ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಅರ್ಜಿ ಜೊತೆಗೆ ತಮ್ಮ ಬಂಧನ ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ ವಿಚಾರಣೆ ನಡೆಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.
ಇದನ್ನೂ ಓದಿ: ಇಬ್ಬರು ಗಂಡುಮಕ್ಕಳ ಮೃತದೇಹ ಹೊತ್ತು ಕೆಸರಲ್ಲಿ 15ಕಿಮೀ ನಡೆದ ತಂದೆ-ತಾಯಿ!
ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ಪೀಠವು ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿ ತೀರ್ಪನ್ನು ಮಂಗಳವಾರಕ್ಕೆ ಕಾಯ್ದಿರಿಸಿತು.
ಕೇಜ್ರಿವಾಲ್ ಮದ್ಯ ಹಗರಣ ಪ್ರಕರಣದಲ್ಲಿ ಜಾಮೀನು ಸಹಿತ ಬಂಧನದ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ.
2024ರ ಮಾರ್ಚ್ 21 ರಂದು ದೆಹಲಿ ಮದ್ಯ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ನಂತರ ಅವರನ್ನು ತೀಹಾರ್ ಜೈಲಿಗೆ ಕರೆದೊಯ್ಯಲಾಯಿತು. ಜೂನ್ 26ರಂದು ಸಿಬಿಐ ಅವರನ್ನು ಬಂಧಿಸಿತ್ತು. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಆದರೆ ಸಿಬಿಐ ಈಗಾಗಲೇ ಅವರನ್ನು ಬಂಧಿಸಿದ್ದರಿಂದ ಕೇಜ್ರಿವಾಲ್ ತಿಹಾರ್ ಜೈಲಿನಲ್ಲೇ ಇದ್ದಾರೆ.
ಸಿಂಹಕ್ಕೂ ಇದೆ ಮಾತೃಹೃದಯ.. ಮರಿ ನೀರಿಗೆ ಬಿದ್ದಾಗ ತಾಯಿ ಮಾಡಿದ್ದೇನು ಗೊತ್ತಾ?