More

    ಪಬ್ಲಿಕ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪು: ರಾಜ್ಯ ಸರ್ಕಾರದ ನಿರ್ಧಾರವೇನು? ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸ್ಪಷ್ಟನೆ ಇಲ್ಲಿದೆ

    ಬೆಂಗಳೂರು ರಾಜ್ಯಪಠ್ಯಕ್ರಮ ಶಾಲೆಗಳ 5,8 ಮತ್ತು 9ನೇ ತರಗತಿ ಮೌಲ್ಯಾಂಕನ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ಮಧ್ಯಂತರ ತೀರ್ಪಿಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ಮುಂದುವರಿಯುವುದಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್‌ಕುಮಾರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

    ಸೋಮವಾರ ಸುಪ್ರೀಂಕೋರ್ಟ್‌ನಲ್ಲಿ ಪ್ರಕಟವಾದ ಮಧ್ಯಂತರ ತೀರ್ಪು ಕುರಿತಂತೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಪರೀಕ್ಷೆ ಮುಗಿದು, ಸೋಮವಾರ ಲಿತಾಂಶವನ್ನು ಕೂಡ ಪ್ರಕಟಿಸಲಾಗಿದೆ. 2023-24ನೇ ಸಾಲಿನ ಶೈಕ್ಷಣಿಕ ವರ್ಷ ಪೂರ್ಣಗೊಂಡಿದ್ದು, ಮಂಗಳವಾರದಿಂದ ಬೇಸಿಗೆ ರಜೆ ನೀಡಲಾಗಿದೆ ಎಂದು ಹೇಳಿದರು.

    ಈಗ ಸುಪ್ರೀಂಕೋರ್ಟ್ ತೀರ್ಪು ನೀಡಿರುವ ಕಾರಣ ಮತ್ತೆ ಶಾಲೆಗಳನ್ನು ತೆರೆಯಲು ಸಾಧ್ಯವಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಕೇವಿಯಟ್ ಸಲ್ಲಿಸಿಲ್ಲ. ಆದ್ದರಿಂದ ನಾವು ಮುಂದೆ ಯಾವ ನಿರ್ಧಾರ ಕೈಗೊಳ್ಳಬೇಕೆಂಬುದನ್ನು ರಾಜ್ಯ ಸರ್ಕಾರದ ಅಡ್ವೊಕೇಟ್ ಜನರಲ್ ಅವರಿಂದ ಕಾನೂನು ಸಲಹೆ ಪಡೆದು ಮುಂದುವರಿಯಲಾಗುತ್ತದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts