More

    ಬೆಂಗಳೂರು ಜಲಮಂಡಳಿಯಿಂದ ಸಂಸ್ಕರಿಸಿದ ನೀರಿನ ಬಳಕೆ ಉತ್ತೇಜಿಸಲು ಕ್ರಮ; ಏ.2 ಪೂರೈಕೆಗೆ ಕ್ರಮ

    ಬೆಂಗಳೂರು: ಕಟ್ಟಡಗಳ ನಿರ್ಮಾಣದಲ್ಲಿ ಸಂಸ್ಕರಿಸಿದ ನೀರಿನ ಬಳಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬೆಂಗಳೂರು ಅಪಾರ್ಟ್​ಮೆಂಟ್​ ಫೆಡೆರೇಷನ್​ ಹಾಗೂ ಕ್ರೇಡೈ ಜತೆಗೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸಹಭಾಗಿತ್ವಕ್ಕೆ ಮುಂದಾಗಿದೆ. ಏ.2 ರಿಂದ ಸಂಸ್ಕರಿಸಿದ ನೀರಿನ ಸರಬರಾಜು ಆರಂಭಿಸಲಾಗುತ್ತದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯ ಡಾ.ವಿ.ರಾಮ್​ ಪ್ರಸಾತ್​ ಮನೋಹರ್​ ತಿಳಿಸಿದ್ದಾರೆ.

    ಅಪಾರ್ಟ್​ಮೆಂಟ್​ ಫೆಡೆರೇಷನ್​ ಹಾಗೂ ಕ್ರೇಡೈ ಜತೆಗೆ ಈಗಾಗಲೇ ಚರ್ಚೆ ನಡೆಸಲಾಗಿದೆ. ಅಪಾರ್ಟ್​ಮೆಂಟ್​ಗಳ ಎಸ್​ಟಿಪಿ ಗಳಿಂದ ಶುದ್ಧೀಕರಣ ಗೊಳಿಸಲಾಗಿರುವ ಶೇ.50 ರಷ್ಟು ನೀರನ್ನು ಮಾರಾಟ ಮಾಡಲು ಮಾ.11 ರಂದು ಅನುಮತಿ ನೀಡಲಾಗಿದೆ. ಹಾಗೆಯೇ, ಜಲಮಂಡಳಿ ತ್ಯಾಜ್ಯ ನೀರು ಶುದ್ಧಿಕರಣ ಟಕದಲ್ಲೂ ಸಂಸ್ಕರಿಸಿದ ನೀರು ಲಭ್ಯವಿದೆ. ಈ ನೀರನ್ನು ಬಳಕೆದಾರರಿಗೆ ಸಮರ್ಪಕವಾಗಿ ಪೂರೈಸುವ ಉದ್ದೇಶದಿಂದ ಸಹಭಾಗಿತ್ವಕ್ಕೆ ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

    500 ಮೀ. ವರೆಗೆ ಪ್ರತ್ಯೇಕ ಪೈಪ್​ಲೈನ್​:

    ಖಾಸಗಿ (ಅಪಾರ್ಟ್​ಮೆಂಟ್​) ಹಾಗೂ ಜಲಮಂಡಳಿ ತ್ಯಾಜ್ಯ ನೀರು ಶುದ್ಧಿಕರಣ ಟಕದಿಂದ 500 ಮೀ. ವ್ಯಾಪ್ತಿಯಲ್ಲಿ ನಿರ್ಮಾಣವಾಗುತ್ತಿರುವ ದೊಡ್ಡ ಕಟ್ಟಡಗಳ ಬಳಕೆಗೆ ಪ್ರತ್ಯೇಕವಾದ ಪೈಪ್​ಲೈನ್​ ಅಳವಡಿಸುವ ಮೂಲಕ ನೀರು ಸರಬರಾಜು ಮಾಡಲಾಗುವುದು. ಇದರಿಂದಾಗಿ ಅವರ ಅಗತ್ಯತೆಗೆ ಅನುಗುಣವಾಗಿನಿರಂತರವಾಗಿ ನೀರು ಪೂರೈಕೆ ಸಾಧ್ಯವಾಗಲಿದೆ.

    ದೊಡ್ಡ ದೊಡ್ಡ ಕಟ್ಟಡಗಳ ನಿರ್ಮಾಣ ಕಾರ್ಯದಲ್ಲಿ ಬಹುತೇಕ ಕೊಳವೆಬಾವಿಗಳು ಮತ್ತು ಟ್ಯಾಂಕರ್​ಗಳನ್ನು ಅವಲಂಬಿಸಲಾಗುತ್ತದೆ. ಇದರಿಂದ ಅಂತರ್ಜಲದ ಮೇಲೆ ಒತ್ತಡ ಹೆಚ್ಚಾಗಿದೆ. ಸಂಸ್ಕರಿಸಿದ ನೀರನ್ನು ಬಳಸಲು ಉತ್ತೇಜನ ನೀಡುವುದರಿಂದ ಒತ್ತಡ ಕಡಿಮೆ ಮಾಡಬಹುದಾಗಿದೆ.

    ಮೊದಲ ಹಂತದಲ್ಲಿ ಖಾಸಗಿ ಹಾಗೂ ಜಲಮಂಡಳಿ ಎಸ್​ಟಿಪಿಗಳ 5 ಕಿ.ಮೀ. ವ್ಯಾಪ್ತಿಯಲ್ಲಿ ಪ್ರತ್ಯೇಕ ಪೈಪ್​ಲೈನ್​ ಅಥವಾ ಟ್ಯಾಂಕರ್​ಗಳ ಮೂಲಕ ಸಂಸ್ಕರಿಸಿದ ನೀರನ್ನು ಸರಬರಾಜು ಮಾಡಲು ಚಿಂತಿಸಲಾಗಿದೆ. ಸರಬರಾಜು ಹಾಗೂ ನೀರಿನ ವೆಚ್ಚವನ್ನು ಗ್ರಾಹಕರೇ ಭರಿಸಲಿದ್ದಾರೆ ಎಂದರು.

    ಈಗಾಗಲೇ 62 ಲಕ್ಷ ಲೀ. ಸಂಸ್ಕರಿಸಿದ ನೀರಿಗೆ ಬೇಡಿಕೆ ಬಂದಿದೆ. ಮುಂದಿನ ದಿನಗಳಲ್ಲಿ ಇದು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಸಂಸ್ಕರಿಸಿದ ನೀರನ್ನು ಮಾರಾಟ ಮಾಡುವ ಮೂಲಕ ಜಲಮಂಡಳಿಗೆ ಆದಾಯವೂ ಹೆಚ್ಚಾಗಲಿದೆ. ಮಂಗಳವಾರದಿಂದ ಸರಬರಾಜು ಪ್ರಾರಂಭಿಸಲಾಗುವುದು.
    -ಡಾ.ವಿ.ರಾಮ್​ ಪ್ರಸಾತ್​ ಮನೋಹರ್​, ಅಧ್ಯಕ್ಷ, ಜಲಮಂಡಳಿ

    ಜಲಸ್ನೇಹಿ ಆ್ಯಪ್​ನಲ್ಲಿ ನೋಂದಣಿ

    ಸಂಸ್ಕರಿಸಿದ ನೀರಿನ ಬೇಡಿಕೆಗೆ ಈಗಾಗಲೇ ಜಲಮಂಡಳಿ ವತಿಯಿಂದ ಪರಿಸರ ಜಲಸ್ನೇಹಿ ಆ್ಯಪ್​ ನಿರ್ಮಿಸಲಾಗಿದೆ. ಈ ಆ್ಯಪ್​ ಮೂಲಕ ಗ್ರಾಹಕರು, ಕಟ್ಟಡ ನಿರ್ಮಾಣಕ್ಕೆ ಅಗತ್ಯವಿರುವ ಸಂಸ್ಕರಿಸಿದ ನೀರಿಗೆ ಬುಕ್ಕಿಂಗ್​ ಮಾಡಬಹುದು ಎಂದು ಜಲಮಂಡಳಿ ಅಧ್ಯ ಡಾ.ವಿ.ರಾಮ್​ ಪ್ರಸಾತ್​ ಮನೋಹರ್​ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts