More

    ನಿರ್ಭಯಾ ಪ್ರಕರಣ: ಅಪರಾಧಿ ಅಕ್ಷಯ್​ ಸಿಂಗ್​ ಸಲ್ಲಿಸಿದ್ದ ಕ್ಯುರೇಟಿವ್​ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

    ನವದೆಹಲಿ: ನಿರ್ಭಯಾ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ಅಕ್ಷಯ್​ ಸಿಂಗ್​ ಸಲ್ಲಿಸಿದ್ದ ಕ್ಯುರೇಟಿವ್​ ಅರ್ಜಿಯನ್ನು ಸುಪ್ರೀಂಕೋರ್ಟ್​ ಗುರುವಾರ ವಜಾಗೊಳಿಸಿದೆ.

    ನ್ಯಾಯಮೂರ್ತಿಗಳಾದ ಆರ್​.ವಿ. ರಮಣ, ಅರುಣ್​ ಮಿಶ್ರಾ, ಆರ್​.ಎಫ್​. ನಾರಿಮನ್​, ಆರ್​. ಭಾನುಮತಿ ಮತ್ತು ಅಶೋಕ್​ ಭೂಷಣ್​ ಅವರನ್ನೊಳಗೊಂಡ ಪಂಚ ಸದಸ್ಯ ಪೀಠವು ತೀರ್ಪನ್ನು ನೀಡಿದ್ದು, ಅಕ್ಷಯ್ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಹೇಳಿ ವಜಾಗೊಳಿಸಿದೆ.

    ಗಲ್ಲುಶಿಕ್ಷೆಗೆ ಗುರಿಯಾಗಿರುವ ಅಪರಾಧಿಗಳಿಗೆ ಕಾನೂನಿನ ಅಡಿಯಲ್ಲಿ ಇರುವ ಕೊನೆಯ ಅವಕಾಶವೆಂದರೆ ಅದು ಕ್ಯುರೇಟಿವ್​ ಅರ್ಜಿ. ಇದೀಗ ಅರ್ಜಿ ತಿರಸ್ಕಾರವಾಗಿರುವ ಹಿನ್ನೆಲೆಯಲ್ಲಿ ಉಳಿದಿರುವ ಒಂದೇ ಒಂದು ಅವಕಾಶವೆಂದರೆ ರಾಷ್ಟ್ರಪತಿಗಳಿಗೆ ಕ್ಷಮಾಧಾನ ಅರ್ಜಿ ಸಲ್ಲಿಸುವುದಾಗಿದೆ.

    ಅಂದಹಾಗೆ ಅಪರಾಧಿ ಅಕ್ಷಯ್​ ಠಾಕೂರ್,​ ಮಂಗಳವಾರ ಸುಪ್ರೀಂಕೋರ್ಟ್​ನಲ್ಲಿ ಕ್ಯುರೇಟಿವ್​ ಅರ್ಜಿ ದಾಖಲಿಸಿರುವುದಾಗಿ ತಿಹಾರ್​ ಜೈಲು ಅಧಿಕಾರಿಗಳು ಮಾಹಿತಿ ನೀಡಿದ್ದರು.

    ಅಪರಾಧಿಗಳಾದ ಮುಕೇಶ್​ ಕುಮಾರ್​ ಸಿಂಗ್​, ಪವನ್​ ಕುಮಾರ್​ ಗುಪ್ತ, ವಿನಯ್​ ಕುಮಾರ್​ ಶರ್ಮ ಮತ್ತು ಅಕ್ಷಯ್​ ಕುಮಾರ್​ ಸಿಂಗ್​ಗೆ ಫೆ. 1ಕ್ಕೆ ಗಲ್ಲು ಶಿಕ್ಷೆ ನಿಗದಿಯಾಗಿದೆ.

    23 ವರ್ಷದ ಪ್ಯಾರಾಮೆಡಿಕಲ್​ ವಿದ್ಯಾರ್ಥಿನಿಯನ್ನು ಡಿಸೆಂಬರ್​ 16, 2012ರಂದು ಬಾಲಾಪಾರಾಧಿ ಸೇರಿದಂತೆ ಒಟ್ಟು ಆರು ಮಂದಿ ಮೃಗೀಯವಾಗಿ ಅತ್ಯಾಚಾರವೆಸಗಿ, ಕೊಲೆಗೈದು ವಿಕೃತಿ ಮೆರೆದಿದ್ದರು.

    ಒಟ್ಟು ಆರು ಅಪರಾಧಿಗಳಲ್ಲಿ ರಾಮ ಸಿಂಗ್​ ತಿಹಾರ್​ ಜೈಲಿನಲ್ಲೇ 2013 ಮಾರ್ಚ್​ನಲ್ಲಿ ಪಾಪಾಪ್ರಜ್ಞೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದ. ಮತ್ತೊಬ್ಬ ಬಾಲಾಪಾರಾಧಿಯನ್ನು ಅಪರಾಧ ನಡೆದ ಮೂರು ವರ್ಷಗಳ ಬಳಿಕ ಬಿಡುಗಡೆ ಮಾಡಲಾಗಿತ್ತು. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts