More

    ಸುಪ್ರೀಂ ಕೋಟ್ ಹಾಗೂ ನ್ಯಾಯಾಧೀಶರಿಗೆ ಸಾಷ್ಟಾಂಗ ನಮನ: ಡಿಕೆಶಿ

    ಬೆಂಗಳೂರು:
    ನನ್ನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ರಿಲ್ೀ ಕೊಟ್ಟಿದೆ ಎಂಬ ಮಾಹಿತಿ ಬಂದಿದ್ದು, ಸುಪ್ರೀಂ ಕೋರ್ಟ್ ಹಾಗೂ ನ್ಯಾಯಾಧೀಶರಿಗೆ ಸಾಷ್ಟಾಂಗ ನಮನಗಳನ್ನು ಸಲ್ಲಿಸುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿ, ನ್ಯಾಯ ಪೀಠದಿಂದ ಅನ್ಯಾಯ ಆಗುವುದಿಲ್ಲ ಎಂದು ನಂಬಿದ್ದೆ. ಅದರಂತೆ ನ್ಯಾಯ ಸಿಕ್ಕಿದ್ದು ಸಂತೋಷವಾಗಿದೆ. ನನ್ನ ಪರವಾಗಿ ನಿಂತ ನಮ್ಮ ನಾಯಕರು, ಸ್ನೇಹಿತರು, ನನಗೆ ಒಳ್ಳೆಯದನ್ನು ಬಯಸಿದ ಹಿತೈಷಿಗಳಿಗೆ ಧನ್ಯವಾದ ಅರ್ಪಿಸುತ್ತೇನೆ ಎಂದರು.
    ನ್ಯಾಯಾಲಯದ ಆದೇಶ ಪ್ರತಿ ಸಿಕ್ಕ ನಂತರ ವಿವರವಾಗಿ ಮಾತನಾಡುವೆ. ನನ್ನ ಕಷ್ಟದ ದಿನಗಳಲ್ಲಿ ಸಿಕ್ಕ ಅತ್ಯಂತ ಸಂತೋಷದ ದಿನ ಎಂದರು.
    ಸಿಬಿಐನವರು ಈಗಲೂ ಏನೆಲ್ಲಾ ಮಾಡುತ್ತಿದ್ದಾರೆ ಎಂದು ಸದ್ಯದಲ್ಲೇ ಬಹಿರಂಗಪಡಿಸುತ್ತೇನೆ. ಈ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸುವ ಪ್ರಯತ್ನ ನಡೆಯುತ್ತಿದೆಯಂತೆ. ಅವರು ಮೇಲ್ಮನವಿ ಹಾಕಲಿ. ಅವರು ಎಲ್ಲಾ ರೀತಿಯ ಹೋರಾಟ ಮಾಡಲಿ. ನಾನು ಸಿದ್ಧನಿದ್ದೇನೆ ಎಂದರು.
    ನಾನು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ನನ್ನ ಮನೆ ಮೇಲೆ ಐಟಿ ದಾಳಿ ನಡೆದ ಮೊದಲ ದಿನದಿಂದಲೂ ನಾನು ಆತ್ಮವಿಶ್ವಾಸದಿಂದ ಎದುರಿಸಿದ್ದೆ. ಅವರು ಎಷ್ಟು ತೊಂದರೆ ಕೊಡಲು ಪ್ರಯತ್ನಿಸುತ್ತಾರೋ ನಾನು ರಾಜಕೀಯವಾಗಿ ಅಷ್ಟೇ ಎತ್ತರಕ್ಕೆ ಬೆಳೆಯುತ್ತೇನೆ ಎಂಬ ವಿಶ್ವಾಸವಿದೆ. ಸರ್ಕಾರ ತನಿಖೆಯ ಅನುಮತಿ ಹಿಂಪಡೆಡಿದ್ದರೂ ಸಿಬಿಐ ನನ್ನ ಆಪ್ತರಿಗೆ ಕಿರುಕುಳ ಮುಂದುವರಿಸಿದೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದರು.
    ನನಗೆ ಯಾರೂ ವಿರೋಧಿಗಳಿಲ್ಲ. ಇದು ಪ್ರಕೃತಿ ನಿಯಮ. ನಮಗೆ ತೊಂದರೆ ಕೊಡುವವರೆಲ್ಲರೂ ನಮಗೆ ಒಂದು ರೂಪ ನೀಡುತ್ತಿರುತ್ತಾರೆ. ಕಲ್ಲು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ. ನಮಗೆ ಇಂತಹ ಏಟು ಬಿದ್ದಾಗ ನಾವು ಉತ್ತಮ ರೂಪ ಪಡೆಯುತ್ತೇವೆ ಎಂದರು.

    ಇ- ಮೇಲ್ ಬೆದರಿಕೆ
    ಮೂರು ದಿನಗಳ ಹಿಂದೆಯೇ ಇ ಮೇಲ್ ಬೆದರಿಕೆ ಬಂದಿದ್ದು, ಇದನ್ನು ಬಹಿರಂಗಗೊಳಿಸಿರಲಿಲ್ಲ. ಈ ಬಗ್ಗೆ ತನಿಖೆ ನಡೆಸಲು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇವೆ ಎಂದು ತಿಳಿಸಿದರು.
    ಶಾಹಿರ್ ಖಾನ್ 10786 ಎಂಬ ಇ ಮೇಲ್ ಮೂಲಕ ನಮಗೆ 5 ಮಿಲಿಯನ್ ಡಾಲರ್ ಹಣ ಹಾಕದಿದ್ದರೆ ಬಸ್, ರೈಲು, ದೇವಾಲಯ, ಹೋಟೆಲ್ ಸೇರಿದಂತೆ ಕರ್ನಾಟಕದಾದ್ಯಂತ ಸ್ಫೋಟ ನಡೆಸುತ್ತೇವೆ. ಅಂಬಾರಿ ಉತ್ಸವ್ ಬಸ್ ಸ್ಫೋಟಗೊಳಿಸಿ ಮತ್ತೊಂದು ಟ್ರೇಲರ್ ತೋರಿಸುತ್ತೇವೆ. ನಂತರ ನಮ್ಮ ಬೇಡಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ತಿಳಿಸುತ್ತೇವೆ ಎಂದು ಎರಡು ಮೇಲ್ ಗಳಲ್ಲಿ ತಿಳಿಸಿದ್ದಾನೆ ಎಂದರು.
    ಇದು ಬೋಗಸ್ ಅಥವಾ ನಿಜವೋ ಗೊತ್ತಿಲ್ಲ. ನಾವು ಮೇಲ್ ಬಂದ ಕೂಡಲೇ ಪೊಲೀಸರಿಗೆ ಕಳುಹಿಸಿದ್ದು ಅವರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts