More

    ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಮತ್ತೊಂದು ಕುಡಿ ರಾಜ್ಯ ರಾಜಕಾರಣಕ್ಕೆ; ವಿಧಾನ ಪರಿಷತ್ ಅಭ್ಯರ್ಥಿಯಾಗಿ ಮೊಮ್ಮಗ…

    ಬೆಂಗಳೂರು: ಮಾಜಿ ಪ್ರಧಾನಿ ಎಚ್​.ಡಿ. ದೇವೇಗೌಡರ ಕುಟುಂಬದಿಂದ ಮತ್ತೊಂದು ಕುಡಿ ರಾಜ್ಯ ರಾಜಕಾರಣಕ್ಕೆ ಅಧಿಕೃತವಾಗಿ ಪ್ರವೇಶಿಸಿದ್ದು, ವಿಧಾನ ಪರಿಷತ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ದೇವೇಗೌಡರ ಮತ್ತೊಬ್ಬ ಮೊಮ್ಮಗ ಅಧಿಕೃತವಾಗಿ ರಾಜಕಾರಣಕ್ಕೆ ಪ್ರವೇಶ ಮಾಡಿದಂತಾಗಿದೆ.

    ಹಾಸನದ ಸಂಸದ ಪ್ರಜ್ವಲ್ ರೇವಣ್ಣ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಈ ಮಾಹಿತಿಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಮಾಜಿ ಸಚಿವ ಎಚ್​.ಡಿ. ರೇವಣ್ಣ-ಭವಾನಿ ದಂಪತಿಯ ಹಿರಿಯ ಪುತ್ರ ಡಾ. ಸೂರಜ್ ರೇವಣ್ಣ ವಿಧಾನ ಪರಿಷತ್​ನ ಹಾಸನ ಜೆಡಿಎಸ್​ ಅಭ್ಯರ್ಥಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ, ಸಂಸದ ಪ್ರಜ್ವಲ್ ರೇವಣ್ಣ, ಅರಸೀಕೆರೆ ಶಾಸಕ ಶಿವಲಿಂಗೇಗೌಡ ಮತ್ತು ಜೆಡಿಎಸ್​​ನ ಎಲ್ಲ ಶಾಸಕರು ಹಾಜರಿದ್ದರು.

    ಇದನ್ನೂ ಓದಿ: ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್​ಫೋನ್​ ಸ್ವಿಚ್ಡ್​ ಆಫ್ ಮಾಡಿ ಪರಾರಿ

    ಇದು ಎಲ್ಲರ ಒಕ್ಕೊರಲಿನ ತೀರ್ಮಾನ. ಡಾ. ಸೂರಜ್​ ನಾಳೆ ಮಧ್ಯಾಹ್ನ 12 ಗಂಟೆಗೆ ನಾಮಪತ್ರ ಸಲ್ಲಿಸುತ್ತಾರೆ. ಭವಾನಿ ರೇವಣ್ಣ ಅವರು ಅಭ್ಯರ್ಥಿ ಆಗಬೇಕು ಎನ್ನುವ ಒತ್ತಡವಿತ್ತು. ಆದರೆ ಮಗನಿಗೆ ಸಿಗುವುದಾದರೆ ಆತನೇ ಸ್ಪರ್ಧಿಸಲಿ ಎಂದು ಆಕೆ ಹಿಂದೆ ಸರಿದರು. ಮುಂದೆ ಮಹಿಳಾ ಮೀಸಲಾತಿ ಬರಲಿದೆ, ಆಗ ನೋಡೋಣ ಎಂದು ಎಚ್.ಡಿ. ರೇವಣ್ಣ ಪ್ರತಿಕ್ರಿಯಿಸಿದ್ದಾರೆ.

    ಈತನ ಹುಟ್ಟೇ ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​; ತಾಯಿ ಗರ್ಭದಿಂದ ಇವನಿಗಿಂತಲೂ ಬೇಗ ಬಂದು ಇನ್ನೂ ಬದುಕಿರುವವರೇ ಇಲ್ಲ!

    ಸಿದ್ದರಾಮಯ್ಯ ಅವರಿಗೆ ಮತ್ತೆ ಕಾಗೆ ಕಂಟಕ?; ಈ ಬಾರಿ ಕಚೇರಿ ಬಳಿಗೇ ಬಂದು ಕುಳಿತ ಕಾಕ!

    ಮದ್ವೆ ಆದ್ಮೇಲೆ ಫಸ್ಟ್​ನೈಟಲ್ಲಿ ಏನ್ಮಾಡ್ತಾರೆ, ಅದ್ನೇ ಮಾಡಿದ್ದೀವಿ..: ನಟಿ ರಚಿತಾ ರಾಮ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts