More

  ಜಾತಿ ಗಣತಿ ವರದಿ ಪ್ರಕಟಿಸುವುದನ್ನು ತಡೆಯಲಾಗದು: ಸುಪ್ರೀಂಕೋರ್ಟ್​ನಲ್ಲಿ ಬಿಹಾರ ಸರ್ಕಾರಕ್ಕೆ ರಿಲೀಫ್​

  ಪಟನಾ: ಜಾತಿ ಗಣತಿ ವರದಿ ಬಿಡುಗಡೆ ಮಾಡಿದ ವಿಚಾರದಲ್ಲಿ ಬಿಹಾರ ಸರ್ಕಾರ ಸುಪ್ರೀಂಕೋರ್ಟ್​ನಲ್ಲಿ ಮುನ್ನಡೆ ಸಾಧಿಸಿದೆ. ಸರ್ಕಾರದ ನೀತಿ ನಿರ್ಧಾರಗಳಲ್ಲಿ ನಾವು ಮಧ್ಯ ಪ್ರವೇಶ ಮಾಡುವುದಿಲ್ಲ ಎಂದು ಉನ್ನತ ನ್ಯಾಯಾಲಯ ಶುಕ್ರವಾರ (ಅ.6) ತಿಳಿಸಿದೆ.

  ಜಾತಿ ವರದಿ ಬಿಡುಗಡೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಸರ್ಕಾರವು ಜಾತಿ ಗಣತಿಯ ಮಾಹಿತಿಯನ್ನು ಪ್ರಕಟಿಸುವುದನ್ನು ತಡೆಯವುದಿಲ್ಲ. ರಾಜ್ಯ ಸರ್ಕಾರ ಅಥವಾ ಯಾವುದೇ ಸರ್ಕಾರ ನಿರ್ಧಾರ ತೆಗೆದುಕೊಳ್ಳುವುದನ್ನು ತಡೆಯಲು ಸಾಧ್ಯವಿಲ್ಲ. ಅದು ತಪ್ಪಾಗುತ್ತದೆ. ಆದರೆ, ಜಾತಿ ಆಧಾರಿತ ಸಮೀಕ್ಷೆಯ ದತ್ತಾಂಶಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಯನ್ನು ಪರಿಗಣಿಸುತ್ತೇವೆ ಎಂದು ನ್ಯಾಯಾಲಯ ಹೇಳಿದೆ.

  ರಾಜ್ಯದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಸಂಬಂಧಿಸಿದ ಮನವಿಯ ಕುರಿತು ಸುಪ್ರೀಂ ಕೋರ್ಟ್ ಬಿಹಾರ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ್ದು, ಜನವರಿ 2024ಕ್ಕೆ ಮುಂದಿನ ವಿಚಾರಣೆಯನ್ನು ಪಟ್ಟಿ ಮಾಡಿದೆ ಮತ್ತು ರಾಜ್ಯದಲ್ಲಿ ಜಾತಿವಾರು ಸಮೀಕ್ಷೆಯ ಅಂಕಿ-ಅಂಶಗಳ ಪ್ರಕಟಣೆಯಿಂದಾಗಿ ಉದ್ಭವಿಸಿರುವ ಸಮಸ್ಯೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

  ಇದನ್ನೂ ಓದಿ: ನಮ್ಮ ಮೆಟ್ರೋದಲ್ಲಿ ಗೋಬಿ ತಿಂದವನಿಗೆ 500 ರೂ. ದಂಡ!; ಮೆಟ್ರೋದಲ್ಲಿ ಯಾಕೆ ಆಹಾರ ಸೇವನೆ ಮಾಡಬಾರದು….

  ಕೆಲವು ಅಂಕಿ-ಅಂಶಗಳನ್ನು ಪ್ರಕಟಿಸುವ ಮೂಲಕ ರಾಜ್ಯ ಸರ್ಕಾರವು ತಡೆಯಾಜ್ಞೆಗೆ ಮುನ್ನುಡಿ ಬರೆದಿದೆ ಮತ್ತು ದತ್ತಾಂಶಗಳ ಹೆಚ್ಚಿನ ಪ್ರಕಟಣೆಗೆ ಸಂಪೂರ್ಣ ತಡೆಯಾಜ್ಞೆ ನೀಡಬೇಕು ಎಂಬ ಅರ್ಜಿದಾರರ ಆಕ್ಷೇಪವನ್ನು ನ್ಯಾಯಾಲಯ ತಳ್ಳಿಹಾಕಿದೆ

  ಕಳೆದ ವಾರ ಬಿಡುಗಡೆ ಮಾಡಿದ ಜಾತಿ ಗಣತಿ ವರದಿಯಲ್ಲಿ ರಾಜ್ಯದ 13.1 ಕೋಟಿ ಜನಸಂಖ್ಯೆಯಲ್ಲಿ 36% ಅತ್ಯಂತ ಹಿಂದುಳಿದ ವರ್ಗಗಳಿಗೆ, 27.1% ಹಿಂದುಳಿದ ವರ್ಗಗಳಿಗೆ, 19.7% ಪರಿಶಿಷ್ಟ ಜಾತಿಗಳಿಗೆ ಮತ್ತು 1.7% ಪರಿಶಿಷ್ಟ ಪಂಗಡಗಳಿಗೆ ಸೇರಿದೆ ಎಂದು ಬಿಹಾರ ಸರ್ಕಾರ ಹೇಳಿದೆ. ಅಲ್ಲದೆ, ಸಾಮಾನ್ಯ ಜನಸಂಖ್ಯೆಯು 15.5% ರಷ್ಟಿದೆ ಎಂದು ತಿಳಿಸಿದೆ. (ಏಜೆನ್ಸೀಸ್​)

  ಭಾವನಾತ್ಮಕ ಕ್ಷಣಕ್ಕೆ ಸಾಕ್ಷಿಯಾಗಲಿದೆ ಭಾರತ-ಪಾಕ್​ ಪಂದ್ಯ: 2 ವರ್ಷದ ಮೊಮ್ಮೊಗಳನ್ನು ಮುದ್ದಾಡುವ ತವಕ ​

  ವಿಪತ್ತು ಪರಿಹಾರ ನಿಧಿ: ದೇಣಿಗೆ ನೀಡಿದ ನಂತರ ಹಿಮಾಚಲ ಪ್ರದೇಶ ಸರ್ಕಾರದ ವಿರುದ್ಧ ಕಂಗನಾ ಗರಂ ಆಗಿದ್ದೇಕೆ?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts