಾ 63, ಏಡನ್ ಮಾರ್ಕ್ರಾಮ್ 42 ಮತ್ತು ಹೆನ್ರಿಚ್ ಕ್ಲಾಸೆನ್ 80 ರನ್ ಗಳಿಸಿದರು. ಈ ಪಂದ್ಯದಲ್ಲಿ ಮಾರ್ಕ್ರಾಮ್ ಮತ್ತು ಕ್ಲಾಸೆನ್ ಅಜೇಯರಾಗಿ ಉಳಿದರು.

    ಆರ್​ಸಿಬಿ ದಾಖಲೆ ಸನ್‌ರೈಸರ್ಸ್‌ ಪಾಲು: ಬಲಿಷ್ಠ ಮುಂಬೈ ಇಂಡಿಯನ್ಸ್‌ ತಂಡದ ಬೌಲಿಂಗ್‌ಅನ್ನು ಚೆಂಡಾಡಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ ಆರ್‌ಸಿಬಿಯ ಅಪರೂಪದ ದಾಖಲೆಯನ್ನು ಮುರಿಯುವಲ್ಲಿ ಯಶಸ್ವಿಯಾಗಿದೆ. ಆರ್‌ಸಿಬಿ ತಂಡ 2013ರ ಏಪ್ರಿಲ್‌ 23 ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಪುಣೆ ವಾರಿಯರ್ಸ್‌ ತಂಡದ ವಿರುದ್ಧ 5 ವಿಕೆಟ್‌ಗೆ 263 ರನ್‌ ಬಾರಿಸಿದ್ದು ಈವರೆಗಿನ ಐಪಿಎಲ್‌ ದಾಖಲೆಯಾಗಿತ್ತು. ಇದೇ ಪಂದ್ಯದಲ್ಲಿ ಕ್ರಿಸ್‌ ಗೇಲ್‌, ಐಪಿಎಲ್‌ ದಾಖಲೆಯ 175 ರನ್‌ ಸಿಡಿಸಿದ್ದರು. ಈಗ ಈ ದಾಖಲೆ ಸನ್‌ರೈಸರ್ಸ್‌ ಪಾಲಾಗಿದೆ.

    ಮುಂಬೈ ಇಂಡಿಯನ್ಸ್‌ ಬೌಲಿಂಗ್‌ ವಿಭಾಗವನ್ನು ಮನಬಂದಂತೆ ದಂಡಿಸಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡ 3 ವಿಕೆಟ್‌ಗೆ 277 ರನ್‌ ಪೇರಿಸಿತು. ಇದು ಐಪಿಎಲ್‌ನಲ್ಲಿ ತಂಡವೊಂದರ ಗರಿಷ್ಠ ಮೊತ್ತ ಮಾತ್ರವಲ್ಲ, ವಿಶ್ವ ಟಿ20ಯಲ್ಲಿ ಮೂರನೇ ಗರಿಷ್ಠ ಮೊತ್ತ ಎನಿಸಿದೆ.

    ಎರಡನೇ ಇನ್ನಿಂಗ್ಸ್​ ಆರಂಭಿಸಲಿರುವ ಮೂಗುತಿ ಸುಂದರಿ ಸಾನಿಯಾ ಮಿರ್ಜಾ? ಹೈದರಾಬಾದ್​ನಲ್ಲಿ ಬಿಸಿ ಬಿಸಿ ಚರ್ಚೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts