

ಕರೊನಾ ಸೋಂಕಿಗೆ ಒಳಗಾಗಿ, ಆಸ್ಪತ್ರೆಗೆ ದಾಖಲಾಗಿದ್ದ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ನಿನ್ನೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆದರೆ ಸಂಪೂರ್ಣವಾಗಿ ಗುಣಮುಖರಾಗಿಲ್ಲ ಎಂದು ತಮ್ಮ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಅಕ್ಟೋಬರ್ 5ರಂದು ನನ್ನಲ್ಲಿ ಕರೊನಾ ಸೋಂಕು ದೃಢಪಟ್ಟಿತ್ತು. ಆಗ ನಾನು ಹೋಂ ಐಸೋಲೇಶನ್ಗೆ ಒಳಗಾಗಿ, ವೈದ್ಯರು ಸೂಚಿಸಿದ್ದ ಔಷಧಗಳನ್ನು ತೆಗೆದುಕೊಳ್ಳುತ್ತಿದ್ದೆ. ಆದರೆ ಅಕ್ಟೋಬರ್ 10ರಂದು ನನ್ನ ಮನೆಗೆ ಬಂದ ವೈದ್ಯರೋರ್ವರು ನನ್ನ ಉಸಿರಾಟದಲ್ಲಿ ವ್ಯತ್ಯಾಸ ಆಗುತ್ತಿರುವುದನ್ನು ಗಮನಿಸಿ ತಕ್ಷಣ ಪರೀಕ್ಷೆಗೆ ಒಳಗಾಗಿ ಎಂದರು. ಅವರ ಸೂಚನೆ ಮೇರೆಗೆ ಸಿಟಿ ಸ್ಕ್ಯಾನ್ಗೆ ಒಳಗಾದೆ.
ಆಗ ನನ್ನ ಶ್ವಾಸಕೋಶಕ್ಕೆ ಸ್ವಲ್ಪ ಹೆಚ್ಚಿನ ಪ್ರಮಾಣದಲ್ಲಿಯೇ ಸೋಂಕು ತಗುಲಿರುವುದು ಗೊತ್ತಾಯಿತು. ನನಗೆ ಇನ್ನೂ ಎರಡೂ ವಾರ ಎಲ್ಲಿಯೂ ಹೋಗಬಾರದು ಎಂಬ ಷರತ್ತಿನ ಮೇಲೆ ಬಿಡುಗಡೆ ಮಾಡಿದ್ದಾರೆ. ನಾನಿನ್ನು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತೇನೆ ಎಂದಿದ್ದಾರೆ.