ಪಕ್ಷ ರಹಿತವಾಗಿ ವಿದ್ಯಾರ್ಥಿಗಳಿಗೆ ಬೆಂಬಲ

puraskara
Published on

ಬ್ರಹ್ಮಾವರ: ರಾಜಕೀಯದಲ್ಲಿ ಮೌಲ್ಯಾಧಾರಿತ ರಾಜಕಾರಣ ಅಂದರೆ ಪಕ್ಷ ರಹಿತವಾಗಿ ವಿದ್ಯಾರ್ಥಿಗಳನ್ನು ಬೆಂಬಲಿಸಿ ಪ್ರೋತ್ಸಾಹಿಸುವುದು ಎಂದು ವಕೀಲ ಹರಿಮಕ್ಕಿ ರತ್ನಾಕರ ಶೆಟ್ಟಿ ಹೇಳಿದರು.

ಶನಿವಾರ ಬ್ರಹ್ಮಾವರ ಬಂಟರ ಭವನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿ ಮಾತನಾಡಿದರು. ಉಡುಪಿ ವಿಧಾನಸಭಾ ಕ್ಷೇತ್ರದ 13 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ 600 ವಿದ್ಯಾರ್ಥಿಗಳಿಗೆ 11 ಲಕ್ಷ ರೂ. ನೀಡಲಾಯಿತು.

ಪ್ರಮುಖರಾದ ಬಿರ್ತಿ ರಾಜೇಶ್ ಶೆಟ್ಟಿ, ನಿವೃತ್ತ ಮುಖ್ಯ ಶಿಕ್ಷಕ ಬಿ.ಟಿ ನಾಯ್ಕ, ರಾಜು ಪೂಜಾರಿ ಉಪ್ಪೂರು, ಎಸ್.ನಾರಾಯಣ, ನಿಶಾನ್ ರೈ, ರವಿಶೆಟ್ಟಿ ಕುಮ್ರಗೋಡು ಸೇರಿದಂತೆ ವಿದ್ಯಾರ್ಥಿಗ ಪಾಲಕರು ಉಪಸ್ಥಿತರಿದ್ದರು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ರಾಜು ಕುಲಾಲ್ ಸ್ವಾಗತಿಸಿದರು. ಕಮಲಾಕ್ಷ ಹೆಬ್ಬಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಹರೀಶ್ ಶೆಟ್ಟಿ ಚೇರ್ಕಾಡಿ ವಂದಿಸಿದರು. ಮನೋಜ್ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net