More

    ಮುಸ್ಲಿಮರ ಮೀಸಲಾತಿ ರದ್ದು; ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್​ ಗರಂ

    ನವದೆಹಲಿ: ಇತರೆ ಹಿಂದುಳಿದ ವರ್ಗಗಳ ಅಡಿಯಲ್ಲಿ ಮುಸ್ಲಿಮರಿಗೆ ನೀಡಲಾಗಿದ್ದ ಶೇ.4ರಷ್ಟು ಮೀಸಲಾತಿಯನ್ನು ರದ್ದುಪಡಿಸಿ ಆರ್ಥಿಕ ಹಿಂದುಳಿದ ವರ್ಗ(EWS)ಗಳಿಗೆ ಸೇರಿಸಿರುವ ರಾಜ್ಯ ಬಿಜೆಪಿ ಸರ್ಕಾರದ ಕ್ರಮಕ್ಕೆ ಸುಪ್ರೀಂ ಕೋರ್ಟ್​ ಗರಂ ಆಗಿದೆ.

    ಅರ್ಜಿ ವಿಚಾರಣೆ ನಡೆಸಿದ ಕೆ.ಎಂ.ಜೋಸೆಫ್​ ಹಾಗೂ ಬಿ.ವಿ.ನಾಗರತ್ನ ಅವರಿದ್ದ ದ್ವಿಸದಸ್ಯ ಪೀಠವು ಮುಸ್ಲಿಮರಿಗೆ ನೀಡಲಾಗಿದ್ದ ಶೇ.04ರಷ್ಟು ಮೀಸಲಾತಿಯನ್ನು ರದ್ದು ಮಾಡಿ ಒಕ್ಕಲಿಗ ಹಾಗೂ ಲಿಂಗಾಯತರ ಮೀಸಲಾತಿಯಲ್ಲಿ ಶೇ.02ರಷ್ಟು ಹೆಚ್ಚಿಸಿರುವುದು ದೋಷಪೂರಿತ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಜಾತ್ಯಾತೀತ ತತ್ವಗಳ ಉಲ್ಲಂಘನೆ

    ಕರ್ನಾಟಕದ ಜನಸಂಖ್ಯೆಯಲ್ಲಿ ಶೇ.13ರಷ್ಟು ಇರುವ ಮುಸ್ಲಿಮರಿಗೆ ನೀಡಿದ್ದ ಮೀಸಲಾತಿಯನ್ನು ತೆಗೆದುಹಾಕುವ ಮೂಲಕ ಬಿಜೆಪಿ ತಾರತಮ್ಯ ಎಸಗಿದೆ ಮತ್ತು ಇದು ಜಾತ್ಯಾತೀತ ತ್ವತಗಳ ಉಲ್ಲಂಘಟನೆ ಆಗಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದರು.

    ಇದನ್ನೂ ಓದಿ: UP ಪೊಲೀಸ್​-STF ಜಂಟಿ ಕಾರ್ಯಾಚರಣೆ; ಅತೀಕ್ ಪುತ್ರ, ಶೂಟರ್ ಗುಲಾಮ್​ ಹತ್ಯೆ

    ಮೀಸಲಾತಿಗೆ ಅರ್ಹವಾದ ಅಂಶಗಳನ್ನು ಪರಿಗಣಿಸಲಾಗಿದೆ

    ರಾಜ್ಯ ಸರ್ಕಾರದ ಪರ ವಾದ ಮಂಡಿಸಿದ ಸಾಲಿಸಿಟರ್​ ಜನರಲ್​ ತುಷಾರ್​ ಮೆಹ್ತಾ ರಾಜ್ಯದ ವಿವಿಧ ಸಮುದಾಯಗಳ ಸಾಮಾಜಿಕ-ಆರ್ಥಿಕ ಸ್ಥಿತಿಗತಿ ಮತ್ತು ವರದಿಗಳನ್ನು ಆಧರಿಸಿ ಮೀಸಲಾತಿಯನ್ನು ನೀಡಲಾಗಿದೆ ಎಂದು ತನ್ನ ನಿರ್ಧಾರವನ್ನು ಸಮರ್ಥಿಸಿಕೊಂಡಿದೆ.

    ಕರ್ನಾಟಕದ ಶೇ.40 ರಷ್ಟು ಜನಸಂಖ್ಯೆ ಇರುವ ಒಕ್ಕಲಿಗ ಹಾಗೂ ಲಿಂಗಾಯತರಿಗೆ ಹೆಚ್ಚಿನ ಮೀಸಲಾತಿ ನೀಡುವ ಕುರಿತ ಅಂಶಗಳನ್ನು ಪರಿಗಣಿಸಲಾಗಿದೆ. ಈ ಎರಡು ಸಮುದಾಯಗಳು ರಾಜಕೀಯವಾಗಿ ಪ್ರಬಲವಾಗಿದ್ದು ವಿವಿಧ ರಾಜಕೀಯ ಪಕ್ಷಗಳನ್ನು ಬೆಂಬಲಿಸುತ್ತಾ ಬಂದಿದ್ದಾರೆ ಎಂದು ಸಾಲಿಸಿಟರ್ ಜನರಲ್​ ತುಷಾರ್​​ ಮೆಹ್ತಾ ಹೇಳಿದ್ದಾರೆ.

    ಪುರಾವೆಗಳನ್ನು ಒದಗಿಸುವಂತೆ ಸೂಚನೆ

    ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಆಯೋಗ ನೀಡಿರುವ ವರದಿಯ ಸಿಂಧುತ್ವದ ಬಗ್ಗೆ ಅನುಮಾನ ವ್ಯಕ್ತಪಡಿಸಿದೆ. ಅದಕ್ಕೆ ಪೂರಕವಾದ ಪುರಾವೆಗಳನ್ನು ಒದಗಿಸುವಂತೆ ಸೂಚಿಸಿದೆ.

    1992ರಲ್ಲಿ ಸುಪ್ರೀಂ ಕೋರ್ಟ್​ ನೀಡಿದ ತೀರ್ಪಿನ ಅನ್ವಯ ಕರ್ನಾಟಕ ಸರ್ಕಾರವು ಮೀಸಲಾತಿಯಲ್ಲಿ ಮಿತಿಯನ್ನು ಶೇ.50ರಷ್ಟು ದಾಟಿದ್ದು ಇದಕ್ಕೆ ಸ್ಪಷ್ಟ ಕಾರಣಗಳನ್ನು ತಿಳಿಸಬೇಕಾಗುತ್ತದೆ ಎಂದು ಹೇಳಿ ಅರ್ಜಿ ವಿಚಾರಣೆಯನ್ನು ಏಪ್ರಿಲ್​ 18ಕ್ಕೆ ಮುಂದೂಡಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts