More

    ಇವಿಎಂ ಮತ್ತು ವಿವಿಪ್ಯಾಟ್‌ ಮತಗಳ ತಾಳೆ ವಿವಾದ: ತೀರ್ಪು ಕಾಯ್ದಿರಿಸಿದ ಕೋರ್ಟ್

    ನವದೆಹಲಿ: ಇವಿಎಂ ಮತ್ತು ವಿವಿಪ್ಯಾಟ್ ದಾಖಲಾಗಿರುವ ಮತಗಳನ್ನು ಶೇ.100ರಷ್ಟು ತಾಳೆ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಕ್ತಾಯಗೊಳಿಸಿದೆ. ಆದರೆ ತೀರ್ಪನ್ನು ಕಾಯ್ದಿರಿಸಿದೆ.

    ಇದನ್ನೂ ಓದಿ: ಆಂಧ್ರ ಚುನಾವಣೆ: ಜನಸೇನಾ ಸಂಸ್ಥಾಪಕ ಪವನ್ ಕಲ್ಯಾಣ್ ಆಸ್ತಿಯ ಮೌಲ್ಯ ಎಷ್ಟು ಗೊತ್ತಾ…?

    ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ ಬದಲು ಹಿಂದಿನ ಬ್ಯಾಲಟ್ ಪೇಪರ್ ವೋಟಿಂಗ್ ವ್ಯವಸ್ಥೆ ಬಗ್ಗೆ ಜಡ್ಜ್​ಗಳು ಅಸಮಾಧಾನ ವ್ಯಕ್ತಪಡಿಸಿದ್ದರು. ಹಾಗೆಯೇ, ವಿವಿಪ್ಯಾಟ್ ವಿಚಾರದಲ್ಲಿ ನ್ಯಾಯಾಧೀಶರು ಪ್ರತಿಕ್ರಿಯಿಸಿದ್ದು ನಾವು ಚುನಾವಣೆ ಹಾಗೂ ಇನ್ನೊಂದು ಸಾಂವಿಧಾನಿಕ ಸಂಸ್ಥೆಯನ್ನು ನಿಯಂತ್ರಿಸಲು ಆಗುವುದಿಲ್ಲ ಎಂದು ಹೇಳಿತು.

    ಇದಕ್ಕೂ ಮುನ್ನ ಹಲವು ಗೊಂದಲಗಳಿಗೆ ಸ್ಪಷ್ಟೀಕರಣ ಕೇಳಲು ಚುನಾವಣಾ ಆಯೋಗದ ಅಧಿಕಾರಿಯೊಬ್ಬರು ಹಾಜರಿರಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು.

    ಈ ನ್ಯಾಯಪೀಠದಲ್ಲಿ ನ್ಯಾ. ಸಂಜೀವ್ ಖನ್ನ ಮತ್ತು ನ್ಯಾ. ದೀಪಂಕರ್ ದತ್ತ ಇದ್ದಾರೆ. ಅರ್ಜಿದಾರರ ಪರವಾಗಿ ಪ್ರಶಾಂತ್ ಭೂಷಣ್ ಮೊದಲಾದ ಹಿರಿಯ ವಕೀಲರು ವಾದ ಮಾಡಿದ್ದಾರೆ.

    ತೆಲಂಗಾಣದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ, ಮದುವೆಗೆ ಹೊರಟಿದ್ದ 65 ಮಂದಿ ಪ್ರಾಣಾಪಾಯದಿಂದ ಪಾರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts