ಕೆ.ಕವಿತಾಗೆ ಜಾಮೀನು ಪ್ರಶ್ನಿಸಿದ ತೆಲಂಗಾಣ ಸಿಎಂ ಹೇಳಿಕೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

cm

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಆರ್​ಎಸ್ ನಾಯಕಿ ಕೆ.ಕವಿತಾ ಅವರಿಗೆ ಜಾಮೀನು ನೀಡಿರುವ ಕುರಿತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೀಡಿದ ಹೇಳಿಕೆಗೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಮಹಾರಾಷ್ಟ್ರ: ತಂದೆಯಿಂದ ಮಗಳಿಗೆ ಲೈಂಗಿಕ ಕಿರುಕುಳ: ಪ್ರಕರಣ ದಾಖಲು

ಜಾಮೀನು ಪಡೆಯಲು ಬಿಜೆಪಿ ಮತ್ತು ಬಿಆರ್​ಎಸ್ ನಡುವಿನ ಸಂಧಾನ ಕಾರಣವಾಗಿರಬಹುದು ಎಂಬ ಸಿಎಂ ರೇವಂತ್ ರೆಡ್ಡಿ ಅವರ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ತಂತಹ ಹೇಳಿಕೆಗಳು ಜನರ ಮನಸ್ಸಿನಲ್ಲಿ ಅವಮಾನಗಳನ್ನು ಮೂಡಿಸುತ್ತವೆ ಎಂದು ಹೇಳಿದೆ.
ರೇವಂತ್ ರೆಡ್ಡಿ ಅವರ ಹೇಳಿಕೆಯಿಂದ ಕೆರಳಿದ ಸುಪ್ರೀಂಕೋರ್ಟ್, ಇದು ನ್ಯಾಯಾಂಗದ ಬಗ್ಗೆ ಜನರ ಮನಸ್ಸಿನಲ್ಲಿ ಆತಂಕವನ್ನು ಉಂಟುಮಾಡಬಹುದು ಎಂದು ಹೇಳಿದೆ.

ಅವರು ಹೇಳಿದ್ದನ್ನು ನೀವು ಸುದ್ದಿ ಪತ್ರಿಕೆಯಲ್ಲಿ ಓದಿದ್ದೀರಾ? ಅವರು ಹೇಳಿರುವುದನ್ನು ಓದಿ. ಒಬ್ಬ ಜವಾಬ್ದಾರಿಯುತ ಮುಖ್ಯಮಂತ್ರಿ ನೀಡುವ ಹೇಳಿಕೆಯೇ ಇದು?. ಅವರ ಹೇಳಿಕೆ ಜನರ ಮನಸ್ಸಿನಲ್ಲಿ ಆತಂಕವನ್ನು ಉಂಟುಮಾಡಬಹುದು. ಇದು ಮುಖ್ಯಮಂತ್ರಿಯೊಬ್ಬರು ಮಾಡಬೇಕಾದ ಹೇಳಿಕೆಯೇ? ಸಾಂವಿಧಾನಿಕ ಅಧಿಕಾರಿಯೊಬ್ಬರು ಈ ರೀತಿ ಮಾತನಾಡುತ್ತಿದ್ದಾರೆಯೇ? ಎಂದು ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು ರೆಡ್ಡಿ ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರಿಗೆ ಹೇಳಿದೆ.

ನಾವು ರಾಜಕೀಯ ಪಕ್ಷದೊಂದಿಗೆ ಚರ್ಚಿಸಿ ನಮ್ಮ ಆದೇಶವನ್ನು ನೀಡಬೇಕೇ? ಹೇಳಿಕೆಗೆ ಆಧಾವಿರಬೇಕು. ಯಾರಾದರೂ ಟೀಕಿಸಿದರೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಮ್ಮ ಆತ್ಮಸಾಕ್ಷಿಯಂತೆ ನಾವು ನಮ್ಮ ಕರ್ತವ್ಯವನ್ನು ಮಾಡುತ್ತೇವೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ತಿರುಗೇಟು ನೀಡಿದ್ದಾರೆ.

ಮನೀಶ್ ಸಿಸೋಡಿಯಾ ಅವರಿಗೆ 15 ತಿಂಗಳ ಬಳಿಕ ಜಾಮೀನು ಸಿಕ್ಕಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಹ ಇನ್ನೂ ಕಾಯುತ್ತಿದ್ದಾರೆ. ಆದರೆ ಕವಿತಾ ಅವರಿಗೆ ಐದೇ ತಿಂಗಳಲ್ಲಿ ಸಿಕ್ಕಿದೆ. ಈ ಬಗ್ಗೆ ಹಲವು ಅನುಮಾನಗಳಿವೆ. ಬಿಆರ್​ಎಸ್​ ಮತ್ತು ಬಿಜೆಪಿ ಜೊತೆಗಿನ ಸಂಧಾನದ ಫಲವಾಗಿ ಈಗ ಜಾಮೀನು ಸಿಕ್ಕಿರಬಹುದು ಎಂದು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಮಾಧ್ಯಮಗಳ ಜೊತೆ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದರು.

ಸಂಸ್ಥೆಗಳ ಬಗ್ಗೆ ಪರಸ್ಪರ ಗೌರವವನ್ನು ಹೊಂದುವುದು ಮತ್ತು ಒಂದು ತೋಳಿನ ಅಂತರವನ್ನು ಕಾಯ್ದುಕೊಳ್ಳುವುದು ಮೂಲಭೂತ ಕರ್ತವ್ಯ ಎಂದು ಸುಪ್ರೀಂಕೋರ್ಟ್ ಹೇಳಿದೆ. ರೆಡ್ಡಿ ಆರೋಪಿಯಾಗಿರುವ ಭೋಪಾಲ್‌ಗೆ ಸಂಬಂಧಿಸಿದ 2015ರ ವೋಟಿಗಾಗಿ ಕಾಸು ಪ್ರಕರಣದ ವಿಚಾರಣೆಯ ವೇಳೆ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿತು. ಆ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ವಿಶೇಷ ಪ್ರಾಸಿಕ್ಯೂಟರ್ ಒಬ್ಬರು ನಡೆಸಲಿದ್ದಾರೆ.

ಮಹಾರಾಷ್ಟ್ರಕ್ಕೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ; ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

Share This Article

Chanakya Niti: ದಾಂಪತ್ಯ ಜೀವನ ಸುಂದರವಾಗಿರಲು 4 ವಿಷಯಗಳನ್ನು ಅನುಸರಿಸಿ….

ಬೆಂಗಳೂರು:  ವಿದ್ವಾಂಸರಲ್ಲಿ ಚಾಣಕ್ಯರು ( Chanakya Niti ) ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ…

Tamarind Juice : ಹುಣಸೆ ಹಣ್ಣಿನ ರಸದ ಅದ್ಭುತ ಪ್ರಯೋಜನಗಳಿವು…

ಬೆಂಗಳೂರು:  ಹುಣಸೆಹಣ್ಣು ಭಾರತೀಯ ಪಾಕಪದ್ಧತಿಯಲ್ಲಿ ಬಳಸುವ ಪದಾರ್ಥಗಳಲ್ಲಿ ಒಂದಾಗಿದೆ. ಹುಣಸೆಹಣ್ಣು ಸ್ವಲ್ಪ ಸಿಹಿ ಮತ್ತು ಸ್ವಲ್ಪ…

ಅನ್ನ ಬಿಟ್ಟು ಚಪಾತಿ ತಿಂದ್ರೆ ನಿಜವಾಗಿಯೂ ತೂಕ ಇಳಿಕೆಯಾಗುತ್ತಾ? ಇಲ್ಲಿದೆ ನೋಡಿ ಅಸಲಿ ಸಂಗತಿ… Chapati

ತೂಕ ಇಳಿಸಿಕೊಳ್ಳಲು ( Weight loss ) ಯಾರಾದರೂ ಸಲಹೆ ಕೇಳಿದಾಗ ಎಲ್ಲರೂ ಮೊದಲು ಹೇಳುವುದೇ…