ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ ಸೂಪರ್​ ಸ್ಟಾರ್ಸ್...

Rajanikath
Published on
ಚೆನ್ನೈ: ನಟ ಸೂಪರ್ ​ಸ್ಟಾರ್ ರಜನೀಕಾಂತ್ ತಮ್ಮ ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ರಜನೀಕಾಂತ್ ಮನೆ ಮಂದೆ ಸಾವಿರಾರು ಅಭಿಮಾನಿಗಳು ಸೇರಿದ್ದರು. ಈ ವೇಳೆ ಮನೆಯಿಂದ ಹೊರಬಂದು ರಜನೀಕಾಂತ್ ಅಭಿಮಾನಿಗಳತ್ತ ಕೈಬೀಸಿದ್ದಾರೆ. ನಂತರ ಶುಭಾಶಯ ತಿಳಿಸಿದ್ದಾರೆ.

ನಟ ಕಮಲ್ ಹಾಸನ್ ಟ್ವೀಟ್ವ ಮಾಡುವ ಮೂಲಕ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಕಮಲ್ ಹಾಸನ್ ಮಾಡಿರುವ ಟ್ವೀಟನ್ನು ರೀಟ್ವೀಟ್ ಮಾಡುವ ಮೂಲಕ ಅಭಿಮಾನಿಗಳು ಕೂಡಾ ಕಮಲ್​ ಹಾಸನ್​ಗೆ ಶುಭಾಶಯ ತಿಳಿಸಿದ್ದಾರೆ.

ಬಾಲಿವುಡ್ ನಟ ಅಮಿತಾಭ್ ಬಚ್ಚನ್ ಟ್ವಿಟರ್ ಮೂಲಕ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಟ್ವೀಟ್​ನಲ್ಲಿ ದೀಪಾವಳಿ ಹಬ್ಬ ಈ ವರ್ಷ ನಿಮಗೆ ಆರೋಗ್ಯ, ಸಂತೋಷ ಮತ್ತು ಪ್ರೀತಿಯನ್ನು ಹೇರಳವಾಗಿ ತರಲಿ. ನಿಮ್ಮೆಲ್ಲರಿಗೂ ಸುರಕ್ಷಿತ ಮತ್ತು ಸಂತೋಷದಾಯಕ ದೀಪಾವಳಿಯ ಶುಭಾಶಯಗಳು ಎಂದು ಬರೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net