More

    ಪ್ರತಿಭಟನೆ ನಡೆಸಿದವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿರುವುದಕ್ಕೆ ಉತ್ತರಿಸುವಂತೆ ಯುಪಿ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ನೋಟಿಸ್​

    ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಆಸ್ತಿ ವಶಪಡಿಸಿಕೊಂಡಿರುವುದಕ್ಕೆ ಉತ್ತರ ನೀಡುವಂತೆ ಸುಪ್ರೀಂಕೋರ್ಟ್​ ಉತ್ತರ ಪ್ರದೇಶ ಸರ್ಕಾರಕ್ಕೆ ನೋಟಿಸ್​ ಜಾರಿ ಮಾಡಿದೆ.

    ಉತ್ತರ ಪ್ರದೇಶದಲ್ಲಿ ಡಿಸೆಂಬರ್​ನಲ್ಲಿ ಕಾಯ್ದೆ ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಗಲಭೆ ಸಂಭವಿಸಿತ್ತು. ಇದಕ್ಕೆ ಪ್ರತೀಕಾರವಾಗಿ ಉತ್ತರ ಪ್ರದೇಶ ಸರ್ಕಾರ ಪ್ರತಿಭಟನೆಯಲ್ಲಿ ಪಾಲ್ಗೊಂಡವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಇದನ್ನು ಪ್ರಶ್ನಿಸಿ ವಕೀಲ ಪರ್ವೇಜ್​ ಆರಿಫ್ ಟಿಟು ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ ಉತ್ತರಿಸುವಂತೆ ನೋಟಿಸ್​ ಜಾರಿ ಮಾಡಿದೆ.

    ರಾಜಕೀಯ ಕಾರಣಗಳಿಂದ ಪ್ರತಿಭಟನಾಕಾರರ ಮೇಲೆ ಪ್ರತೀಕಾರಕ್ಕೆ ಸಿಎಂ ಯೋಗಿ ಆದಿತ್ಯನಾಥ್ ಮುಂದಾಗಿದ್ದಾರೆ. ಒಂದು ನಿರ್ಧಿಷ್ಟ ಸಮುದಾಯದ ಜನರ ಆಸ್ತಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

    ಪ್ರತಿಭಟನೆ ವೇಳೆ ನಡೆದ ಹಿಂಸಾಚಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸುವಂತೆ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಅವರು ಕೋರ್ಟ್​ಗೆ ಮನವಿ ಮಾಡಿದ್ದಾರೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts