More

    ಕರ್ನಾಟಕಕ್ಕೆ ಸುಪ್ರೀಂ ಶಾಕ್​: 15 ದಿನಗಳವರೆಗೆ ನಿತ್ಯ 5 ಸಾವಿರ ಕ್ಯೂಸೆಕ್​ ನೀರು ಹರಿಸಲು ಆದೇಶ

    ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮತ್ತು ತಮಿಳುನಾಡಿನಿಂದ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಪ್ರತಿದಿನ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸಲು ಕರ್ನಾಟಕಕ್ಕೆ ಇಂದು (ಸೆ.21) ಆದೇಶಿಸಿದೆ.

    ಮುಂದಿನ 15 ದಿನಗಳವರೆಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್​ ನೀರನ್ನು ತಮಿಳುನಾಡಿಗೆ ಹರಿಸುವಂತೆ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶಿಸಿದೆ.

    ನ್ಯಾಯಾಲಯ ಇಂದು ಬೆಳಗ್ಗೆ 10.30ಕ್ಕೆ ವಿಚಾರಣೆ ಆರಂಭಿಸಿತು. ತಮಿಳುನಾಡು ಪರ ವಕೀಲರಾದ ಮುಕುಲ್​ ರೋಹಟಗಿ ಮತ್ತು ಕರ್ನಾಟಕದ ಪರ ವಕೀಲ ಶ್ಯಾಮ್​ ದಿವಾನ್​ ತಮ್ಮ ತಮ್ಮ ವಾದವನ್ನು ಮಂಡಿಸಿದರು.

    ಪ್ರಸ್ತುತ ನೀರಿನ ಸಂಕಷ್ಟ ಇದೆ ಅನ್ನೋದು ಎಲ್ಲರಿಗೂ ಗೊತ್ತಿದೆ. ಆದರೆ, ಸಂಕಷ್ಟ ಸೂತ್ರವನ್ನು ಕರ್ನಾಟಕ ಪಾಲಿಸುತ್ತಿಲ್ಲ. ನಾವು ಬಹಳಷ್ಟು ಕಡಿಮೆ ನೀರನ್ನು ಪಡೆಯುತ್ತಿದ್ದೇವೆ ಎಂದು ತಮಿಳುನಾಡು ಪರ ವಕೀಲ ಮುಕುಲ್​ ರೋಹಟಗಿ ವಾದ ಮಂಡನೆ ಮಾಡಿದರು.

    ಕರ್ನಾಟಕ ಪರ ವಾದ ಮಂಡಿಸಿದ ಶ್ಯಾಮ್​ ದಿವಾನ್​, ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶವನ್ನು ನಾವು ಪಾಲಿಸಿದ್ದೇವೆ ಎಂದರು.

    ವಾದ-ವಿವಾದಗಳನ್ನು ಆಲಿಸಿದ ಬಳಿಕ ಬಿ.ಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿತು.

    ಕಾವೇರಿದು ಅದೇ ನಿಷ್ಠೆ, ತಜ್ಞರು ಸಮೀಕ್ಷೆ ನಡೆಸುತ್ತಲೇ ಇದ್ದಾರೆ: ನಿರ್ದೇಶಕ ಮಂಜು ಮಾಂಡವ್ಯ ಪೋಸ್ಟ್​ ವೈರಲ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts