ನವದೆಹಲಿ: ಅತ್ಯಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ( Prajwal Revanna ) ಗೆ ಸುಪ್ರೀಂಕೋರ್ಟ್ನಲ್ಲೂ ಬಿಗ್ ಶಾಕ್ ಎದುರಾಗಿದೆ. ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಉನ್ನತ ನ್ಯಾಯಾಲಯ ಇಂದು ( ನ.11) ವಜಾಗೊಳಿಸಿದ್ದು, ಹಾಸನದ ಮಾಜಿ ಸಂಸದರಿಗೆ ಜೈಲೇ ಗತಿಯಾಗಿದೆ.
ಜಾಮೀನು ಅರ್ಜಿಯನ್ನು ವಜಾಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ, ಪ್ರಜ್ವಲ್ ರೇವಣ್ಣ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಚುನಾವಣಾ ಸಂದರ್ಭದಲ್ಲಿ ಪ್ರಜ್ವಲ್ ವಿರುದ್ಧ ಆರೋಪ ಮಾಡಲಾಗಿದೆ. ಹೀಗಾಗಿ ಅವರಿಗೆ ಜಾಮೀನು ನೀಡಬೇಕೆಂದು ಅವರ ಪರ ವಕೀಲರು ವಾದಿಸಿದರು. ಆದರೆ, ಅವರ ವಾದವನ್ನು ತಳ್ಳಿಹಾಕಿದ ನ್ಯಾಯಾಲಯ ಅರ್ಜಿಯನ್ನು ವಜಾಗೊಳಿಸಿದ್ದು, ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್ ನೀಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ ತ್ರಿವೇದಿ ಮತ್ತು ಸತೀಶ್ ಚಂದ್ರ ಶರ್ಮಾ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿ, ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದೆ.
ಅಂದಹಾಗೆ ಅತ್ಯಾಚಾರ ಪ್ರಕರಣ ಸೇರಿದಂತೆ ಒಟ್ಟು ಮೂರು ಪ್ರಕರಣಗಳು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಮೇಲಿದೆ. ಈ ಮೂರು ಪ್ರಕರಣಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ಜಾಮೀನು ಅರ್ಜಿ ಹಾಗೂ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೂಡ ವಜಾಗೊಳಿಸಿ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನೆ ಮಾಡಿ ಪ್ರಜ್ವಲ್ ರೇವಣ್ಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಅಲ್ಲೂ ಹಿನ್ನೆಡೆಯಾಗಿದೆ.
ಜಗ್ಗೇಶ್ ಬೈಯ್ಯೋರು ಇದನ್ನೊಮ್ಮೆ ನೋಡಿ… ಗುರುಪ್ರಸಾದ್ ಬಗ್ಗೆ ಧನಂಜಯ್ ಮಾತು, ವಿಡಿಯೋ ವೈರಲ್! Guruprasad