ನವದೆಹಲಿ: ನವೆಂಬರ್ 19 ಅಥವಾ 26 ರಂದು ಆರ್‌ಎಸ್‌ಎಸ್ ರ‍್ಯಾಲಿಗೆ ಅನುಮತಿ ನೀಡುವಂತೆ ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಇದನ್ನೂ ಓದಿ: ಭಾರತದಲ್ಲಿ ಮಾಲಿನ್ಯದಿಂದ ಉಂಟಾಗುವ ಸಾವುಗಳ ಸಂಖ್ಯೆ ಕೇಳಿದ್ರೆ ಬೆಚ್ಚಿ ಬೀಳ್ತೀರಿ: ಆಘಾತಕಾರಿಯಾಗಿದೆ ಅಂಕಿ ಅಂಶ….
ಆರ್‌ಎಸ್‌ಎಸ್ ಸಂಘಟನೆ ತಮಿಳುನಾಡಿನಲ್ಲಿ ಮೆರವಣಿಗೆ ನಡೆಸಲು ಇತ್ತೀಚೆಗೆ ಅನುಮತಿ ಕೋರಿತ್ತು. ಆದರೆ ಪೊಲೀಸರು ರ‍್ಯಾಲಿಗೆ ಅನುಮತಿ ನಿರಾಕರಿಸಿದ್ದರು. ಇದನ್ನು ಪ್ರಶ್ನಿಸಿ ಆರ್‌ಎಸ್‌ಎಸ್ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿತ್ತು.
ಮದ್ರಾಸ್ ಹೈಕೋರ್ಟ್ ಪ್ರಕರಣದ ವಿಚಾರಣೆ ನಡೆಸಿದ್ದು, ಕಳೆದ ವರ್ಷ ಸುಪ್ರೀಂ ಕೋರ್ಟ್ ವಿಧಿಸಿದ್ದ ಷರತ್ತುಗಳೊಂದಿಗೆ ಮೆರವಣಿಗೆ ನಡೆಸಲು ಅನುಮತಿ ನೀಡಿತ್ತು. ಆದರೆ ಹೈಕೋರ್ಟ್ ನೀಡಿದ ಅನುಮತಿ ವಿರುದ್ಧ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಅರ್ಜಿ ಸೋಮವಾರ(ನ.6) ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಂದಿತ್ತು.
ರ‍್ಯಾಲಿ ಸಾಗುವ ಮಾರ್ಗ ಯಾವುದಿರಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರ ಸರ್ಕಾರಕ್ಕಿದೆ. ಆದರೆ ಆರ್‌ಎಸ್‌ಎಸ್ ಉದ್ದೇಶಪೂರ್ವಕವಾಗಿ ಮಸೀದಿ ಮತ್ತು ಪ್ರಾರ್ಥನಾ ಸ್ಥಳಗಳಿರುವ ಪ್ರದೇಶಗಳಲ್ಲಿ ಹಾದುಹೋಗಲು ಅನುಮತಿ ಕೇಳುತ್ತಿದೆ. ಹೀಗಾಗಿ ಅನುಮತಿ ನಿರಾಕರಿಸಲಾಗಿದೆ ಎಂದು ತಮಿಳುನಾಡು ಸರ್ಕಾರ ವಾದಿಸಿತು.
ಇದನ್ನು ಆಲಿಸಿದ ನ್ಯಾಯಾಧೀಶರು, ಆರ್‌ಎಸ್‌ಎಸ್ ಸಂಘಟನೆ ರ‍್ಯಾಲಿ ಎಲ್ಲಿಂದ ಆರಂಭವಾಗಿ ಕೊನೆಗೊಳ್ಳಲಿದೆ ಎಂಬ ಮಾಹಿತಿಯನ್ನು ಇದೇ 9ರೊಳಗೆ ಸಲ್ಲಿಸಬೇಕು ಎಂದು ಆದೇಶಿಸಿತು.
ಸರ್ಕಾರಿ ಅಧಿಕಾರಿ ಪ್ರತಿಮಾ ಕೊಲೆ ರಹಸ್ಯ; ಕಾಲು ಹಿಡಿಯಲು ಬಂದು ಪ್ರಾಣ ತೆಗೆದ ಆರೋಪಿ