More

    ಕರ್ನಾಟಕ-ಕೇರಳ ಮುಖ್ಯ ಕಾರ್ಯದರ್ಶಿಗಳ ಜತೆ ಚರ್ಚಿಸಿ ಕರೊನಾ ಸೋಂಕಿತರ ಚಿಕಿತ್ಸೆಗೆ ಅನುಕೂಲ ಮಾಡಿಕೊಡಿ ಎಂದ ಸುಪ್ರೀಂ ಕೋರ್ಟ್​

    ನವದೆಹಲಿ: ಕೇರಳ ಹಾಗೂ ಕರ್ನಾಟಕ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇರಳದ ಕಾಸರಗೋಡಿನ ಜನರ ವೈದ್ಯಕೀಯ ಚಿಕಿತ್ಸೆಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಿ ಎಂದು ಸುಪ್ರೀಂ ಕೋರ್ಟ್​ ಕೇಂದ್ರ ಆರೋಗ್ಯ ಕಾರ್ಯದರ್ಶಿಗೆ ಸೂಚನೆ ನೀಡಿದೆ.

    ಮುಚ್ಚಿರುವ ಕಾಸರಗೋಡು-ಮಂಗಳೂರು ರಸ್ತೆಯನ್ನು ತೆರವುಗೊಳಿಸಿ ಕರೊನಾ ವೈರಸ್ ಸೋಂಕು ಪೀಡಿತರಿಗೆ ನೆರವಾಗಬೇಕು ಎಂದು ಗುರುವಾರ ಕೇರಳ ಹೈಕೋರ್ಟ್​ ನೀಡಿದ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಸೂಚನೆ ನೀಡಿದೆ.

    ಆರೋಗ್ಯದ ವಿಚಾರವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ಕರೊನಾ ಪೀಡಿತರಿಗೆ ಚಿಕಿತ್ಸೆ ಸಿಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎರಡು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಬೇಕು ಎಂದು ಸೂಚಿಸಿ ಏ.7ಕ್ಕೆ ಅರ್ಜಿ ವಿಚಾರಣೆ ನಡೆಸುವುದಾಗಿ ತಿಳಿಸಿತು.

    ಲಾಕ್​ಡೌನ್​ ನಂತರ ರಾಜ್ಯ ಸರ್ಕಾರ ಮಂಗಳೂರು ಹಾಗೂ ಕಾಸರಗೋಡು ರಸ್ತೆಯನ್ನು ಬಂದ್​ ಮಾಡಿತು. ಕಾಸರಗೋಡಿನಲ್ಲಿ ಕರೊನಾ ಪೀಡಿತರ ಸಂಖ್ಯೆ ಅಧಿಕವಾಗಿರುವುದರಿಂದ ಹತ್ತಿರದ ಮಂಗಳೂರಿನಲ್ಲಿ ಚಿಕಿತ್ಸೆಗೆ ಮುಂದಾಗಿದ್ದರು. ರಸ್ತೆ ಬಂದ್​ ಆದ ಹಿನ್ನೆಲೆಯಲ್ಲಿ ರೋಗಿಗಳು ಮಂಗಳೂರಿಗೆ ತೆರಳಲು ಸಾಧ್ಯವಾಗಲಿಲ್ಲ. ರಸ್ತೆ ಬಂದ್​ ಆದ ಹಿನ್ನೆಲೆಯಲ್ಲಿ ಚಿಕಿತ್ಸೆ ಸಿಗದೆ ಓರ್ವ ಸೋಂಕಿತ ಮೃತಪಟ್ಟಿದ್ದಾನೆ ಎಂದು ಕಾಸರಗೋಡು ಸಂಸದರು ಕೇರಳ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿ ರಸ್ತೆ ತೆರವುಗೊಳಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಕೋರಿದ್ದರು.

    ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್​ ಮಂಗಳೂರು-ಕಾಸರಗೋಡು ರಸ್ತೆ ತೆರೆಯುವಂತೆ ಕರ್ನಾಟಕ್ಕೆ ಸೂಚನೆ ನೀಡಿತ್ತು.

    ಕೇರಳ ಹೈಕೋರ್ಟ್​ ಸೂಚನೆ ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. (ಏಜೆನ್ಸೀಸ್​)

    VIDEO| ಮಾನವೀಯತೆ ಮರೆತ ಜನತೆ: ಕರೊನಾ ಸೋಂಕು ಇದ್ದ ಮಗುವಿಗೆ ಚಿಕಿತ್ಸೆ ಕೊಟ್ಟಿದ್ದಕ್ಕೆ ನರ್ಸ್​ಗೆ ಬಹಿಷ್ಕಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts