

Waqf : ಇತ್ತೀಚಿಗೆ ಜಾರಿಗೆ ತಂದ ವಕ್ಫ್ ಕಾಯ್ದೆ ನಿಂಬಂಧನೆಗಳಿಗೆ(ತಿದ್ದುಪಡಿ) ಸುಪ್ರೀಂಕೋರ್ಟ್ 7 ದಿನಗಳವರೆಗೆ ತಡೆಹಿಡಿದಿದೆ. ಅಲ್ಲದೆ, ಮುಂದಿನ ವಿಚಾರಣೆವರೆಗೂ ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಸಿಜೆಐ ಸಂಜಿವ್ ಖನ್ನಾ, ನ್ಯಾಯಮೂರ್ತಿಗಳಾದ ಸಂಜಯ್ ಕುಮಾರ್, ಕೆ.ವಿ.ವಿಶ್ವನಾಥ್ ಅವರಿದ್ದ ತ್ರಿಸದಸ್ಯ ಪೀಠ ಗುರುವಾರ ಆದೇಶ ನೀಡಿದೆ.
ಅರ್ಜಿಗಳಿಗೆ ಒಂದು ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸರ್ಕಾರಕ್ಕೆ ಕೋರ್ಟ್ ಆದೇಶ ನೀಡಿದೆ. ಅಲ್ಲದೆ, ತಿದ್ದುಪಡೆ ಕಾಯ್ದೆಯನ್ನು ಪ್ರಶ್ನಿಸುವ ಅರ್ಜಿದಾರರು 5 ದಿನಗಳಲ್ಲಿ ಮರುಪ್ರತ್ಯಾರೋಪ ಸಲ್ಲಿಸಲು ನ್ಯಾಯಾಲಯ ಅವಕಾಶ ಮಾಡಿಕೊಟ್ಟಿದ್ದು, ಮೇ.5ಕ್ಕೆ ವಿಚಾರಣೆ ಮುಂದೂಡಿದೆ.
ಈ 7 ದಿನಗಳ ಅವಧಿಯಲ್ಲಿ ಕೇಂದ್ರ ವಕ್ಫ್ ಕೌನ್ಸಿಲ್ ಅಥವಾ ರಾಜ್ಯ ವಕ್ಫ್ ಮಂಡಳಿಗಳಿಗೆ ಯಾವುದೇ ನೇಮಕಾತಿಗಳನ್ನು ಮಾಡುವುದಿಲ್ಲ ಎಂದು ನ್ಯಾಯಾಲಯಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದ್ದು, ಪೀಠ ಪುರಸ್ಕರಿಸಿದೆ.(ಏಜೆನ್ಸೀಸ್)