More

  ಶಾಲೆಗೆ ನೀರು ಪೂರೈಸಲು ಆಗ್ರಹ

  ಕೊಡೇಕಲ್: ಮಧ್ಯಾಹ್ನದ ಬಿಸಿಯೂಟದ ನಂತರ ತಟ್ಟೆ ಮತ್ತು ಕುಡಿಯುವ ನೀರಿಗಾಗಿ ದೂರದ ಒಂದು ಕಿಮೀ ಕಾಲುವೆಗೆ ಹೋಗುವಂತಾಗಿದ್ದು, ಕೂಡಲೇ ಗ್ರಾಮ ಪಂಚಾಯಿತಿ ಮಕ್ಕಳಿಗೆ ನೀರಿನ ಸೌಲಭ್ಯ ಒದಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

  ಹಗರಟಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದಿಹಾಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ೧ರಿಂದ ೭ನೇ ತರಗತಿವರೆಗೆ ೨೯೦ಕ್ಕೂ ಹೆಚ್ಚು ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಒಂದು ವಾರದಿಂದ ಶಾಲೆಗೆ ನೀರು ಸರಬರಾಜಾಗುವ ಪೈಪ್ ಒಡೆದ ಕಾರಣ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟದ ಅಡುಗೆ, ತಟ್ಟೆ ತೊಳೆಯಲು ಮತ್ತು ಮಕ್ಕಳಿಗೆ ಕುಡಿಯುವ ನೀರಿನ ತೀವ್ರ ಎಂದರೆಯಾಗಿದೆ ಎಂದು ಆರೋಪಿಸಿದರು.

  ಶಾಲೆಗೆ ಸರಬರಾಜು ಆಗುವ ಪೈಪ್‌ಲೈನ್ ಒಡೆದಿರುವುದನ್ನು ಗ್ರಾಮ ಪಂಚಾಯಿತಿ ದುರಸ್ತಿ ಮಾಡದೆ ನಿರ್ಲಕ್ಷ್ಯ ವಹಿಸಿದೆ. ಇದರಿಂದ ಶಾಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಾಗಿದೆ. ಕೂಡಲೇ ಪಂಚಾಯಿತಿ ಅಧಿಕಾರಿ ಶಾಲೆಗೆ ಭೇಟಿ ನೀಡಿ ಆಗಿರುವ ಸಮಸ್ಯೆಗೆ ಕೂಡಲೇ ಸ್ಪಂದಿಸಬೇಕು ಎಂದು ಒತ್ತಾಯಿಸಿದರು.
  ಕೇವಲ ಎರಡು ದಿನ ಮಾತ್ರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿ ಈಗ ಸ್ಥಗಿತಗೊಳಿಸಲಾಗಿದೆ. ಇದರಿಂದ ಮಕ್ಕಳು ನಿತ್ಯ ನೀರು ಕುಡಿಯಲು ಮತ್ತು ತಟ್ಟೆ ತೊಳೆಯಲು ದೂರದ ಕಾಲುವೆಗೆ ಹೋಗುವುದು ಅನಿವಾರ್ಯವಾಗಿದೆ. ಒಂದು ವೇಳೆ ಕಾಲುವೆಯಲ್ಲಿ ಮಕ್ಕಳು ಕಾಲುಜಾರಿ ಬಿದ್ದರೆ ದೊಡ್ಡ ಅನಾಹುತವೇ ಸಂಭವಿಸುತ್ತದೆ. ಆದ್ದರಿಂದ ಕೂಡಲೇ ಶಾಲೆಗೆ ನೀರಿನ ಸೌಕರ್ಯ ಒದಗಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದೆ. ಹಾಗೊಂದು ವೇಳೆ ವಿಳಂಬ ಮಾಡಿದ್ದಲ್ಲಿ ಗ್ರಾಪಂ ಎದುರು ಧರಣಿ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts