More

    ಸುಗ್ರೀವಾಜ್ಞೆ ಬಳಕೆಗೆ ಕೈ ವ್ಯಗ್ರ – ಕೃಷಿ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ

    ಸಿಂಧನೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸುತ್ತಿರುವ ಕೃಷಿ ಮಸೂದೆ ವಿರೋಧಿಸಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕ ಮಿನಿವಿಧಾನಸೌಧದ ಎದುರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿತು.

    ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ, ಈ ತಿದ್ದುಪಡಿಗಳು ರೈತ ಮತ್ತು ಕಾರ್ಮಿಕರಿಗೆ ಮರಣ ಶಾಸನವಾಗಿವೆ. ಇದನ್ನು ಇಡೀ ದೇಶವೇ ವಿರೋಧಿಸುತ್ತಿದ್ದರೂ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಕಾಯ್ದೆ ಹಿಂಪಡೆಯುತ್ತಿಲ್ಲ. ಕಾರ್ಪೋರೇಟ್ ಸಂಸ್ಥೆಗಳ ಹಿತ ಕಾಯುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ದೇಶಾದ್ಯಂತ ಕಾನೂನು ಭಂಗ ಚಳವಳಿ ನಡೆಸಬೇಕೆಂದರು.

    ಕರ್ನಾಟಕ ಭೂಸುಧಾರಣಾ ಕಾಯ್ದೆ ತಿದ್ದುಪಡಿ ಕೈಬಿಡಬೇಕು. ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾಯ್ದೆ ತಿದ್ದುಪಡಿ ಬೇಡ. ಯುಜಿಡಿ ಮತ್ತು ಶುದ್ಧ ಕುಡಿವ ನೀರು ಪೂರೈಕೆ ಮಾಡಲು ಅಗತ್ಯ ಕ್ರಮಕೈಗೊಳ್ಳಬೇಕು. ಮರಳು ಮಾಫಿಯಾ, ಗಾಂಜಾ ದಂಧೆ ತಡೆಬೇಕು. ದಿದ್ದಗಿ ಗ್ರಾಮದಲ್ಲಿ ಕುಡಿವ ನೀರಿನ ಕೆರೆ ಅವ್ಯವಹಾರ ತನಿಖೆ ನಡೆಸಬೇಕು ಎಂಬುದೂ ಸೇರಿ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಲಾಯಿತು.

    ತಹಸೀಲ್ದಾರ್ ಮಂಜುನಾಥ ಭೋಗಾವತಿ ಮನವಿ ಪತ್ರ ಸ್ವೀಕರಿಸಿದರು. ಆರ್‌ಡಿಸಿಸಿ ಬ್ಯಾಂಕ್ ಅಧ್ಯಕ್ಷ ಪಂಪನಗೌಡ ಬಾದರ್ಲಿ, ಜಿಪಂ ಸದಸ್ಯ ಬಸವರಾಜ ಹಿರೇಗೌಡರ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾಜಿ ಮಲ್ಲಿಕ್ ವಕೀಲ, ಮುಖಂಡರಾದ ಲಿಂಗರಾಜ ಪಾಟೀಲ್ ಹಂಚಿನಾಳಕ್ಯಾಂಪ್, ಎನ್.ಭೀಮನಗೌಡ ಗೊರೇಬಾಳ, ನಗರಸಭೆ ಸದಸ್ಯ ಶೇಖರಪ್ಪ ಗಿಣಿವಾರ, ದೊಡ್ಡನಗೌಡ ಕಲ್ಲೂರು, ಪ್ರಭುರಾಜ, ಅಮರೇಶ ಗುರಿಕಾರ, ವೆಂಕಟರೆಡ್ಡಿ ಗಾಳಿ, ಸೈಯ್ಯದ್ ಜಾಫರ ಜಹಗೀರದಾರ ಇತರರು ಇದ್ದರು.

    ಯುವ ಕಾಂಗ್ರೆಸ್ ಪ್ರತಿಭಟನೆ
    ಸಿಂಧನೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆ ವಿರೋಧಿಸಿ ಯುವ ಕಾಂಗ್ರೆಸ್ ಹಾಗೂ ಕಿಸಾನ್ ಘಟಕ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿತು. ನಗರದ ಎಪಿಎಂಸಿ ಗಣೇಶ ದೇವಸ್ಥಾನದಿಂದ ಮಿನಿವಿಧಾನಸೌಧದವರೆಗೆ ಮೆರವಣಿಗೆ ನಡೆಸಿತು. ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಬಸನಗೌಡ ಬಾದರ್ಲಿ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಕೆ.ಕರಿಯಪ್ಪ ಎತ್ತಿನ ಬಂಡಿ ಮೆರವಣಿಗೆ ನಡೆಸಿದರು. ಯುವ ಕಾಂಗ್ರೆಸ್ ಘಟಕದ ಪದಾಧಿಕಾರಿಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts