More

    ಸಿಸೋಡಿಯಾಗೆ ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್​: ಇನ್ನೂ 6ತಿಂಗಳು ಜೈಲಲ್ಲೇ ಇರಬೇಕಾ?

    ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದ್ದರಿಂದ ಆಪ್(ಆಮ್​ ಆದ್ಮಿ ಪಾರ್ಟಿ) ಹಿರಿಯ ನಾಯಕ ಮನೀಶ್ ಸಿಸೋಡಿಯಾ ಇನ್ನೂ ಆರು ತಿಂಗಳು ಜೈಲಿನಲ್ಲೇ ಇರಬೇಕಾಗಿದೆ.

    ಇದನ್ನೂ ಓದಿ: ಶಿವಸೇನೆ, ಎನ್‌ಸಿಪಿ ಶಾಸಕರ ಅನರ್ಹತೆ ಅರ್ಜಿಗಳ ಇತ್ಯರ್ಥಕ್ಕೆ ಮಹಾರಾಷ್ಟ್ರ ಸ್ಪೀಕರ್‌ಗೆ ಸುಪ್ರೀಂ ಗಡುವು

    ಪ್ರಕರಣದಲ್ಲಿ 338 ಕೋಟಿ ರೂ. ಹಣ ವರ್ಗಾವಣೆಗೆ ಸಂಬಂಧಿಸಿದಂತೆ ತಾತ್ಕಾಲಿಕವಾಗಿ ಸ್ಥಾಪಿತವಾಗಿರುವ ಕೆಲವು ಅಂಶಗಳ ಬಗ್ಗೆ ಅನುಮಾನವಿದೆ. ಹೀಗಾಗಿ ಜಾಮೀನನ್ನು ತಿರಸ್ಕರಿಸಿದ್ದೇವೆ ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್‌ವಿಎನ್ ಭಟ್ಟಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಹೇಳಿದೆ. ಇದೇ ವೇಳೆ ನ್ಯಾಯಾಲಯವು 6-8 ತಿಂಗಳಲ್ಲಿ ವಿಚಾರಣೆಯನ್ನು ಪೂರ್ಣಗೊಳಿಸಲು ತನಿಖಾ ಸಂಸ್ಥೆಗಳಿಗೆ ಆದೇಶಿಸಿದೆ.

    ವಿಚಾರಣೆ ನಿಧಾನವಾಗಿ ಮುಂದುವರಿದರೆ ಮೂರು ತಿಂಗಳ ನಂತರ ಸಿಸೋಡಿಯಾ ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದು ನ್ಯಾಯಾಲಯ ತಿಳಿಸಿತು.
    “ನಾವು ವಾದಗಳನ್ನು ಮತ್ತು ಕೆಲವು ಕಾನೂನು ಪ್ರಶ್ನೆಗಳನ್ನು ಉಲ್ಲೇಖಿಸಿದ್ದೇವೆ. ಆದರೆ ಅವುಗಳಲ್ಲಿ ಹೆಚ್ಚಿನವುಗಳಿಗೆ ನಾವು ಉತ್ತರಿಸಿಲ್ಲ. ಮನೀಶ್ ಸಿಸೋಡಿಯಾ ಅವರನ್ನು ಅನಿರ್ದಿಷ್ಟ ಅವಧಿಗೆ ಜೈಲಿನಲ್ಲಿಡಲು ಸಾಧ್ಯವಿಲ್ಲ. ಆರೋಪಪಟ್ಟಿ ಸಲ್ಲಿಸಿದ ನಂತರ ವಾದಗಳನ್ನು ಪ್ರಾರಂಭಿಸಬೇಕು ಎಂದು ಸುಪ್ರೀಂ ಕೋರ್ಟ್ ಈ ಹಿಂದೆ ಹೇಳಿತ್ತು.

    ಎಎಪಿ ಇನ್ನೂ ಪ್ರತಿಕ್ರಿಯಿಸಿಲ್ಲ: ಸಿಸೋಡಿಯಾ ಅವರಿಗೆ ಜಾಮೀನು ನಿರಾಕರಿಸಿರುವ ಸುಪ್ರೀಂ ಕೋರ್ಟ್ ಎಎಪಿ ನಾಯಕತ್ವ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸ್ಪಷ್ಟಪಡಿಸುತ್ತದೆ ಎಂದು ಬಿಜೆಪಿ ಸಂಸದ ಮನೋಜ್ ತಿವಾರಿ ಹೇಳಿದ್ದಾರೆ. ಎಎಪಿಯ ಉನ್ನತ ನಾಯಕರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಎಎಪಿ ನಾಯಕತ್ವವು ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿರುವ ಕಾರಣ ಅರವಿಂದ್ ಕೇಜ್ರಿವಾಲ್ ಅವರನ್ನು ಖಂಡಿತವಾಗಿಯೂ ಬಂಧಿಸಲಾಗುವುದು ಎಂದು ತಿವಾರಿ ಹೇಳಿದರು.

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಉನ್ನತ ಸಹಾಯಕ ಸಿಸೋಡಿಯಾ ಅವರನ್ನು ಫೆ.26 ರಂದು ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಯಿತು. ಅಲ್ಲಿಂದ ಅವರು ಜೈಲಿನಲ್ಲಿದ್ದಾರೆ. ಜಾರಿ ನಿರ್ದೇಶನಾಲಯ ಕೂಡ ಅವರನ್ನು ತಿಹಾರ್ ಜೈಲಿನಲ್ಲಿ ಪ್ರಶ್ನಿಸಿದ ನಂತರ ಮಾ.9 ರಂದು ಕೇಂದ್ರೀಯ ತನಿಖಾ ದಳ (ಸಿಬಿಐ) ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ಬಂಧಿಸಿತ್ತು.

    Tiger Claw Case; ಜಗ್ಗೇಶ್​ಗೆ ರಿಲೀಫ್ ನೀಡಿದ ಹೈಕೋರ್ಟ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts