ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಸುರೇಶ್‌ ಬಾಬು ಆಯ್ಕೆ!

babu
Published on

ಬೆಂಗಳೂರು: ಚಿಕ್ಕನಾಯಕಹಳ್ಳಿ ಶಾಸಕ ಸಿ.ಬಿ ಸುರೇಶ್ ಬಾಬು ಅವರನ್ನು ಜೆಡಿಎಸ್​ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ದೆ ಮಾಡಲಾಗಿದೆ. ವಿಧಾನಸಭಾಧ್ಯಕ್ಷ ಯುಟಿ ಖಾದರ್ ಈ ಮಾಹಿತಿಯನ್ನು ಸದನದಲ್ಲಿ ಇಂದು ಘೋಷಿಸಿದರು.

ಈ ಹಿಂದೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದ ಎಚ್ ಡಿ ಕುಮಾರಸ್ವಾಮಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ಕೇಂದ್ರ ಸಚಿವರಾಗಿದ್ದಾರೆ.

ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿದ್ದರು. ಅಧಿಕೃತ ಬಿಜೆಪಿ ಪ್ರತಿಪಕ್ಷವಾಗಿದ್ದರೂ, ಕುಮಾರಸ್ವಾಮಿ ಹೇಳಿಕೆಗಳು ಸದನದಲ್ಲಿ ಹೆಚ್ಚು ಮಹತ್ವ ಪಡೆದುಕೊಂಡಿದ್ದವು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ರಾಜಕಾರಣ ನಡೆಯುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದು, ಕೇಂದ್ರ ಸರಕಾರದಲ್ಲಿ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವರಾಗಿದ್ದಾರೆ.

ಕುಮಾರಸ್ವಾಮಿ ಅವರ ಪತ್ರದ ಕುರಿತು ಪ್ರಕಟಿಸಿದ ಸಭಾಧ್ಯಕ್ಷರು ಸುರೇಶ್ ಬಾಬು ಅವರನ್ನು ಜೆಡಿಎಸ್ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಿರುವುದನ್ನು ಮಾನ್ಯ ಮಾಡಲಾಗಿದೆ. ರಾಜ್ಯ ವಿಧಾನ ಪರಿಷತ್‌ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ನೈಋತ್ಯ ಶಿಕ್ಷಕರ ಕ್ಷೇತ್ರದ ಸದಸ್ಯರಾದ ಎಸ್.ಎಲ್.ಭೋಜೇಗೌಡ ನೇಮಕಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net