More

    ಮಾಜಿ ಡಿಸಿಎಂ ಮನೀಶ್ ಸಿಸೊಡಿಯಾ ಮತ್ತಷ್ಟು ದಿನ ಜೈಲಿನಲ್ಲೇ: 2ನೇ ಬಾರಿಗೆ ಜಾಮೀನು ಅರ್ಜಿ ವಜಾ!

    ನವದೆಹಲಿ: ದೆಹಲಿ ಮದ್ಯ ಅಬಕಾರಿ ನೀತಿ ತನಿಖೆಗೆ ಸಂಬಂಧಿಸಿದಂತೆ ಸಿಬಿಐ ಮತ್ತು ಇಡಿ ದಾಖಲಿಸಿದ ಪ್ರಕರಣಗಳಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸಲ್ಲಿಸಿದ್ದ ಎರಡನೇ ಜಾಮೀನು ಅರ್ಜಿಯನ್ನು ದೆಹಲಿಯ ನ್ಯಾಯಾಲಯ ಏ.30 ರಂದು ವಜಾಗೊಳಿಸಿದೆ. ಏ.20 ರಂದು ಕಾಯ್ದಿರಿಸಿದ ತೀರ್ಪನ್ನು ನ್ಯಾ.ಕಾವೇರಿ ಬವೇಜಾ ಪ್ರಕಟಿಸಿದರು.

    ಇದನ್ನೂ ಓದಿ: 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗಿ: ಪ್ರಜ್ವಲ್‌, ಎಚ್‌ಡಿ ರೇವಣ್ಣಗೆ ಎಸ್‌ಐಟಿ ನೋಟಿಸ್‌!

    ಕೇಂದ್ರ ತನಿಖಾ ದಳ ಮತ್ತು ಇಡಿ ಪ್ರಕರಣಗಳಲ್ಲಿ ಸಿಸೋಡಿಯಾ ಜಾಮೀನು ಕೋರಿದ್ದರು. ಹೀಗಾಗಿ ಅವರು ಜೈಲಿನಲ್ಲೇ ಉಳಿಯುವಂತಾಗಿದೆ. ದೆಹಲಿ ಸಿಎಂ ಕೇಜ್ರಿವಾಲ್ ಕೂಡ ಇದೇ ಪ್ರಕರಣದಲ್ಲಿ ಜೈಲಿನಲ್ಲಿದ್ದಾರೆ. ಹೀಗಾಗಿ ಇಬ್ಬರೂ ಇನ್ನಷ್ಟು ದಿನ ಜೈಲಿನಲ್ಲೇ ದಿನ ಕಳೆಯುಂತಾಗಿದೆ.

    ವಿಚಾರಣೆ ವೇಳೆ ಸಿಬಿಐ ಪರ ವಾದ ಮಂಡಿಸಿದ್ದ ಸಿಬಿಐ ಪ್ರಾಸಿಕ್ಯೂಟರ್ ಪಂಕಜ್ ಗುಪ್ತಾ, ಜಾಮೀನು ಅರ್ಜಿಯನ್ನು ವಿರೋಧಿಸಿದರು. ಸಿಸೋಡಿಯಾ ಅವರು ರಾಜಕೀಯ ಪ್ರಭಾವ ಹೊಂದಿರುವ ಪ್ರಬಲ ವ್ಯಕ್ತಿ, ಪ್ರಕರಣದ ಪ್ರಮುಖ ಆರೋಪಿಯಾಗಿರುವ ಸಿಸೋಡಿಯಾ, ಇತರೆ ಆರೋಪಿಗಳ ಸಮಾನತೆಗೆ ಅರ್ಹರಲ್ಲ ಎಂದು ವಾದಿಸಿದರು. ಸಿಸೋಡಿಯಾ ಅವರು ಸಾಕ್ಷ್ಯ ನಾಶ ಮತ್ತು ಅಧಿಕಾರದ ದುರುಪಯೋಗ ಮಾಡಿಕೊಳ್ಳಬಹುದು. ಇದು ತನಿಖೆಗೆ ಅಡ್ಡಿಯಾಗಬಹುದು ಎಂದು ಗುಪ್ತಾ ಹೇಳಿದರು.

    ವಿಚಾರಣಾ ನ್ಯಾಯಾಲಯವು ಸಿಸೋಡಿಯಾ ಅವರ ಜಾಮೀನು ಅರ್ಜಿ ತಿರಸ್ಕರಿಸುತ್ತಿರುವುದು ಇದು ಎರಡನೇ ಬಾರಿ. ಸಿಬಿಐ ಪ್ರಕರಣದಲ್ಲಿ ಅವರ ಮೊದಲ ಜಾಮೀನು ಅರ್ಜಿಯನ್ನು ಮಾರ್ಚ್ 31, 2023 ರಂದು ತಿರಸ್ಕರಿಸಲಾಗಿತ್ತು. ಏಪ್ರಿಲ್ 28 ರಂದು ವಿಚಾರಣಾ ನ್ಯಾಯಾಲಯವು ಇಡಿ ಪ್ರಕರಣದಲ್ಲಿ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ವಿಚಾರಣಾ ನ್ಯಾಯಾಲಯದ ಆದೇಶವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿತ್ತು.

    ಮನೀಶ್ ಸಿಸೋಡಿಯಾ ಅವರು ಫೆಬ್ರವರಿ 28, 2023 ರಂದು ದೆಹಲಿ ಸಂಪುಟಕ್ಕೆ ರಾಜೀನಾಮೆ ನೀಡಿದರು.

    ಕಾಂಗ್ರೆಸ್​ಗೆ ಬಿಗ್‌ ಶಾಕ್: ಆರು ಬಾರಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾವತ್ ಬಿಜೆಪಿಗೆ ಸೇರ್ಪಡೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts