Support price 7 ಕಡೆ ಖರೀದಿ ಕೇಂದ್ರ ತೆರೆಯಲು ಸಿದ್ಧತೆ

Support price Meeting

ಕಾರವಾರ: ಪ್ರಸಕ್ತ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ Support price ಯೋಜನೆಯಲ್ಲಿ ಜಿಲ್ಲೆಯ ರೈತರಿಂದ ಭತ್ತ ಖರೀದಿ ಮಾಡುವ ಕುರಿತಂತೆ, ನೊಂದಣಿ ಕೇಂದ್ರಗಳನ್ನು ತೆರೆಯುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಬೆಂಬಲ ಬೆಲೆ Support price ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ
ವಹಿಸಿ ಮಾತನಾಡಿದರು.
ಸರ್ಕಾರವು ಪ್ರಸಕ್ತ ಸಾಲಿಗೆ ಕನಿಷ್ಠ ಬೆಂಬಲ ಬೆಲ ಯೋಜನೆಯಡಿ ಸಾಮಾನ್ಯ ಭತ್ತಕ್ಕೆ ಕ್ವಿಂಟಾಲ್ ರೂ.2300 ಮತ್ತು ಗ್ರೇಡ್ ಎ ಭತ್ತಕ್ಕೆ ರೂ.2320 ಗಳನ್ನು ನಿಗಧಿಪಡಿಸಿದ್ದು, ಈ ಕುರಿತಂತೆ ಜಿಲ್ಲೆಯ ರೈತರಿಂದ ಭತ್ತ ಖರೀದಿಸಲು ಅನುಕೂಲವಾಗುವಂತೆ ಹಳಿಯಾಳ, ಶಿರಸಿ, ಮುಂಡಗೋಡು, ಜೋಯಿಡಾ, ಕುಮಟಾ, ಅಂಕೋಲಾ ಮತ್ತು ಭಟ್ಕಳದಲ್ಲಿ ನೊಂದಣಿ ಕೇಂದ್ರಗಳನ್ನು ತೆರೆದು ನ.15 ರಿಂದ ರೈತರ ನೊಂದಣಿಯನ್ನು ಆರಂಭಿಸುವಂತೆ ಸೂಚಿಸಿದರು. ಭತ್ತ ಖರೀದಿಗೆ ಸಂಬಂಧಿಸಿದಂತೆ ಸರ್ಕಾರದಿಂದ ನೇಮಕಗೊಂಡ ಸಂಗ್ರಹಣಾ ಏಜೆನ್ಸಿಗಳು ಸರ್ಕಾರ ನಿಗಧಿಪಡಿಸಿದ ಮಾನದಂಡಗಳ ಪ್ರಕಾರ ಭತ್ತ ಖರೀದಿ ಹಂತದಲ್ಲಿ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು, ಪ್ರತೀ ಖರೀದಿ ಕೇಂದ್ರದಲ್ಲಿ ಕೃಷಿ ಇಲಾಖೆಯ ವತಿಯಿಂದ ಗ್ರೇಡರ್‌ಗಳನ್ನು ನೇಮಿಸಿಕೊಳ್ಳಬೇಕು ಎಂದರು.

Support price ಕೇಂದ್ರಗಳಿಗೆ ಮೂಲ ಸೌಕರ್ಯ ಕಲ್ಪಿಸಿ

ಪ್ರತೀ ಖರೀದಿ ಕೇಂದ್ರಗಳಿಗೆ ಖರೀದಿ ಅಧಿಕಾರಿಗಳನ್ನು ನೇಮಿಸುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ರೈತರಿಂದ ಖರೀದಿಸಿದ ಭತ್ತ ಸಂಗ್ರಹಣೆಗೆ ಗೋದಾಮುಗಳ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಮತ್ತು ಖರೀದಿ ಕೇಂದ್ರಗಳಿಗೆ ಆಗಮಿಸುವ ರೈತರಿಗೆ ಕುಡಿಯುವ ನೀರು ಸೇರಿದಂತೆ ಅಗತ್ಯವಿರುವ ಮೂಲಭೂತ ಸೌಲಭ್ಯಗಳನ್ನು ಒದಗಿಸುವಂತೆ ಸೂಚಿಸಿದರು. ಭತ್ತವನ್ನು ಸರಬರಾಜು ಮಾಡಿದ ರೈತರಿಗೆ 15 ದಿನಗಳ ಒಳಗೆ ಅವರ ಬ್ಯಾಂಕ್ ಖಾತೆಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಾಡಬೇಕು. ಜಿಲ್ಲೆಯಲ್ಲಿ ಸಂಗ್ರಹವಾದ ಭತ್ತವನ್ನು ಹಲ್ಲಿಂಗ್ ಮಾಡುವ ಕುರಿತಂತೆ ಅಕ್ಕಿ ಗಿರಣಿಗಳನ್ನು ನೊಂದಾವಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಭತ್ತಕ್ಕೆ ನಿಗಧಿಪಡಿಸಿರುವ ಕನಿಷ್ಠ ಬೆಂಬಲ ಬೆಲೆ, ಭತ್ತ ಖರೀದಿಗಾಗಿ ರೈತರಿಗಾಗಿ ಜಿಲ್ಲೆಯಲ್ಲಿ ತೆರೆಯಲಾಗುವ ನೊಂದಣಿ ಕೇಂದ್ರಗಳು ಮತ್ತು ಖರೀದಿ ಕೇಂದ್ರಗಳ ಬಗ್ಗೆ ಜಿಲ್ಲೆಯ ಎಲ್ಲಾ ರೈತರಿಗೆ ಅಗತ್ಯ ಮಾಹಿತಿಯನ್ನು ತಲುಪಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಉಪ ನಿರ್ದೇಶಕ ಮಂಜುನಾಥ್ ರೇವಣ್‌ಕರ್, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವ ಪ್ರಸಾದ್, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಗಿರಣಿ ಮಾಲೀಕರು ಉಪಸ್ಥಿತರಿದ್ದರು.

https://www.vijayavani.net/ankola-airport-compensetion

https://www.facebook.com/share/p/19MsfYLQic/

Airport ಗಾಗಿ ಅಂಕೋಲಾದಲ್ಲಿ 1 ತಿಂಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣ

Share This Article

ಕೂದಲು ಬಿಳಿಯಾಗುವುದನ್ನು ತಡೆಯುವುದೇಗೆ ಎಂಬ ಚಿಂತೆಯೇ?; ಇಲ್ಲಿದೆ ಸಿಂಪಲ್​ ವಿಧಾನ | Health Tips

10 ವರ್ಷದಿಂದ 25 ರಿಂದ 30 ರವರೆಗೆ ಇಂದಿನ ದಿನಗಳಲ್ಲಿ ಪ್ರತಿಯೊಬ್ಬರೂ ಅಕಾಲಿಕ ಬಿಳಿ ಕೂದಲಿನಿಂದ…

ನೀವು ಈ ನಕ್ಷತ್ರದಲ್ಲಿ ಹುಟ್ಟಿದ್ದೀರಾ? ಹಾಗಾದ್ರೆ ಈ ಡಿಸೆಂಬರ್​ ತಿಂಗಳಲ್ಲಿ ನಿಮ್ಮ ಅದೃಷ್ಟ ಖುಲಾಯಿಸಲಿದೆ! Birth of Stars

Birth of Stars : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ…

ರಾಗಿಮುದ್ದೆಯಿಂದ ಇಷ್ಟೆಲ್ಲಾ ಪ್ರಯೋಜನ ಇದ್ಯಾ!; ತಿಳಿದ್ರೆ ನಿಮ್ಮ ದೈನಂದಿನ ಆಹಾರಕ್ರಮದಲ್ಲಿ ಮಿಸ್​ ಮಾಡೋದೆ ಇಲ್ಲ | Health Tips

ಚಳಿಗಾಲವು ಆರಂಭವಾಗಿದ್ದು ಭವಿಷ್ಯದಲ್ಲಿ ಈ ಬಾರಿ ಹಿಂದಿನ ವರ್ಷಗಳಿಗಿಂತ ತೀವ್ರ ಚಳಿ ಇರುತ್ತದೆ. ಇತ್ತೀಚಿನ ದಿನಗಳಲ್ಲಿ…