More

    ಮಹಿಳೆಯರ ಸಂಕಷ್ಟ ಪರಿಹರಿಸಿದ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ : ಡಾ.ಎಚ್.ಸಿ. ಮಹದೇವಪ್ಪ ಮನವಿ

    ಮೈಸೂರು: ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದು, ಮಹಿಳೆಯರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಕರೆ ನೀಡಿದರು.

    ಕಾಂಗ್ರೆಸ್ ಹಿಂದುಳಿದ ವರ್ಗಗಳ ನಗರ ಘಟಕ, ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮೈಸೂರು-ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿ, ಬಡವರು ಸ್ವಾಭಿಮಾನದಿಂದ ಬದುಕು ನಡೆಸಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳು ಬಡವರ ಬದುಕಿಗೆ ನೆಮ್ಮದಿಯನ್ನು ತಂದಿದೆ ಎಂದು ಹೇಳಿದರು.

    ಸಂವಿಧಾನ ನಮಗೆ ಸಮಾನ ಅವಕಾಶಗಳನ್ನು ಕಲ್ಪಿಸಿದೆ. ಸಂವಿಧಾನದ ಆಶಯಗಳು ಜಾರಿಯಾಗಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಕಾಂಗ್ರೆಸ್ ಪಕ್ಷ ಜನರ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಪರವಾಗಿ ಇದೆ. ಆದರೆ, ಬಿಜೆಪಿಗೆ ಸಂವಿಧಾನದ ಬಗ್ಗೆ ಯಾವುದೇ ಕಾಳಜಿ ಇಲ್ಲ ಎಂದು ಟೀಕಿಸಿದರು.

    ಹಿಂದುಳಿದ ವರ್ಗ ಹಾಗೂ ಅತಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ. ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹಿಂದುಳಿದ ವರ್ಗದವರು 20 ಸಾವಿರ ಜನರು ಇದ್ದಾರೆ. ಅತಿ ಹಿಂದುಳಿದ ವರ್ಗದವರು ಈ ಬಾರಿ ಕಾಂಗ್ರೆಸ್ ಪಕ್ಷದ ಕೈ ಹಿಡಿದರೆ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    A

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts