

ಸಚಿವ ಸಂಪುಟದಲ್ಲಿ ತಾಯಿ-ಮಕ್ಕಳ ಆಸ್ಪತ್ರೆಗೆ ಅನುಮೋದನೆ
ಕಲಬುರಗಿ : ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಗರದಲ್ಲಿ ೪೦ ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡಕ್ಕೆ ಮಾರ್ಚ್ ತಿಂಗಳಲ್ಲಿ ಅಡಿಗಲ್ಲು ಹಾಕಲು ಮುಹೂರ್ತನಿಗದಿಪಡಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದರು.
. ನಗರದಲ್ಲಿ ೨೦೦ ಹಾಸಿಗೆವುಳ್ಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಹಳೆ ಜಿಲ್ಲಾಸ್ಪತ್ರೆ ಕಟ್ಟಡ ತೆರವುಗೊಳಿಸಿ, ಅಲ್ಲಿಯೇ ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ಮಾಣಕ್ಕೆ ಸಚಿವ ಸಂಪುಟದಿಂದ ಅನುಮೋದನೆ ಸಿಕ್ಕಿದೆ. ೧೨೬ ಕೋಟಿ ರೂ. ವೆಚ್ಚದ ಬೃಹತ್ ಸುಸಜ್ಜಿತ ಆಸ್ಪತ್ರೆ ತಲೆಯೆತ್ತಲಿದೆ. ಅಲ್ಲದೆ ೧೫ ಕೋಟಿ ರೂ. ವೆಚ್ಚದಲ್ಲಿ ಟ್ರಾಮ್ ಸೆಂಟರ್ ಹಿಂಬದಿಯಲ್ಲಿ ಪ್ರತ್ಯೇಕವಾಗಿ ಸುಟ್ಟ ಗಾಯ ಚಿಕಿತ್ಸಾ ಕೇಂದ್ರ ಸಹ ಸ್ಥಾಪನೆಗೆ ಸಚಿವ ಸಂಪುಟದಿಂದ ಅನುಮೋದನೆ ದೊರೆತಿದೆ. ಈ ನಿಟ್ಟಿನಲ್ಲಿ ಶೀಘ್ರದಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ಕಟ್ಟಡ ಕಾಮಗಾರಿಗೆ ಚಾಲನೆ ಸಿಗಲಿವೆ ಎಂದು ಮಾಹಿತಿ ನೀಡಿದರು.
. ಜಿಮ್ಸ್ ನಿರ್ದೇಶಕ ಡಾ. ಉಮೇಶ, ಜಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ. ಶಿವಕುಮಾರ ಸಿ.ಆರ್, ಡಾ. ಸತೀಶ ಮೇಳಕುಂದಿ, ಜಿಲ್ಲಾ ಶಸ್ತ್ರಜ್ಞ ಡಾ. ಅಂಬಾರಾಯ ರುದ್ರವಾಡಿ, ಸಹಾಯಕ ಆಡಳಿತಾಧಿಕಾರಿ ವೀರಣ್ಣ ಶಿವಪುರ ಮತ್ತಿತರರಿದ್ದರು.