More

    ಪ್ರಚೋದನಾಕಾರಿ ಭಾಷಣ ಆರೋಪ: ಕೆ.ಎಸ್​. ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲು

    ಶಿವಮೊಗ್ಗ: ಪ್ರಚೋದನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ವಿರುದ್ಧ ಸುಮೋಟೋ ಪ್ರಕರಣ ದಾಖಲಿಸಲಾಗಿದೆ.

    ಕಾಂಗ್ರೆಸ್​ ಸರ್ಕಾರದ ಹಿಂದೂ ವಿರೋಧಿ ಧೋರಣೆಯನ್ನು ಖಂಡಿಸಿ ಶಿವಮೊಗ್ಗದಲ್ಲಿ ನಿನ್ನೆ (ಅ.12) ನಡೆದ ಬಿಜೆಪಿಯ ಬೃಹತ್​ ಪ್ರತಿಭಟನಾ ಸಭೆಯಲ್ಲಿ ಈಶ್ವರಪ್ಪ ಅವರು ಪ್ರಚೋದನಕಾರಿ ಭಾಷಣ ಮಾಡಿರುವ ಆರೋಪ ಕೇಳಿಬಂದಿದೆ.

    ಈದ್​ ಮಿಲಾದ್​ ಸಂದರ್ಭದಲ್ಲಿ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟವನ್ನು ಮಥುರಾ ಪ್ಯಾರಡೈಸ್ ಹೋಟೆಲ್ ಮುಂಭಾಗ ನಿನ್ನೆ ಬಿಜೆಪಿ ಸಭೆ ನಡೆದಿತ್ತು. ಈ ವೇಳೆ ಮಾತನಾಡಿದ ಕೆ.ಎಸ್​. ಈಶ್ವರಪ್ಪ, ಹಿಂದೂ ಸಮಾಜ ಈವರೆಗೂ ಕಾನೂನನ್ನು ಕೈಗೆ ತೆಗೆದುಕೊಂಡಿಲ್ಲ. ಹಿಂದು ಕಾರ್ಯಕರ್ತ ಹರ್ಷನ ಕೊಲೆಯಾದಾಗ ನಾವೇನಾದರೂ ಲಾಂಗು, ಮಚ್ಚುಗಳನ್ನು ಹಿಡಿದುಕೊಂಡು ಮುಸಲ್ಮಾನರ ಬೀದಿಗಳಿಗೆ ಹೋಗಿದ್ದರೆ, ಮಾರಿ ಜಾತ್ರೆಯಲ್ಲಿ ಕುರಿ ಕಡಿದು ಹಾಕಿದಂಗೆ ಕಡಿದು ಹಾಕಿ ಬಿಡುತ್ತಿದ್ದೆವು ಎಂದು ಈಶ್ವರಪ್ಪ ಹೇಳಿಕೆ ನೀಡಿರುವ ಆರೋಪವಿದೆ.

    ಇದನ್ನೂ ಓದಿ: ಸಿಂಗಾಪುರ ಮಾದರಿಯಲ್ಲಿ ಬೆಣ್ಣೆನಗರಿ ರಚನೆ; ಕನಸಿನ ದಾವಣಗೆರೆ ಕಟ್ಟಲು ಡಿಜಿಟಲ್ ಟ್ವಿನ್ ಬಲ; ಸ್ಮಾರ್ಟ್​ಸಿಟಿ ಹೊಸ ಹೆಜ್ಜೆ

    ಯಾರೇ ಆಗಲಿ ಪ್ರಚೋದನಾಕಾರಿ ಹೇಳಿಕೆ ನೀಡಿದರೆ ಅಂಥವರ ವಿರುದ್ಧ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ಕ್ರಮ ಜರುಗಿಸಲು ಈ ಹಿಂದೆ ಹೈಕೋರ್ಟ್​ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಶಿವಮೊಗ್ಗದ ಜಯನಗರ ಪೋಲೀಸ್ ಠಾಣೆಯಲ್ಲಿ ಈಶ್ವರಪ್ಪ ಅವರ ವಿರುದ್ಧ 153ಎ ಹಾಗೂ 504 ಸೆಕ್ಷನ್ ಅಡಿಯಲ್ಲಿ ಸುಮೋಟೋ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    ಬಿಜೆಪಿ ಎಂದೂ ಮುಸ್ಲಿಂ ವಿರೋಧಿಯಲ್ಲ
    ನಿನ್ನೆ ನಡೆದ ಸಭೆಯಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಮಾತನಾಡಿ, ಬಿಜೆಪಿ ಎಂದೂ ಮುಸ್ಲಿಂ ವಿರೋಧಿಯಲ್ಲ. ತ್ರಿಬಲ್ ತಲಾಖ್ ರದ್ದುಪಡಿಸಿ ಮುಸ್ಲಿಂ ಹೆಣ್ಣುಮಕ್ಕಳಿಗೆ ನ್ಯಾಯ ಒದಗಿಸಿದ ಪಕ್ಷ ನಮ್ಮದು. ಉಚಿತ ಸೈಕಲ್, ಭಾಗ್ಯಲಕ್ಷ್ಮೀ ಮತ್ತು ಕಿಸಾನ್ ಸಮ್ಮಾನ್ ಯೋಜನೆ ಎಲ್ಲವನ್ನೂ ಮುಸ್ಲಿಂ ಬಾಂಧವರು ಪಡೆದಿದ್ದಾರೆ. ಇಲ್ಲೇ ಬೆಳೆದು, ಇಲ್ಲಿಯ ಅನ್ನ ತಿಂದು ಹೆತ್ತ ತಾಯಿ ಮೇಲೆ ಹಲ್ಲೆ ಮಾಡುವ ಷಡ್ಯಂತ್ರ ಮಾಡುತ್ತಿದ್ದಾರೆ. ರಾಗಿಗುಡ್ಡದ ಪ್ರಕರಣ ನ್ಯಾಯಾಂಗ ತನಿಖೆ ಆಗಬೇಕು. ಯುಎಪಿಐ ಅಡಿಯಲ್ಲಿ ಕೇಸ್ ದಾಖಲಿಸಬೇಕು. ರಾಷ್ಟ್ರ ರಕ್ಷಣೆ ಪ್ರಶ್ನೆ ಬಂದಾಗ ನಾವೆಲ್ಲ ಒಂದಾಗಬೇಕು ಎಂದು ಕರೆ ನೀಡಿದರು.

    ಕಾಂಗ್ರೆಸ್ ನಾಯಕರನ್ನೂ ಮಾಡಬೇಕಿದೆ ಗಡಿಪಾರು
    ಶಿವಮೊಗ್ಗದಲ್ಲಿ ಗುರುವಾರ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಬಿ.ವೈ. ವಿಜಯೇಂದ್ರ, ಹಿಂದೂ ಸಮಾಜ ಶಾಂತಿಯಿಂದ ಇದೆ ಎಂದರೆ ಅದು ದೌರ್ಬಲ್ಯವಲ್ಲ. ಈದ್ ಮಿಲಾದ್ ಮೆರವಣಿಗೆ ಸಂದರ್ಭದಲ್ಲಿ ಹಿಂದು ಅಮಾಯಕರ ಮೇಲೆ ದೌರ್ಜನ್ಯ ನಡೆದಿದೆ. ಮುಸ್ಲಿಮರ ತುಷ್ಟೀಕರಣಕ್ಕಾಗಿ ಹಿಂದುಗಳ ತಾಳ್ಮೆ ಪರೀಕ್ಷಿಸಬಾರದು. ಹಿಂದುಗಳ ಪರವಾಗಿದ್ದೇವೆ ಎಂದರೆ ಅಲ್ಪಸಂಖ್ಯಾತರ ವಿರೋಧಿಗಳಲ್ಲ ಎಂಬುದನ್ನೂ ಅರ್ಥ ಮಾಡಿಕೊಳ್ಳಬೇಕಿದೆ. ಕಾಂಗ್ರೆಸ್ ಅಮಾಯಕರನ್ನು ಬಂಧಿಸಿ ಕೇಸ್ ದಾಖಲಿಸುವ ಕೆಲಸ ಮಾಡುತ್ತಿದೆ. ಕಲ್ಲು ಹೊಡೆದವರನ್ನು ಅಮಾಯಕರೆಂದು ಹೇಳುತ್ತಿದೆ. ಈ ನಡವಳಿಕೆ ಬದಲಿಸಿಕೊಳ್ಳದಿದ್ದರೆ ರಸ್ತೆಯಲ್ಲಿ ಓಡಾಡಲು ಸಾಧ್ಯವಿಲ್ಲ. ಜನರೇ ಬಡಿಗೆ ಹಿಡಿದು ಬೀದಿಗಿಳಿಯುತ್ತಾರೆ ಎಂದು ಎಚ್ಚರಿಕೆ ನೀಡಿದರು.

    ಆರ್​ಡಿಪಿಆರ್​ಗೆ ಶಾಲಾಡಳಿತ: ಶಿಕ್ಷಣ ಇಲಾಖೆಯ 26 ಜವಾಬ್ದಾರಿ ಪಂಚಾಯತ್ ರಾಜ್ ಇಲಾಖೆಗೆ

    ಸಾಮೂಹಿಕ ನಾಯಕತ್ವ ಫಲ ಕೊಡುವುದೇ?; ಯಡಿಯೂರಪ್ಪ ಹಾದಿಯಲ್ಲಿ ರಾಜೆ, ಚೌಹಾಣ್, ರಮಣ್!

    ಆಪರೇಷನ್​ ಅಜಯ್​: ಯುದ್ಧ ಪೀಡಿತ ಇಸ್ರೇಲ್​ನಿಂದ ತವರಿಗೆ ಮರಳಿದ 212 ಭಾರತೀಯರು, ರಕ್ಷಣಾ ಕಾರ್ಯಾಚರಣೆ ಬಿರುಸು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts