ಅಯೋಧ್ಯೆ ವಿವಾದ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್​​ ನಕಾರ

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ ವಿವಾದದ ವಿಚಾರಣೆಯನ್ನು ತುರ್ತಾಗಿ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ.

ಜನವರಿಗೂ ಮೊದಲೇ ಪ್ರಕರಣದ ವಿಚಾರಣೆ ನಡೆಸುವಂತೆ ಕೋರಿ ಅಖಿಲಭಾರತ ಹಿಂದು ಮಹಾಸಭಾ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ರಂಜನ್​ ಗೊಗೊಯ್​ ನೇತೃತ್ವದ ಪೀಠ ಅರ್ಜಿಯನ್ನು ವಜಾಗೊಳಿಸಿದ್ದು, ಈ ಮೊದಲೇ ಆದೇಶಿಸಿದಂತೆ ಅರ್ಜಿಯ ವಿಚಾರಣೆ ಜನವರಿಯಲ್ಲಿ ನಡೆಸಲಾಗುವುದು ಎಂದು ತಿಳಿಸಿದೆ.

ಕಳೆದ ತಿಂಗಳು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್, ನ್ಯಾ. ಸಂಜಯ್ ಕಿಶನ್ ಕೌಲ್ ಮತ್ತು ನ್ಯಾ. ಕೆ.ಎಂ. ಜೋಸೆಫ್ ಅವರನ್ನೊಳಗೊಂಡು ತ್ರಿಸದಸ್ಯ ಪೀಠ ಜನವರಿಯಿಂದ ನಿರಂತರ ವಿಚಾರಣೆ ನಡೆಸುವುದಾಗಿ ಆದೇಶ ಹೊರಡಿಸಿತ್ತು.

ಅಯೋಧ್ಯೆ ಭೂ ವಿವಾದ: ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್​

ಅಯೋಧ್ಯೆಯಲ್ಲಿ ರಾಮೋತ್ಸಾಹದ ರಂಗು!