More

    ಅಬಕಾರಿ ನೀತಿ ಹಗರಣ; ಎಎಪಿ ನಾಯಕ ಸಂಜಯ್​ ಸಿಂಗ್​ಗೆ ಜಾಮೀನು

    ನವದೆಹಲಿ: ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಎಎಪಿ ನಾಯಕ, ರಾಜ್ಯಸಭಾ ಸದಸ್ಯ ಸಂಜಯ್​ ಸಿಂಗ್​ಗೆ ಸುಪ್ರೀಂ ಕೋರ್ಟ್​ ಜಾಮೀನು ಮಂಜೂರು ಮಾಡಿದೆ.

    ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ವಶಕ್ಕೆ ಪಡೆದಿರುವ ಕ್ರಮವನ್ನು ಪ್ರಶ್ನಿಸಿ ಸಂಜಯ್​ ಸಿಂಗ್​ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ದೀಪಂಕರ್ ದತ್ತಾ ಮತ್ತು ಪಿ.ಬಿ. ವರಾಳೆ ಅವರಿದ್ದ ತ್ರಿಸದಸ್ಯ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ ಜಾಮೀನು ಮಂಜೂರು ಮಾಡಿದೆ.

    ಅಬಕಾರಿ ನೀತಿಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್​ 04ರಂದು ಸಂಜಯ್​​ ಸಿಂಗ್​ರನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿತ್ತು. ಸತತ ವಿಚಾರಣೆಯ ಬಳಿಕ ಸಂಜಯ್​ ಸಿಂಗ್​ಗೆ ಬೇಲ್​ ಮಂಜೂರು ಮಾಡಿದರೆ ಏನು ತೊಂದರೆ ಇಲ್ಲ ಎಂದು ಇಡಿ ನ್ಯಾಯಾಲಯಕ್ಕೆ ತಿಳಿಸಿದ ಬಳಿಕ ಸುಪ್ರೀಂ ಕೋರ್ಟ್​ ಅವರಿಗೆ ಜಾಮೀನು ಮಂಜೂರು ಮಾಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts