More

    5 ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದ ಸುಪ್ರೀಂ ಕೋರ್ಟ್

    ನವದೆಹಲಿ: 5 ಮತ್ತು 8ನೇ ತರಗತಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಆದೇಶ ನೀಡಿದೆ.

    2022-23ನೇ ಸಾಲಿನ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ಮುಂದಾಗಿತ್ತು. ಇದರ ವಿರುದ್ಧ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಹೈಕೋರ್ಟ್ ಮೆಟ್ಟಿಲೇರಿದ್ದರು.

    ಅದರಂತೆ ವಿಚಾರಣೆ ನಡೆಸಿದ್ದ ಏಕಸದಸ್ಯ ಪೀಠ, ಪರೀಕ್ಷೆ ನಡೆಸದಂತೆ ಆದೇಶ ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು. ಅದರಂತೆ ಮಾರ್ಚ್ 16ರಂದು ಆದೇಶ ಹೊರಡಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಎಂದು ಹೇಳಿ, ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆಯೊಡ್ಡಿತ್ತು. ಅಲ್ಲದೆ, ಮಾರ್ಚ್ 27ರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ವಿಭಾಗೀಯ ಪೀಠ ಸೂಚನೆ ನೀಡಿತ್ತು.

    ಇದನ್ನು ಪ್ರಶ್ನಿಸಿ ರುಪ್ಸಾ, ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿ, ತುರ್ತು ವಿಚಾರಣೆ ನಡೆಸಲು ಮನವಿ ಮಾಡಿತ್ತು. ಇಂದು ವಿಚಾರಣೆ ನಡೆಸಿ ಪಬ್ಲಿಕ್ ಪರೀಕ್ಷೆ ನಡೆಸಲು ಅನುಮತಿ ನೀಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts