More

    ರೈತರಿಗೆ ಪರಿಹಾರ ಕೊಡಿಸಲು ಕಾಂಗ್ರೆಸ್‌ನಿಂದ ‘ಸುಪ್ರೀಂ’ ಹೋರಾಟ

    ಮುಂಡರಗಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಾದ ಬರ ಪರಿಹಾರ ನೀಡುವಲ್ಲಿ ಸ್ಪಂದಿಸುತ್ತಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರವು ರೈತರ ಪರವಾಗಿ ಕೆಲಸ ಮಾಡುತ್ತಿದೆ. ಸುಪ್ರೀಂ ಕೋರ್ಟ್ ಮೂಲಕ ಕೇಂದ್ರ ಸರ್ಕಾರಕ್ಕೆ ಛೀಮಾರಿ ಹಾಕಿಸಿ, ರೈತರಿಗೆ ಬರ ಪರಿಹಾರ ಕೊಡಿಸಲು ಹೋರಾಟವನ್ನೇ ನಡೆಸಿದೆ ಎಂದು ಹಾವೇರಿ- ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
    ತಾಲೂಕಿನ ಹಾರೋಗೇರಿ ಗ್ರಾಮದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಹಿನ್ನೆಲೆ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಗ್ರಾಪಂ ವ್ಯಾಪ್ತಿಯ ಕಾಂಗ್ರೆಸ್ ಪ್ರಮುಖರ, ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
    ಕಾಂಗ್ರೆಸ್ ಚುನಾವಣೆ ಪೂರ್ವದಲ್ಲಿ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದುಕೊಂಡಿದೆ. ಹೀಗಾಗಿ ನನಗೆ ಮತ ನೀಡಿ ಆಶೀರ್ವದಿಸಬೇಕು. ಲೋಕಸಭೆಯಲ್ಲಿ ತಮ್ಮೆಲ್ಲರ ಧ್ವನಿಯಾಗಿ ನಿಮ್ಮೆಲ್ಲರ ಪ್ರಗತಿಗಾಗಿ ಕೆಲಸ ಮಾಡುತ್ತೇನೆ. ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲರ ಮನೆಗೆ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸುವ ಕೆಲಸ ಪ್ರಾಮಾಣಿಕವಾಗಿ ಮಾಡಿದೆ. ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬರುವುದು ನಿಶ್ಚಿತ. ಮಹಾಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ವರ್ಷಕ್ಕೆ 1 ಲಕ್ಷ ರೂ., ರೈತರ ಸಾಲಮನ್ನಾ, ಮತ್ತಿತರ ಜನಪರ ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಭರವಸೆ ನೀಡಿದರು.
    ರೋಣ ಶಾಸಕ ಜಿ.ಎಸ್.ಪಾಟೀಲ ಮಾತನಾಡಿ, ಕಾಂಗ್ರೆಸ್ ಕಾರ್ಯಕರ್ತರು ಜವಾಬ್ದಾರಿಯಿಂದ ಚುನಾವಣೆಯನ್ನು ಎದುರಿಸಬೇಕು. ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಜನರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ. ಕಾಂಗ್ರೆಸ್ ರಾಜ್ಯದಲ್ಲಿ ಚುನಾವಣೆಗೆ ಮುಂಚೆ ನೀಡಿದ್ದ ಭರವಸೆಗಳನ್ನು ಈಡೇರಿಸಿದೆ. ಕಳೆದ 10 ತಿಂಗಳಲ್ಲಿ 39 ಸಾವಿರ ಕೋಟಿ ರೂ. ಐದು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡಿದೆ. 58 ಸಾವಿರ ಕೋಟಿ ರೂ. ಗ್ಯಾರಂಟಿ ಯೋಜನೆಗೆ ಬಜೆಟ್‌ನಲ್ಲಿ ಮೀಸಲಿಟ್ಟಿದೆ. ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಬರಲಿದ್ದು, ರೈತಸಾಲ ಮನ್ನಾ, ರೈತರ ಬೆಳೆಗೆ ವೈಜ್ಞಾನಿಕ ಬೆಂಬಲ ಬೆಲೆಯ ಶಾಸನ ಮಾಡುವುದು, ಮಹಾಲಕ್ಷಿ ಯೋಜನೆ ಮೊದಲಾದ ಪ್ರಮುಖ ಕಾರ್ಯಕ್ರಮ ಜಾರಿಗೊಳಿಸಲಾಗುತ್ತದೆ ಎಂದರು.
    ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಕಳೆದ ಚುನಾವಣೆಯಲ್ಲಿ ರಾಜ್ಯದಿಂದ 27 ಲೋಕಸಭಾ ಸದಸ್ಯರು ಆಯ್ಕೆಯಾಗಿದ್ದರು. ರಾಜ್ಯದ ಅಭಿವೃದ್ಧಿಗೆ ಅನುದಾನ ತರಲಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಅಭಿವೃದ್ಧಿ ಕೆಲಸ ನಡೆಯುತ್ತಿವೆ. ಕೇಂದ್ರದ ರಾಜ್ಯದ ಪಾಲಿನ ತೆರಿಗೆ ಹಣ ನೀಡಲಿಲ್ಲ. ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ನೀಡಬೇಕು ಎಂದರು.
    ಕಾಂಗ್ರೆಸ್ ಪ್ರಮುಖ ಟಿ.ಬಿ. ಮೇಟಿ ಮಾತನಾಡಿದರು. ಇದಕ್ಕೂ ಮುನ್ನ ಹಿರೇವಡ್ಡಟ್ಟಿ, ನಂತರ ಪೇಠಾಲೂರ, ಹಳ್ಳಿಕೇರಿ, ಡೋಣಿ, ಡಂಬಳ ಗ್ರಾಮದಲ್ಲಿ ವಿವಿಧ ಗ್ರಾಪಂ ವ್ಯಾಪ್ತಿ ಕಾಂಗ್ರೆಸ್ ಪ್ರಮುಖರ, ಕಾರ್ಯಕರ್ತರ ಸಭೆ ನಡೆಸಿದರು. ಡಿ.ಡಿ. ಮೋರನಾಳ, ಎಸ್.ಡಿ. ಮಕಾಂದಾರ, ಪೂಜಾ ಕಮ್ಮಾರ, ಶೋಭಾ ಮೇಟಿ, ಸೀತಾ ಬಸಾಪೂರ, ವಿ.ಆರ್. ಗುಡಿಸಾಗರ, ವಿಜಯಲಕ್ಷ್ಮೀ ಪಾಟೀಲ, ಭುವನೇಶ್ವರಿ ಕಲ್ಲಕುಟಗರ, ಡಿ.ಎಂ. ಕಾತರಕಿ, ಮಂಜುನಾಥ ಮುಂಡವಾಡ, ಶೇಖರ ಜುಟ್ಲಣ್ಣವರ, ಯಲ್ಲಪ್ಪ ಹುಲಗೇರಿ, ಪುಲಕೇಶಗೌಡ ಪಾಟೀಲ, ಎಂ.ಯು. ಮಕಾಂದಾರ, ರವೀಂದ್ರ ಜವಿ, ಬಸೀರ ವಡ್ಡಟ್ಟಿ, ಅಮರೇಶ ಹಿರೇಮಠ, ಮಂಜವ್ವ ವಡ್ಡರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts