More

    ಶ್ರೀ ಸೇವಾಲಾಲ ಜಯಂತಿ 15ರಂದು

    ಯಾದಗಿರಿ: ಸಂತ ಶ್ರೀ ಸೇವಾಲಾಲ ಜಯಂತ್ಯುತ್ಸವ 15ರಂದು ಬೆಳಗ್ಗೆ 11ಕ್ಕೆ ಜಿಲ್ಲಾಡಳಿತ ಭವನ ಆಡಿಟೋರಿಯಂನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ ತಿಳಿಸಿದರು.

    ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಂಜೆ ಪೂರ್ವಭಾವಿ ಸಭೆ ನಡೆಸಿದ ಅವರು, ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿ ಹಾಗೂ ಸರ್ಕಾರಿ, ಅನುದಾನಿತ, ಅನುದಾನರಹಿತ ಶಾಲಾ-ಕಾಲೇಜುಗಳಲ್ಲೂ ಶ್ರದ್ಧಾ, ಭಕ್ತಿಯೊಂದಿಗೆ ಸೇವಾಲಾಲ ಜಯಂತಿ ಕಡ್ಡಾಯವಾಗಿ ಆಚರಿಸಬೇಕು. ತಹಸೀಲ್ದಾರರು ತಾಲೂಕು ಮಟ್ಟದಲ್ಲಿ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಬೇಕೆಂದು ಸೂಚಿಸಿದರು.

    ಜಯಂತಿ ಮತ್ತು ಮೆರವಣಿಗೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಬಿಗಿ ಪೊಲೀಸ್ ಬಂದೋಬಸ್ತ್ ಮಾಡುವಂತೆ ಜಿಲ್ಲಾ ಪೊಲೀಸ್ ಇಲಾಖೆಗೆ ತಿಳಿಸಲಾಯಿತು. ಕಾರ್ಯಕ್ರಮದ ನೋಡಲ್ ಅಧಿಕಾರಿಯಾಗಿ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳನ್ನು ನೇಮಕ ಮಾಡಲಾಯಿತು.

    ಜಿಲ್ಲಾ ಬಾಲಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುವೀರಸಿಂಗ್ ಠಾಕೂರ್, ಶ್ರೀರಾಮ ರಾಠೋಡ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಕೆ.ವಿಶ್ವನಾಥ, ಆಹಾರ ಇಲಾಖೆಯ ಶಾಂತಾಬಾಯಿ ಪಾಲಕಿ, ಕಾರ್ಮಿಕ ಇಲಾಖೆಯ ಲಕ್ಷ್ಮಣ ಪೂಜಾರ್, ಸಮಾಜದ ಮುಖಂಡರಾದ ಸುಭಾಷ ರಾಠೋಡ್, ಯಂಕಪ್ಪ ರಾಠೋಡ್, ಹೀರಾಸಿಂಗ್ ಪವಾರ್, ಮೇಘನಾಥ ಚವ್ಹಾಣ್, ಸುರೇಶ ಚವ್ಹಾಣ್, ರವಿ ರಾಠೋಡ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts