More

    ಹೊಸ ಸಂಸತ್​ ಭವನವನ್ನು ರಾಷ್ಟ್ರಪತಿಯಿಂದ ಉದ್ಘಾಟಿಸಲು ಕೋರಿ ಸಲ್ಲಿಕೆಯಾಗಿದ್ದ ಅರ್ಜಿ ವಜಾ

    ನವದೆಹಲಿ: ಹೊಸ ಸಂಸತ್​ ಭವನವನ್ನು ರಾಷ್ಟ್ರಪತಿ ಹಾಗೂ ದೇಶದ ಪ್ರಥಮ ಪ್ರಜೆ ದ್ರೌಪದಿ ಮುರ್ಮು ಅವರಿಂದ ಉದ್ಘಾಟನೆ ಮಾಡಿಸಲು ಲೋಕಸಭೆಯ ಕಾರ್ಯದರ್ಶಿಗೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್​ ಶುಕ್ರವಾರ ವಜಾಗೊಳಿಸಿದೆ.

    ನೀವು ಇಂತಹ ಅರ್ಜಿಗಳನ್ನು ಏಕೆ ಸಲ್ಲಿಸುತ್ತೀರಿ ಎಂಬುದು ನಮಗೆ ತಿಳಿದಿದೆ. ಇದನ್ನು ಮನರಂಜಿಸಲು ನಾವು ಒಲವು ತೋರುತ್ತಿಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ಪೀಠವು ಅರ್ಜಿ ವಜಾಗೊಳಿಸಿತು. ಅಲ್ಲದೆ, ಇಂತಹ ಅರ್ಜಿ ಸಲ್ಲಿಸಿದ ನಿಮ್ಮ ಮೇಲೆ ಯಾವುದೇ ವೆಚ್ಚವನ್ನು ಹೇರುತ್ತಿಲ್ಲ ಎಂಬುದಕ್ಕೆ ಕೃತಜ್ಞರಾಗಿರಿ ಎಂದು ಪೀಠವು ಹೇಳಿತು.

    ಇದನ್ನೂ ಓದಿ: ಹುಡುಗಿಯರ ಹಾಸ್ಟೆಲ್​ ಮುಂದೆ ಟಾರ್ಚ್ ಆನ್​ ಮಾಡಿ ಬೆತ್ತಲೆ ಓಡಾಟ: ಆರೋಪಿ ಬಂಧನ

    ಮೇ 28ಕ್ಕೆ ನಿಗದಿಯಾಗಿರುವ ಹೊಸ ಸಂಸತ್​ ಭವನದ ಉದ್ಘಾಟನೆ ಸುತ್ತ ಎದ್ದಿರುವ ವಿವಾದದ ಬೆನ್ನಲ್ಲೇ ಸುಪ್ರೀಂಕೋರ್ಟ್​ ವಕೀಲರೊಬ್ಬರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ರಾಷ್ಟ್ರಪತಿಗಳನ್ನು ನಿರ್ಲಕ್ಷಿಸಿದ್ದಕ್ಕೆ ಸಂಸತ್​ ಭವನ ಉದ್ಘಾಟನಾ ಕಾರ್ಯಕ್ರಮವನ್ನು ಸುಮಾರು 20ಕ್ಕೂ ಹೆಚ್ಚು ಪಕ್ಷಗಳು ಬಹಿಷ್ಕರಿಸಿವೆ.

    ಮೇ 18 ರಂದು ಲೋಕಸಭೆಯ ಸೆಕ್ರೆಟರಿಯೇಟ್ ನೀಡಿದ ಹೇಳಿಕೆ ಮತ್ತು ಹೊಸ ಸಂಸತ್ ಭವನದ ಉದ್ಘಾಟನೆಯ ಕುರಿತು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ನೀಡಿದ ಆಹ್ವಾನವು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ ವಕೀಲ ಜಯ ಸುಕಿನ್ ಪ್ರತಿಪಾದಿಸಿದ್ದಾರೆ. ರಾಷ್ಟ್ರಪತಿಗಳು ಭಾರತದ ಪ್ರಥಮ ಪ್ರಜೆ ಮತ್ತು ಸಂಸತ್ತಿನ ಮುಖ್ಯಸ್ಥರು ಎಂದು ಹೇಳಿದ ವಕೀಲರು, ಮುರ್ಮು ಅವರಿಂದ ಉದ್ಘಾಟನೆಗೆ ಅನುಕೂಲವಾಗುವಂತೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಬೇಕೆಂದು ಕೋರಿದ್ದರು.

    ರಾಷ್ಟ್ರಪತಿಗಳನ್ನು ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸದೆ ಕೇಂದ್ರ ಸರ್ಕಾರವು ದ್ರೌಪದಿ ಮುರ್ಮು ಅವರನ್ನು ಅವಮಾನಿಸುತ್ತಿದೆ ಎಂದು ಅರ್ಜಿದಾರರು ಹೇಳಿದ್ದರು. ಸಂವಿಧಾನದ 79 ನೇ ವಿಧಿಯನ್ನು ಉಲ್ಲೇಖಿಸಿ, ರಾಷ್ಟ್ರಪತಿಗಳು ಸಂಸತ್ತಿನ ಹಾಗೂ ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದಾರೆ. ಈ ರಾಷ್ಟ್ರದ ಪ್ರಜಾಪ್ರಭುತ್ವವನ್ನು ಉಳಿಸಲು ಸುಪ್ರೀಂಕೋರ್ಟ್‌ನ ಹಸ್ತಕ್ಷೇಪದ ಅಗತ್ಯವಿದೆ ಎಂದು ವಕೀಲರು ಅರ್ಜಿಯಲ್ಲಿ ಕೇಳಿದ್ದರು. ಆದರೆ, ನ್ಯಾಯಾಲಯ ಅರ್ಜಿಯನ್ನು ತಿರಸ್ಕರಿಸಿದೆ.

    ಅಂದಹಾಗೆ ಹೊಸ ಸಂಸತ್​ ಭವನ ಮೇ 28 ಅಂದರೆ ಭಾನುವಾರ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆ ಆಗಲಿದೆ. ಸುಮಾರು 25ಕ್ಕೂ ಪಕ್ಷಗಳು ಈ ಅದ್ಧೂರಿ ಸಮಾರಂಭಕ್ಕೆ ಸಾಕ್ಷಿಯಾಗಲಿವೆ. ಆದರೆ, ಸುಮಾರು 20 ವಿಪಕ್ಷಗಳು ಈ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ.

    ವಿಪಕ್ಷಗಳಿಂದ ಬಹಿಷ್ಕಾರ

    ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ಎಡಪಕ್ಷಗಳು, ತೃಣಮೂಲ ಮತ್ತು ಸಮಾಜವಾದಿ ಪಕ್ಷಗಳು ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. ಪ್ರಜಾಪ್ರಭುತ್ವದ ಆತ್ಮವನ್ನೇ ಹೀರಿರುವಾಗ ಹೊಸ ಸಂಸತ್​ ಭವನದಲ್ಲಿ ಯಾವುದೇ ಮೌಲ್ಯಗಳು ಕಾಣುತ್ತಿಲ್ಲ. ಹೀಗಾಗಿ ಸಮಾರಂಭವನ್ನು ಬಹಿಷ್ಕರಿಸುತ್ತಿದ್ದೇವೆ ಎಂದು ವಿಪಕ್ಷಗಳು ಹೇಳಿವೆ. ಅಲ್ಲದೆ, ರಾಷ್ಟ್ರಪತಿ ಬದಲು ಪ್ರಧಾನಿ ಮೋದಿ ಅವರಿಂದ ಸಂಸತ್​ ಭವನ ಉದ್ಘಾಟನೆ ಮಾಡಿಸುತ್ತಿರುವುದು ವಿಪಕ್ಷಗಳ ಅಸಮಾಧಾನಕ್ಕೆ ಕಾರಣವಾಗಿದೆ.

    ಇದನ್ನೂ ಓದಿ: ನಿಮ್ಮ ಕಣ್ಣಿಗೊಂದು ಸವಾಲ್​: ಜೀನಿಯಸ್​ ಮಾತ್ರ ಫೋಟೋದಲ್ಲಿರುವ ಚಿರತೆ ಪತ್ತೆಹಚ್ಚಬಲ್ಲರು!

    ಎನ್​ಡಿಎ ತಿರುಗೇಟು

    ಪ್ರತಿಪಕ್ಷಗಳ ಮೇಲೆ ತೀವ್ರ ಪ್ರತಿದಾಳಿ ನಡೆಸಿರುವ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ), ನೂತನ ಸಂಸತ್​ ಭವನ ಉದ್ಘಾಟನೆಯನ್ನು ಬಹಿಷ್ಕರಿಸುವ ನಿರ್ಧಾರವು “ನಮ್ಮ ಮಹಾನ್ ರಾಷ್ಟ್ರದ ಪ್ರಜಾಸತ್ತಾತ್ಮಕ ನೀತಿ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಮಾಡಿದ ಘೋರ ಅಪಹಾಸ್ಯ ಎಂದು ಕಿಡಿಕಾರಿದೆ. (ಏಜೆನ್ಸೀಸ್​)

    ಬೆಲ್ಲದಲ್ಲಿದೆ ಆರೋಗ್ಯದ ಗುಟ್ಟು; ಅನಾರೋಗ್ಯದ ಸಮಸ್ಯೆಗೆ ಇದುವೆ ಮದ್ದು

    ಟ್ರಾಲಿ ಬ್ಯಾಗ್​ನಲ್ಲಿ ಪತ್ತೆಯಾಯ್ತು ಹೋಟೆಲ್​ ಮಾಲೀಕನ ಶವ

    ಕುಡಿಯುವ ನೀರಿಗಾಗಿ ಪ್ರಾಣವನ್ನೇ ಪಣಕ್ಕಿಟ್ಟ ಮಹಿಳೆ..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts