More

    ದೇಶದ ಅಭಿವೃದ್ಧಿ, ಸುರಕ್ಷತೆಗಾಗಿ ಬಿಜೆಪಿ ಬೆಂಬಲಿಸಿ

    ಚಿಕ್ಕಮಗಳೂರು: ಜನರು ದೇಶದ ಅಭಿವೃದ್ಧಿ, ಸುರಕ್ಷತೆ ಮತ್ತು ಉಜ್ವಲ ಭವಿಷ್ಯಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಗೆ ಬೆಂಬಲ ನೀಡಬೇಕು. ದೇಶಕ್ಕೆ ಮಾರಕವಾಗಿರುವ ಹಾಗೂ ಅಭಿವೃದ್ಧಿ ಶೂನ್ಯ ಗ್ಯಾರಂಟಿ ಯೋಜನೆ ಜಾರಿಗೆ ತಂದ ಕಾಂಗ್ರೆಸ್ ಸರ್ಕಾರವನ್ನು ಬೆಂಬಲಿಸಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಗ್ರೀನ್ ಆರ್ಮಿ ಇಂಡಿಯಾದ ಜಿಲ್ಲಾ ಕಾರ್ಯಾಧ್ಯಕ್ಷ ಬಿ.ಸಿ.ದಯಾಕರ್ ಗೌಡ ತಿಳಿಸಿದರು.

    ನಗರದ ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ನ ಗುಲಾಮಗಿರಿ ಆಡಳಿತದ ವೈಖರಿ, ಭ್ರಷ್ಟಾಚಾರ, ಕುಟುಂಬ ರಾಜಕೀಯ, ಕಪ್ಪು ಹಣ ಸಂಗ್ರಹಣೆ, ಜಾತಿ ಧರ್ಮಗಳನ್ನು ಒಡೆದು ಆಳುವ ನೀತಿಯನ್ನು ಪ್ರತಿಯೊಬ್ಬರೂ ಅರಿಯಬೇಕು ಎಂದರು.
    ಜಾಗತಿಕ ಉದಾರಿಕರಣ, ಆರ್ಥೀಕರಣದ ಹೆಸರಿನಲ್ಲಿ ಗ್ಯಾಟ್, ಡೆಂಕೆಲ್, ಡಬ್ಲುಟಿಓ ಒಪ್ಪಂದ ಮಾಡಿಕೊಂಡು ಬಂಡವಾಳಶಾಹಿಗಳಿಗೆ ಹಾಗೂ ಬಹು ರಾಷ್ಟ್ರೀಯ ಕಂಪನಿಗಳಿಗೆ ರತ್ನಗಂಬಳಿ ಹಾಸಿ ರೈತರಿಗೆ ಮೋಸ ಮಾಡಿದ್ದು ಇದೇ ಕಾಂಗ್ರೆಸ್. ಇದರ ವಿರುದ್ಧವೇ ರೈತ ಸಂಘ ಹಾಗೂ ಪ್ರೊ. ನಂಜುಂಡಸ್ವಾಮಿ ಅವರು ಕೊನೆಯವರೆಗೂ ಹೋರಾಟ ಮಾಡಿದ್ದನ್ನು ರೈತರು ಮರೆಯಬಾರದು ಎಂದು ಹೇಳಿದರು.
    ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಡ ಜನರಿಗೆ 5.5 ಕೋಟಿ ಮನೆ ನಿರ್ಮಾಣ ಮಾಡಿಕೊಟ್ಟಿದೆ. 80 ಕೋಟಿ ಜನರಿಗೆ ಉಚಿತ ಪಡಿತರ ಯೋಜನೆ ಜಾರಿಗೊಳಿಸಿದೆ. ಜೆಜೆಎಂ ಮೂಲಕ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ರೈತರ ಉದ್ದಾರಕ್ಕಾಗಿ ಕಿಸಾನ್ ಸಮ್ಮಾನ್ ಯೋಜನೆ, ಫಸಲ್ ಭೀಮಾ ಯೋಜನೆ ಜಾರಿಗೊಳಿಸಿದೆ. ಅಡಕೆ ಮತ್ತು ಮೆಣಸು ಆಮದು ಸುಂಕವನ್ನು ಹೆಚ್ಚು ಮಾಡಿ ರೈತರ ಹಿತ ಕಾಪಾಡುವ ಕೆಲಸವನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದೆ ಎಂದು ಹೇಳಿದರು.
    ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಗ್ರಾಪಂ ಮಟ್ಟದಿಂದ ಮಂತ್ರಿ ಸ್ಥಾನದವರೆಗೆ ಅನುಭವ ಬಂದಿದ್ದು ತಮ್ಮ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ಮಾಡಿದ್ದಾರೆ. ಅವರಿಗೆ ಮತ ನೀಡಿ ಗೆಲ್ಲಿಸಿದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದರು.
    ಸುದ್ದಿಗೋಷ್ಠಿಯಲ್ಲಿ ಸಂಘದ ತಾಲೂಕು ಅಧ್ಯಕ್ಷ ಸಿ‌.ಟಿ‌.ತುಳಸೇಗೌಡ, ಜಿಲ್ಲಾ ಸಂಚಾಲಕ ಬಿ.ಆರ್.ಸುಧೀರ್ ಗೌಡ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts