ಸುಪ್ರೀಂಕೋರ್ಟ್​​​​​​​ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್

Siddaramaiah
Published on

ನವದೆಹಲಿ: ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ ವಿಧಿಸಿರುವ 10 ಸಾವಿರ ರೂ. ದಂಡವನ್ನು ಪ್ರಶ್ನಿಸಿ ಮತ್ತು ಎಫ್​ಐಆರ್​​ ರದ್ದತಿ ಕೋರಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಸೋಮವಾರ ನಡೆಸಿದೆ.

ಇದೇ ವೇಳೆ, ಮುಂದಿನ ಆದೇಶದವರೆಗೆ ಸಿದ್ದರಾಮಯ್ಯ ವಿರುದ್ಧದದ ಕ್ರಿಮಿನಲ್ ವಿಚಾರಣೆಗೆ ತಡೆ ನೀಡಿ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದರೆ, ಆರು ವಾರಗಳ ಒಳಗಾಗಿ ಪ್ರತಿಕ್ರಿಯೆ ನೀಡುವಂತೆ ಸರ್ವೋಚ್ಚ ನ್ಯಾಯಾಲಯ ಸೂಚನೆ ನೀಡಿದೆ.

ರಸ್ತೆ ತಡೆದು ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದ ಆರೋಪಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧದ ಎಫ್​ಐಆರ್ ರದ್ದು ಮಾಡಬೇಕೆಂದು ಕೋರಿ ಸುಪ್ರೀಂ ಕೋರ್ಟ್​​ನಲ್ಲಿ ಕೆಲವು ದಿನಗಳ ಹಿಂದೆ ಅರ್ಜಿ ಸಲ್ಲಿಕೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿರುವುದನ್ನು ಕೂಡ ಸರ್ವೋಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಹಾಗೂ ಕಾಂಗ್ರೆಸ್ ನಾಯಕರ ಪರ ಅಭಿಷೇಕ್ ಮನುಸಿಂಘ್ವಿ ವಾದ ಮಂಡನೆ ಮಾಡಿದರು.

ವಿಚಾರಣೆ ವೇಳೆ ನ್ಯಾಯಪೀಠವು, ರಾಜಕೀಯ ಪಕ್ಷಗಳ ಪ್ರತಿಭಟನೆ ಎಂದ ಕೂಡಲೆ ಕೇಸ್ ವಜಾ ಮಾಡಬೇಕೇ, ನೀವು ಪ್ರತಿಭಟನೆಗೆ ಅನುಮತಿ ಪಡೆದಿದಿದ್ದಿರೇ ಎಂದು ಪ್ರಶ್ನಿಸಿದೆ. ಇದಕ್ಕೆ ಉತ್ತರಿಸಿದ ವಕೀಲ ಸಿಬಲ್, ಪ್ರತಿಭಟಿಸುವುದು ಮೂಲಭೂತ ಹಕ್ಕು. ಪ್ರತಿಭಟಿಸುವುದು ಅಪರಾಧವಲ್ಲ ಎಂದು ವಾದ ಮಂಡಿಸಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net