ನೀಟ್ ಪರೀಕ್ಷೆ ರದ್ದಾಗುತ್ತಾ..? ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಇಂದು

sc
Published on

ನವದೆಹಲಿ: ಮೇ 5 ರಂದು ಪದವಿ ಪೂರ್ವ ವೈದ್ಯಕೀಯ ಕೋರ್ಸ್‌ಗಳಿಗೆ ನೀಟ್ ಪರೀಕ್ಷೆ ನಡೆದಿತ್ತು. ಅದರ ಫಲಿತಾಂಶಗಳನ್ನು ಜೂನ್ 4 ರಂದು ಪ್ರಕಟಿಸಲಾಯಿತು. 1,563 ವಿದ್ಯಾರ್ಥಿಗಳಿಗೆ ಕರುಣೆ ಅಂಕ ನೀಡಿದ್ದು ವಿವಾದಕ್ಕೆ ಕಾರಣವಾಗಿತ್ತು.

ಪ್ರಶ್ನೆ ಪತ್ರಿಕೆ ಸೋರಿಕೆ, ಪ್ರಶ್ನೆ ಪತ್ರಿಕೆ ಮಾರಾಟ ಹಾಗೂ 67 ವಿದ್ಯಾರ್ಥಿಗಳು ಪೂರ್ಣ ಅಂಕ ಪಡೆದಿರುವಂತಹ ಅಕ್ರಮಗಳು ನಡೆದಿವೆ ಎಂದು ಹೇಳಲಾಗಿದೆ.

ಹೀಗಾಗಿ ನೀಟ್ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸುವಂತೆ ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ಇನ್ನೂ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ನೀಟ್ ಪರೀಕ್ಷೆಯನ್ನು ರದ್ದುಗೊಳಿಸಬಾರದು ಎಂದು ಕೇಂದ್ರ ಸರ್ಕಾರ ಮತ್ತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರತಿ ಅರ್ಜಿ ಸಲ್ಲಿಸಿದೆ.

ಈ ಪ್ರಕರಣದಲ್ಲಿ ನೀಟ್ ಪರೀಕ್ಷೆಗೆ ಸಂಬಂಧಿಸಿದ ಎಲ್ಲ 38 ಅರ್ಜಿಗಳು ಜು.8 (ಸೋಮವಾರ) ಸುಪ್ರೀಂ ಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ಟಿ.ವೈ.ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಬರಲಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net