More

    ಅಪ್ರಾಪ್ತ ವಯಸ್ಸಿನ ಅಪರಾಧಿ ಎಂದು ಪರಿಗಣಿಸುವಂತೆ ಪವನ್​ಕುಮಾರ್​ ಗುಪ್ತಾ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್​

    ನವದೆಹಲಿ: ನಿರ್ಭಯಾ ಅತ್ಯಾಚಾರ ಘಟನೆ ನಡೆದಾಗ ತಾನು ಅಪ್ರಾಪ್ತ ವಯಸ್ಸಿನ ಬಾಲಕ. ಹೀಗಾಗಿ ಕೋರ್ಟ್​ ನನ್ನನ್ನು ಅಪ್ರಾಪ್ತ ಎಂದು ಪರಿಗಣಿಸುವಂತೆ ಪವನ್​ ಕುಮಾರ್​ ಗುಪ್ತಾ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂಕೋರ್ಟ್​ ಸೋಮವಾರ ವಜಾಗೊಳಿಸಿದೆ.

    2012 ರ ದೆಹಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಾಲ್ವರಲ್ಲಿ ಒಬ್ಬನಾದ ಪವನ್ ಕುಮಾರ್ ಗುಪ್ತಾನನ್ನು ಅಪ್ರಾಪ್ತ ವಯಸ್ಕನೆಂದು ಪರಿಗಣಿಸುವ ಅಗತ್ಯ ಇಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.

    ಅಲ್ಲದೆ ಫೆಬ್ರವರಿ 1 ರಂದು ಬೆಳಗ್ಗೆ 6 ಗಂಟೆಗೆ ಮರಣದಂಡನೆ ವಿಧಿಸಿರುವುದನ್ನು ನಿಲ್ಲಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ.

    ನ್ಯಾಯಮೂರ್ತಿ ಆರ್. ಬಾನುಮತಿ ನೇತೃತ್ವದ ನ್ಯಾಯಪೀಠ ಪವನ್​ ಗುಪ್ತಾ ಸಲ್ಲಿಸಿದ್ದ ವಿಶೇಷ ರಜೆ ಅರ್ಜಿಯನ್ನು ವಿಚಾರಣೆ ನಡೆಸಿತು.
    ಬಾಲ ಅಪರಾಧಿ ನ್ಯಾಯ ಕಾಯ್ದೆ ಅಡಿ ಯಾವುದೇ ಹಂತದಲ್ಲಿ ಆರೋಪಿಗಳು ತಮ್ಮ ವಯಸ್ಸಿನ ಮಾಹಿತಿ ತಿಳಿಸಲು ಅವಕಾಶ ಇದೆ. ಆದರೆ ಕೋರ್ಟ್​ ಮುಂದೆ ಈ ವಿಚಾರ ಈಗಾಗಲೇ ಬಂದಿದೆ. ಹೀಗಾಗಿ ಮತ್ತೆ ಈ ವಿಷಯದ ಬಗ್ಗೆ ವಿಚಾರಣೆ ಸಾಧ್ಯವಿಲ್ಲ ಎಂದು ಕೋರ್ಟ್​ ಅಭಿಪ್ರಾಯಟ್ಟಿದೆ.

    ಪವನ್​ ಕುಮಾರ್​ ಗುಪ್ತಾ ಅಪ್ರಾಪ್ತ ವಯಸ್ಸಿನ ಆರೋಪಿ ಎಂದು ಈಗಾಗಲೇ ವಿಚಾರಣಾ ನ್ಯಾಯಾಲಯ, ಹೈಕೋರ್ಟ್​ ಹಾಗೂ ಸುಪ್ರಿಂಕೋರ್ಟ್​ನಲ್ಲಿ ವಾದ ಮಂಡಿಸಲಾಗಿತ್ತು. ಮೂರು ಕೋರ್ಟ್​ಗಳು ವಾದ ಆಲಿಸಿ ಅರ್ಜಿಯನ್ನು ವಜಾಗೊಳಿಸಿದ್ದವು. ಇದನ್ನು ಗಮನಿಸಿದ ಸುಪ್ರೀಂಕೋರ್ಟ್​ ಮತ್ತೊಮ್ಮೆ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿತು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts