More

    ಸಿಎಎ ಕುರಿತು ಇಂದು ಮಹತ್ವದ ನಿರ್ಧಾರ; ಸುಪ್ರೀಂ ಕೋರ್ಟ್‌ನಲ್ಲಿ 230 ಅರ್ಜಿಗಳ ವಿಚಾರಣೆ, ಅರ್ಜಿದಾರರ ಬೇಡಿಕೆಯೇನು?

    ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2024 ರ ಮಹತ್ವದ ನಿರ್ಧಾರ ಇಂದು ಬರಬಹುದು. ಕಾಯ್ದೆಯ ವಿರುದ್ಧ ಸಲ್ಲಿಕೆಯಾಗಿರುವ 200ಕ್ಕೂ ಹೆಚ್ಚು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಡೆಸಲಿದ್ದು, ಸಿಎಎ ಕಾನೂನಿನ ನಿಬಂಧನೆಗಳನ್ನು ನಿಷೇಧಿಸಬೇಕೆಂದು ಅರ್ಜಿಗಳು ಒತ್ತಾಯಿಸಿವೆ.
    ಸುಪ್ರೀಂ ಕೋರ್ಟ್ ಈ ಬಗ್ಗೆ ತೀರ್ಪು ನೀಡುವವರೆಗೆ ಕಾನೂನಿನ ನಿಬಂಧನೆಗಳನ್ನು ಜಾರಿಗೊಳಿಸಬಾರದು ಎಂದು ಅರ್ಜಿಗಳಲ್ಲಿ ಹೇಳಲಾಗಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ ಅವರ ಪೀಠವು ಅರ್ಜಿಗಳ ವಿಚಾರಣೆ ನಡೆಸಲಿದೆ.

    ಮುಸ್ಲಿಮರ ವಿರುದ್ಧ ತಾರತಮ್ಯ
    1955 ರಲ್ಲಿ ಮಾಡಿದ ಪೌರತ್ವ ಮಸೂದೆಯನ್ನು 2019 ರಲ್ಲಿ ತಿದ್ದುಪಡಿ ಮಾಡಲಾಗಿದೆ. 2019 ರಲ್ಲಿಯೇ, ಪೌರತ್ವ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಅಂಗೀಕರಿಸಲಾಯಿತು. 5 ವರ್ಷಗಳ ನಂತರ ಕೇಂದ್ರ ಸರ್ಕಾರವು ಮಾರ್ಚ್ 11 ರಂದು ಇದನ್ನು ಜಾರಿಗೆ ತಂದಿತು, ಆದರೆ ಇದನ್ನು ಮುಸ್ಲಿಮರು ವಿರೋಧಿಸಿದ್ದಾರೆ. ಸಿಎಎ ಮುಸ್ಲಿಂ ಸಮುದಾಯದ ವಿರುದ್ಧ ತಾರತಮ್ಯ ಮಾಡುತ್ತದೆ. ಆದ್ದರಿಂದ ಈ ಪದ್ಧತಿಯನ್ನು ನಿಷೇಧಿಸಬೇಕು ಎಂದು ಅರ್ಜಿದಾರರು ಹೇಳಿದ್ದಾರೆ.

    ಸಿಎಎಯನ್ನು ಮೊದಲು ವಿರೋಧಿಸಿದ್ದು ಕೇರಳ
    2020 ರಲ್ಲಿ, ಸಿಎಎಯನ್ನು ಪ್ರಶ್ನಿಸಿ ಕೇರಳ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿತ್ತು. ಕೇರಳ ಇದನ್ನು ಭಾರತೀಯ ಸಂವಿಧಾನದ ಅಡಿಯಲ್ಲಿ ಸಮಾನತೆಯ ಹಕ್ಕನ್ನು ಉಲ್ಲಂಘಿಸುವ ಕಾನೂನು ಎಂದು ಕರೆದಿದೆ. ಕೇರಳ ಮೂಲದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಸಲ್ಲಿಸಿದ್ದ ಅರ್ಜಿಯನ್ನು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ಕಳೆದ ವಾರ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದರು.

    2024 ರ ಲೋಕಸಭಾ ಚುನಾವಣೆಗೆ ಕೆಲವು ದಿನಗಳ ಮೊದಲು ಸಿಎಎ ಅನ್ನು ಜಾರಿಗೊಳಿಸುವ ಕೇಂದ್ರ ಸರ್ಕಾರದ ಕ್ರಮದ ಬಗ್ಗೆ ಅರ್ಜಿಯು ಪ್ರಶ್ನೆಗಳನ್ನು ಎತ್ತಿತ್ತು. ಅರ್ಜಿದಾರರಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಅಸ್ಸಾಂ ಕಾಂಗ್ರೆಸ್ ನಾಯಕ ದೇಬಬ್ರತ ಸೈಕಿಯಾ, ಟಿಎಂಸಿ ನಾಯಕ ಮಹುವಾ ಮೊಯಿತ್ರಾ, ಎನ್‌ಜಿಒಗಳಾದ ರಿಹಾಯ್ ಮಂಚ್ ಮತ್ತು ಸಿಟಿಜನ್ಸ್ ಎಗೇನ್‌ಸ್ಟ್ ಹೇಟ್, ಕೆಲವು ಕಾನೂನು ವಿದ್ಯಾರ್ಥಿಗಳು ಮತ್ತು ಅಸ್ಸಾಂ ವಕೀಲರ ಸಂಘ ಸೇರಿದ್ದಾರೆ.

    ಸಿಎಎ ಕುರಿತ ಭಾರತೀಯ ಜನತಾ ಪಕ್ಷದ ನಿಲುವನ್ನು ಟೀಕಿಸಿದ ಓವೈಸಿ, ದೇಶದಲ್ಲಿ ಧರ್ಮದ ಆಧಾರದ ಮೇಲೆ ಕಾನೂನು ಮಾಡಲು ಯಾರಿಗೂ ಅವಕಾಶವಿಲ್ಲ ಎಂದು ಹೇಳಿದರು. ಇದು ಕೇವಲ ರಾಜಕೀಯ ಪಕ್ಷಗಳಿಗೆ ಸೀಮಿತವಾದ ವಿಚಾರವಲ್ಲ. ಇದು ಇಡೀ ದೇಶದ ವಿಚಾರ. 17 ಕೋಟಿ ಮುಸ್ಲಿಮರನ್ನು ದೇಶರಹಿತರನ್ನಾಗಿ ಮಾಡಲು ಬಿಜೆಪಿ ಬಯಸುತ್ತಿದೆಯೇ? ಇದು ಸಂವಿಧಾನದ ಮೂಲ ತತ್ವಗಳಿಗೆ ವಿರುದ್ಧವಾಗಿದೆ ಎಂದರು. 

    ಲೈವ್ ಪಂದ್ಯದ ವೇಳೆ ‘ಧಮ್’ ಹೊಡೆದ ಪಾಕ್ ಆಟಗಾರ; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ವಿಡಿಯೋ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts